ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪ್ಪನ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಗೆ ಸೇರಿಸಿದ ಅಖಿಲೇಶ್

|
Google Oneindia Kannada News

ಲಕ್ನೋ, ಮಾರ್ಚ್ 25: 2019ರ ಲೋಕಸಭೆ ಚುನಾವಣೆಗಾಗಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದಾಗ ಎಸ್ ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಅವರ ಕ್ಷೇತ್ರಕ್ಕೆ ಮಗ ಅಖಿಲೇಶ್ ಹೆಸರು ನೀಡಲಾಗಿತ್ತು. ಜೊತೆಗೆ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲೂ ಮುಲಾಯಂ ಹೆಸರಿರಲಿಲ್ಲ. ಈ ಬಗ್ಗೆ ಸಾಕಷ್ಟು ಊಹಾ ಪೋಹ ಸುದ್ದಿಗಳು ಹಬ್ಬಲು ಆರಂಭಿಸಿದ್ದಂತೆ ಎಚ್ಚೆತ್ತುಕೊಂಡ ಎಸ್ಪಿ, ಮುಲಾಯಂ ಅವರ ಹೆಸರನ್ನು ಪಟ್ಟಿಗೆ ಸೇರಿಸಿದೆ.

ಸಮಗ್ರ ಮಾಹಿತಿಯುಳ್ಳ ಲೋಕಸಭೆ ಚುನಾವಣೆಯ ವಿಶೇಷ ಪುಟ

ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರು ಸ್ಪರ್ಧಿಸುತ್ತಿದ್ದ ಆಜಂಗಢ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. 2014ರಲ್ಲಿ ಅಜಂಗಢದಲ್ಲಿ ಲೋಕಸಭಾ ಕ್ಷೇತ್ರದಲ್ಲಿ ಮುಲಾಯಂ ಸಿಂಗ್ ಯಾದವ್ ಅವರು ಗೆಲುವು ಸಾಧಿಸಿದ್ದರು. ಈ ಬಾರಿ ಮುಲಾಯಂ ಅವರು ಮೈನ್ ಪುರಿ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಎರಡು ಬಾರಿ ಸಂಸದೆ, ಅಖಿಲೇಶ್ ಯಾದವ್ ಅವರ ಪತ್ನಿ ಡಿಂಪಲ್ ಯಾದವ್ ಅವರು ಕನೌಜ್ ಕ್ಷೇತ್ರದಿಂದ ಮತ್ತೊಮ್ಮೆ ಲೋಕಸಭೆಗೆ ಆಯ್ಕೆ ಬಯಸಿದ್ದಾರೆ.

ಮುಲಾಯಂ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆಮುಲಾಯಂ ಕ್ಷೇತ್ರದಿಂದ ಅಖಿಲೇಶ್ ಯಾದವ್ ಸ್ಪರ್ಧೆ

ಸ್ಟಾರ್ ಪ್ರಚಾರಕರು: ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್‌, ರಾಮ್‌ ಗೋಪಾಲ್‌ ಯಾದವ್‌, ಅಜಂಖಾನ್‌, ಜಯಾ ಬಚ್ಚನ್‌, ಡಿಂಪಲ್‌ ಯಾದವ್‌ ಮತ್ತು ತೇಜ್‌ಪ್ರತಾಪ್‌ ಯಾದವ್‌ ಅವರ ಹೆಸರಿದ್ದ 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಶನಿವಾರದಂದೇ ಚುನಾವಣಾ ಆಯೋಗಕ್ಕೆ ಕಳಿಸಲಾಗಿತ್ತು. ಆದರೆ, ಆ ಪಟ್ಟಿಯಲ್ಲಿ ಮುಲಾಯಂ ಹೆಸರಿರಲಿಲ್ಲ.

 SP revises its star campaigners list, includes Mulayam

ಹೇಗಿದ್ದ ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹೇಗಾಗಿ ಹೋದರು!ಹೇಗಿದ್ದ ಎಸ್ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಹೇಗಾಗಿ ಹೋದರು!

ಈಗ ಮುಲಾಯಂ ಹೆಸರು ಸೇರಿಸಿ ಮತ್ತೊಮ್ಮೆ ಪಟ್ಟಿಯನ್ನು ಆಯೋಗಕ್ಕೆ ಕಳಿಸಲಾಗಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಮೈನ್ ಪುರಿಯಲ್ಲಿ 1996, 2004 ಹಾಗೂ 2009ರಲ್ಲಿ ಸ್ಪರ್ಧಿಸಿದ್ದ ಮುಲಾಯಂ ಅವರು ಈಗ ಮತ್ತೊಮ್ಮೆ ಹಳೆ ಕ್ಷೇತ್ರಕ್ಕೆ ಮರಳಿದ್ದಾರೆ.

English summary
The Samajwadi Party Sunday made a volte-face and included its founder Mulayam Singh Yadav's name in its list of "star campaigners", a day after leaving him out of it.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X