ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಯನ್ನು ಸೋಲಿಸಲು 'ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ' ಪ್ರಾರಂಭ: ಟಿಕಾಯತ್‌ ಘೋಷಣೆ

|
Google Oneindia Kannada News

ಲಕ್ನೋ, ಜು.27: ಮೂರು ಕೇಂದ್ರ ಕೃಷಿ ಕಾನೂನುಗಳ ವಿರುದ್ಧ ರೈತರ ಪ್ರತಿಭಟನೆಯ ಮುಖಂಡರಲ್ಲಿ ಓರ್ವರಾಗಿರುವ ಭಾರತೀಯ ಕಿಸಾನ್ ಯೂನಿಯನ್ ನಾಯಕ, ರೈತ ಮುಖಂಡ ರಾಕೇಶ್ ಟಿಕಾಯತ್‌ ಸೋಮವಾರ "2022 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ" ಅನ್ನು ಪ್ರಾರಂಭಿಸುವುದಾಗಿ ಘೋಷಣೆ ಮಾಡಿದ್ದಾರೆ.

ಲಕ್ನೋದಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾದ ಸುದ್ದಿಗೋಷ್ಠಿಯಲ್ಲಿ ರೈತ ಮುಖಂಡ ರಾಕೇಶ್‌ ಟಿಕಾಯತ್‌ ಮಾತನಾಡಿದರು. ಸಂಯುಕ್ತ ಕಿಸಾನ್‌ ಮೋರ್ಚಾ ಎಂಬುದು ರೈತ ಸಂಘಗಳ ಒಕ್ಕೂಟವಾಗಿದ್ದು, ಇದು ಕಳೆದ ವರ್ಷ ನವೆಂಬರ್‌ನಿಂದ ರೈತರ ಪ್ರತಿಭಟನೆಗೆ ನಡೆಸುತ್ತಿದೆ. ಮೋರ್ಚಾ ಬ್ಯಾನರ್ ಅಡಿಯಲ್ಲಿ ಕಳೆದ ಎಂಟು ತಿಂಗಳುಗಳಿಂದ ಹಲವಾರು ರಾಜ್ಯಗಳ ರೈತರು ಉತ್ತರ ಪ್ರದೇಶ ಮತ್ತು ಹರಿಯಾಣದೊಂದಿಗಿನ ದೆಹಲಿಯ ಗಡಿಯಲ್ಲಿ ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿಪ್ರತಿಭಟನೆ ನಡೆಸುತ್ತಿದ್ದಾರೆ.

ಕೃಷಿ ಕಾನೂನಿಗೆ ವಿರೋಧ: ಸಂಸತ್ತಿಗೆ ಟ್ರ್ಯಾಕ್ಟರ್‌ ಚಲಾಯಿಸಿ ಬಂದ ರಾಹುಲ್ ಗಾಂಧಿಕೃಷಿ ಕಾನೂನಿಗೆ ವಿರೋಧ: ಸಂಸತ್ತಿಗೆ ಟ್ರ್ಯಾಕ್ಟರ್‌ ಚಲಾಯಿಸಿ ಬಂದ ರಾಹುಲ್ ಗಾಂಧಿ

ಈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಟಿಕಾಯತ್‌, "ಮೂರು ಕೃಷಿ ಕಾನೂನುಗಳಲ್ಲಿ ರೈತ ವಿರೋಧಿ ಏನೂ ಇಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದು ಪ್ರಧಾನ ಮಂತ್ರಿಯ ದೊಡ್ಡ ಸುಳ್ಳು," ಎಂದು ನರೇಂದ್ರ ಮೋದಿಯ ವಿರುದ್ದ ವಾಗ್ದಾಳಿ ನಡೆಸಿದರು.

 Tikait announces launch of Mission Uttar Pradesh-Uttarakhand to defeat the BJP

"ಮೂರು ಕಾನೂನುಗಳಲ್ಲಿ ಒಂದು, ರೈತರು ಗೊಬ್ಬರ, ಬೀಜಗಳು, ಕೀಟನಾಶಕಗಳು, ಉಪಕರಣಗಳು ಇತ್ಯಾದಿಗಳನ್ನು ಕಾರ್ಪೊರೇಟ್ ಸಂಸ್ಥೆಗಳಿಂದ ಗುತ್ತಿಗೆ ಕೃಷಿಯಡಿಯಲ್ಲಿ ಖರೀದಿಸಬೇಕಾಗುತ್ತದೆ ಎಂದು ಹೇಳುತ್ತದೆ. ಇದರಿಂದಾಗಿ ರೈತರು ತಮ್ಮ ಆಸ್ತಿಗಳನ್ನು ಅಡಮಾನ ಇಟ್ಟ ನಂತರ ಸಾಲ ಪಡೆಯುತ್ತಾರೆ ಎಂಬುದು ಸತ್ಯ," ಎಂದು ಹೇಳಿದರು.

"ನಾವು ಬಂಗಾಳದಲ್ಲಿ ಬಿಜೆಪಿಯನ್ನು ಸೋಲಿಸಿದ್ದೇವೆ ಮತ್ತು ಈಗ ನಾವು ಬಿಜೆಪಿಯನ್ನು ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಸೋಲಿಸಲಿದ್ದೇವೆ. ಏಕೆಂದರೆ ಈ ಬಿಜೆಪಿ ಸರ್ಕಾರ ರೈತ ವಿರೋಧಿ ಕಪ್ಪು ಕಾನೂನುಗಳನ್ನು ರದ್ದುಗೊಳಿಸಲು ಸಿದ್ಧವಾಗಿಲ್ಲ. ನಮ್ಮ ಮೊದಲ ಮಹಾಪಂಚಾಯತ್ ಮಿಷನ್ ಉತ್ತರ ಪ್ರದೇಶ-ಉತ್ತರಾಖಂಡ ಸೆಪ್ಟೆಂಬರ್ 5 ರಂದು ಮುಜಾಫರ್‌ನಗರದಲ್ಲಿ ನಡೆಯಲಿದೆ," ಬಿಕೆಯು ವಕ್ತಾರರಾದ ರಾಕೇಶ್ ಟಿಕಾಯತ್‌ ಮಾಹಿತಿ ನೀಡಿದರು. ಮಾರ್ಚ್-ಏಪ್ರಿಲ್ ಬಂಗಾಳ ಚುನಾವಣೆಯ ಸಂದರ್ಭದಲ್ಲಿ ರೈತರು ಬಿಜೆಪಿ ವಿರುದ್ಧ ಪ್ರಚಾರ ನಡೆಸಿದ್ದರು.

Video: ರೈತರನ್ನು ಗೂಂಡಾ ಎಂದ ಸಚಿವೆಗೆ ರಾಕೇಶ್ ಟಿಕಾಯತ್ ತಿರುಗೇಟುVideo: ರೈತರನ್ನು ಗೂಂಡಾ ಎಂದ ಸಚಿವೆಗೆ ರಾಕೇಶ್ ಟಿಕಾಯತ್ ತಿರುಗೇಟು

"ನಾವು ಶೀಘ್ರದಲ್ಲೇ ಲಕ್ನೋಗೆ ಪ್ರವೇಶಿಸುವ ಎಲ್ಲಾ ಸ್ಥಳಗಳಲ್ಲಿ ಧರಣಿಯಲ್ಲಿ ಕುಳಿತುಕೊಳ್ಳಲಿದ್ದೇವೆ. ನಾವು ಅದನ್ನು ದೆಹಲಿಯ ಸುತ್ತಲೂ ಮಾಡುತ್ತಿದ್ದೇವೆ. ನಾವು ದಣಿದಿದ್ದೇವೆ ಮತ್ತು ದೆಹಲಿಯ ಗಡಿಯಲ್ಲಿ ನಮ್ಮ ಆಂದೋಲನವನ್ನು ಸ್ಥಗಿತಗೊಳಿಸುತ್ತೇವೆ ಎಂದು ಸರ್ಕಾರ ಭಾವಿಸುತ್ತದೆ. ಆದರೆ ನಾವು ನಮ್ಮ ಪ್ರತಿಭಟನಾ ನೆಲೆಯನ್ನು ವಿಸ್ತರಿಸುತ್ತಿದ್ದೇವೆ," ಎಂದು ಕೇಂದ್ರ ಸರ್ಕಾರಕ್ಕೆ ಟಿಕಾಯತ್‌ ಎಚ್ಚರಿಕೆ ನೀಡಿದ್ದಾರೆ.

ಇನ್ನು ಇದೇ ಸಂದರ್ಭದಲ್ಲಿ, "ಮೋರ್ಚಾದ ಏಕೈಕ ಉದ್ದೇಶವೆಂದರೆ ಬಿಜೆಪಿಯನ್ನು ಅಧಿಕಾರದಿಂದ ತೆಗೆದುಹಾಕುವುದು. ಅದರಿಂದಾಗಿ ಹೊಸ ಸರ್ಕಾರವು ಮೋದಿ ಸರ್ಕಾರ ಜಾರಿಗೆ ತಂದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಪಡಿಸುತ್ತದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಲು ಯೋಜಿಸುತ್ತಿಲ್ಲ," ಎಂದು ಟಿಕಾಯತ್‌ ಸ್ಪಷ್ಟಪಡಿಸಿದ್ದಾರೆ.

"ನಾವು ಆಡಳಿತಾರೂಢ ಬಿಜೆಪಿಯೊಂದಿಗೆ ಯುದ್ಧದಲ್ಲಿದ್ದೇವೆ. ದೇಶದ ಒಬ್ಬ ರೈತ ಕೂಡ ಭವಿಷ್ಯದಲ್ಲಿ ಬಿಜೆಪಿ ಪಕ್ಷಕ್ಕೆ ಮತ ಚಲಾಯಿಸುವುದಿಲ್ಲ. ಬಿಜೆಪಿಯನ್ನು ಸೋಲಿಸಲು ಸಮರ್ಥರಾದವರನ್ನು ಬೆಂಬಲಿಸುವುದು ನಮ್ಮ ಸರಳ ತಂತ್ರ. ನಾವು ಇದನ್ನು ಬಂಗಾಳದಲ್ಲಿ ಪರಿಣಾಮಕಾರಿಯಾಗಿ ಮಾಡಿದ್ದೇವೆ ಮತ್ತು ಅದನ್ನು 2022 ರಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಪುನರಾವರ್ತಿಸುತ್ತೇವೆ," ಎಂದು ರೈತ ಮುಖಂಡರು ಹೇಳಿದ್ದಾರೆ.

(ಒನ್‌ಇಂಡಿಯಾ ಸುದ್ದಿ)

English summary
Bharatiya Kisan Union leader Rakesh Tikait on Monday announced the launch of Mission Uttar Pradesh-Uttarakhand to defeat the BJP in the 2022 Assembly elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X