ಹೋಳಿ ಆಚರಣೆ ವೇಳೆ ಬಿಜೆಪಿ ಶಾಸಕನ ಮೇಲೆ ಗುಂಡಿನ ದಾಳಿ
ಲಕ್ನೋ, ಮಾರ್ಚ್ 21: ಉತ್ತರ ಪ್ರದೇಶದಲ್ಲಿ ಹೋಳಿ ಆಚರಣೆಯ ವೇಳೆ ಬಿಜೆಪಿ ಶಾಸಕರೊಬ್ಬರ ಮೇಲೆ ಗುಂಡಿನ ದಾಳಿ ನಡೆದ ಘಟನೆ ಬುಧವಾರ ಮಧ್ಯಾಹ್ನ ನಡೆದಿದೆ.
ಉತ್ತರ ಪ್ರದೇಶದ ಲಿಖಿಂಪುರ ಖೇರಿ ಎಂಬಲ್ಲಿ ಹೋಳಿ ಆಚರಣೆ ನಡೆಯುತ್ತಿದ್ದು. ಪರಸ್ಪರ ಬಣ್ಣ ಎರೆಚಿಕೊಳ್ಳುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಶಾಸಕ ಯೋಗೇಶ್ ಶರ್ಮಾ ಅವರ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದರು.

ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದ್ದು, ರಾಜಕೀಯ ವೈಷಮ್ಯವೇ ಇದಕ್ಕೆ ಕಾರಣ ಎಂದು ಶಂಕಿಸಲಾಗಿದೆ.












Click it and Unblock the Notifications