ಇಫ್ಕೊ ಘಟಕದಲ್ಲಿ ಅನಿಲ ಸೋರಿಕೆ; ಇಬ್ಬರು ಅಧಿಕಾರಿಗಳ ಸಾವು

ಲಕ್ನೊ, ಡಿಸೆಂಬರ್ 23: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿನ ಇಂಡಿಯನ್ ಫಾರ್ಮರ್ಸ್ ಫರ್ಟಿಲೈಜರ್ ಕೋ ಆಪರೇಟಿವ್ ಲಿಮಿಟೆಡ್ (ಇಫ್ಕೊ) ಘಟಕದಲ್ಲಿ ಅನಿಲ ಸೋರಿಕೆಯಾಗಿ ಇಬ್ಬರು ಅಧಿಕಾರಿಗಳು ಸಾವನ್ನಪ್ಪಿ, ಹದಿನೈದು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.

ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ, ಘಟಕದಲ್ಲಿ ಕೆಲಸ ಮಾಡುತ್ತಿದ್ದ ಸಹಾಯಕ ವ್ಯವಸ್ಥಾಪಕ ವಿಪಿ ಸಿಂಗ್ ಹಾಗೂ ಡೆಪ್ಯುಟಿ ವ್ಯವಸ್ಥಾಪಕ ಅಭಯಾನಂದ ಕುಮಾರ್ ಸಾವನ್ನಪ್ಪಿದ್ದಾರೆ. ಅಸ್ವಸ್ಥಗೊಂಡ ಹದಿನೈದು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳವಾರ ರಾತ್ರಿ 11 ಗಂಟೆ ಸುಮಾರಿಗೆ ಪಿಎಫ್ ಘಟಕ 2ರಲ್ಲಿ ಗ್ಯಾಸ್ ಸೋರಿಕೆಯಾಗಿರುವುದಾಗಿ ತಿಳಿದುಬಂದಿದೆ. ಅದೇ ಸಮಯದಲ್ಲಿ ಘಟಕದಲ್ಲಿ 100 ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಘಟನೆ ನಡೆಯುತ್ತಿದ್ದಂತೆ ಎನ್ ಡಿಆರ್ ಎಫ್ ತಂಡ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ನಡೆಸಿ ಕಾರ್ಮಿಕರನ್ನು ರಕ್ಷಿಸಿದೆ.

Two Dies And 15 Fell Ill By Ammonia Gas Leakage At IFFCO In Uttar Pradesh

ಘಟಕದಲ್ಲಿ ಇಂಥ ಅವಘಡ ನಡೆದಿರುವುದು ಇದೇ ಮೊದಲಲ್ಲ. ಕಳೆದ ಐದಾರು ವರ್ಷಗಳಿಂದ ಸಾಕಷ್ಟು ಬಾರಿ ಅನಾಹುತಗಳು ಸಂಭವಿಸಿವೆ. ಕಳೆದ ಏಪ್ರಿಲ್ ನಲ್ಲಿಯೂ ಘಟಕದಲ್ಲಿ ಅಮೋನಿಯಾ ಅನಿಲ ಸೋರಿಕೆಯಾಗಿ ನಾಲ್ವರು ಅಸ್ವಸ್ಥಗೊಂಡಿದ್ದ ಘಟನೆ ನಡೆದಿತ್ತು. ಮಂಗಳವಾರ ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಸಂತಾಪ ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+