ಸ್ವತಂತ್ರ ದೇವ್ ಸಿಂಗ್ ಗೆ ಉತ್ತರ ಪ್ರದೇಶ ಬಿಜೆಪಿ ಚುಕ್ಕಾಣಿ
ಲಕ್ನೋ, ಜುಲೈ 16: ಒಬಿಸಿ ನಾಯಕ ಸ್ವತಂತ್ರ ದೇವ್ ಸಿಂಗ್ ಅವರನ್ನು ಉತ್ತರ ಪ್ರದೇಶ ಬಿಜೆಪಿಯ ನೂತನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಪಕ್ಷದ ಅಧ್ಯಕ್ಷರಾಗಿದ್ದ ಮಹೇಂದ್ರ ನಾಥ್ ಪಾಂಡೆ ಅವರನ್ನು ನರೇಮದ್ರ ಮೋದಿ ಸರ್ಕಾರದ ಸಚಿವ ಸಂಪುಟದಲ್ಲಿ ಸೇರಿದಿಕೊಂಡಿರುವುದರಿಂದ ತೆರವಾಗಿರುವ ಸ್ಥಾನಕ್ಕೆ ಸ್ವತಂತ್ರ ದೇವ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗೃಹ ಸಚಿವ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಮತ್ತು ಕಾರ್ಯಾಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಭೇಟಿಯಾದ ಮರುದಿನವೇ ಈ ಬೆಳವಣಿಗೆ ನಡೆದಿದೆ.
ಇತ್ತ ಮಹಾರಾಷ್ಟ್ರದಲ್ಲೂ ಲೋಕೋಪಯೋಗಿ ಸಚಿವ ಚಂದ್ರಕಾಂತ್ ಪಾಟೀಲ್ ಅವರನ್ನು ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಮುನ್ನ ಅಧ್ಯಕ್ಷರಾಗಿದ್ದ ದಾನ್ವೆ ರಾವಸಾಹೇಬ್ ದಾದಾರಾವ್ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು.

ಬಿಹಾರ ಬಿಜೆಪಿ ಅಧ್ಯಕ್ಷ ನಿತ್ಯಾನಂದ ರೈ ಅವರನ್ನೂ ಕೇಂದ್ರ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದ್ದು, ಈ ಜಾಗಕ್ಕೂ ಅಧ್ಯಕ್ಷರ ಆಯ್ಕೆ ನಡೆಯಬೇಕಿದೆ.
ಮಹಾರಾಷ್ಟ್ರದಲ್ಲಿ ಈ ವರ್ಷ ವಿಧಾನಸಭೆ ಚುನಾವಣೆಯೂ ನಡೆಯಲಿರುವುದರಿಂದ ಅಧ್ಯಕ್ಷರ ಆಯ್ಕೆ ಕುತೂಹಲ ಸೃಷ್ಟಿಸಿತ್ತು.











Click it and Unblock the Notifications