• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕಾರಿನೊಳಗೆ ಉಸಿರುಗಟ್ಟಿ ಇಬ್ಬರು ಮಕ್ಕಳು ಸಾವು, ಮತ್ತಿಬ್ಬರು ಗಂಭೀರ

|

ಮೊರಾದಾಬಾದ್, ಜೂನ್ 16: ಇಬ್ಬರು ಮಕ್ಕಳು ಕಾರಿನೊಳಗೆ ಉಸಿರುಗಟ್ಟಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ನಡೆದಿದೆ.

ನಾಲ್ಕು ಮಂದಿ ಮಕ್ಕಳು ಆಟವಾಡುತ್ತಿದ್ದರು, ಯಾರೂ ಮಕ್ಕಳ ಬಗ್ಗೆ ಅಷ್ಟು ಗಮನ ಕೊಟ್ಟಿರಲಿಲ್ಲ, ನಾಲ್ವರು ಮಕ್ಕಳು ಕಾರಿನಲ್ಲಿ ಅಡಗಿ ಕುಳಿತಿದ್ದರು, ಯಾರೂ ಬರಬಾರದೆಂದು ಕಾರನ್ನು ಒಳಗಿನಿಂದ ಲಾಕ್‌ ಮಾಡಿದ್ದರು. ಕಾರಿನ ಬಾಗಿಲು ತೆಗೆಯಲಾಗದೆ 4 ಹಾಗೂ 7 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ ವೈರಸ್‌ಗೆ ಮೊದಲ ಪೊಲೀಸ್ ಸಾವು

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಇಬ್ಬರನ್ನು ಆಸ್ಪತ್ರೆಗೆ ಕರೆದೊಯ್ದರೂ ಬದುಕುಳಿಯಲಿಲ್ಲ, ಇನ್ನೂ ಇಬ್ಬರು ಮಕ್ಕಳ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

'ನಾಲ್ವರು ಮಕ್ಕಳು ಪ್ರಜ್ಞಾಹೀನ ಸ್ಥಿತಿಯಲ್ಲಿ ಕಾರಿನಲ್ಲಿ ಪತ್ತೆಯಾಗಿದ್ದರು.ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಇಬ್ಬರು ಮೃತಪಟ್ಟಿದ್ದು ಇಬ್ಬರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ ಎಂದು ಎಸ್‌ಪಿ ಅಮಿತ್ ಕುಮಾರ್ ತಿಳಿಸಿದ್ದಾರೆ. ಮಕ್ಕಳು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ಬೆಳಗ್ಗೆ 8 ಗಂಟೆ ಸುಮಾರಿಗೆ ಘಟನೆ ನಡೆದಿದೆ ಎಂದು ಕುಟುಂಬದವರು ವಿವರಿಸಿದ್ದಾರೆ.

English summary
Two children died after they accidentally got locked inside a car while playing in Uttar Pradesh's Moradabad, the police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X