ರಾಯ್ ಬರೇಲಿಯಲ್ಲಿ ಇಂದು ಸೋನಿಯಾ ಗಾಂಧಿ ನಾಮಪತ್ರ ಸಲ್ಲಿಕೆ
ಲಕ್ನೋ, ಏ.11: ಉತ್ತರ ಪ್ರದೇಶದ ರಾಯ್ ಬರೇಲಿಯಲ್ಲಿ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ(72) ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
1 9ವರ್ಷಗಳ ಕಾಲ ಕಾಂಗ್ರೆಸ್ ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. 2017ರಲ್ಲಿ ಅವರು ಪಕ್ಷದ ಜವಾಬ್ದಾರಿಯನ್ನು ಪುತ್ರ ರಾಹುಲ್ ಗಾಂಧಿಗೆ ವಹಿಸಿಕೊಟ್ಟರು. ಸದ್ಯ ಯುಪಿಎ ಚೇರ್ಮನ್ ಆಗಿ ಸೋನಿಯಾ ಗಾಂಧಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಮೈತ್ರಿ ಪಕ್ಷಗಳ ಜತೆ ಸಂಪರ್ಕ ಸಂಪನ್ಮೂಲ ವ್ಯಕ್ತಿಯಾಗಿ ಸೋನಿಯಾ ಇದ್ದಾರೆ.
ಸೋನಿಯಾ ಅವರು ನಾಮಪತ್ರ ಸಲ್ಲಿಕೆಗೂ ಮುನ್ನ ರಾಯ್ ಬರೇಲಿಯಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಎಲ್‌ಕೆಪಿ ಸಿಂಗ್ ತಿಳಿಸಿದ್ದಾರೆ.

ಪಕ್ಷದ ಕೇಂದ್ರ ಕಚೇರಿಯಲ್ಲಿ ಹವನವನ್ನೂ ನಡೆಸಲಿದ್ದಾರೆ. ಸೋನಿಯಾ ಅವರ ವಿರುದ್ಧ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರು ಕಣದಲ್ಲಿದ್ದಾರೆ. ಒಂದು ವಾರದ ಹಿಂದಷ್ಟೇ ದಿನೇಶ್ ಪ್ರತಾಪ್ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಸೋನಿಯಾ ಗಾಂಧಿ 2014ರಲ್ಲಿ 5,26,434 ಮತಗಳನ್ನು ಗಳಿಸಿದ್ದರು.












Click it and Unblock the Notifications