ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮಮಂದಿರ ಭೂಮಿ ಪೂಜೆಗೆ ಉದ್ಧವ್ ಠಾಕ್ರೆಗೆ ಆಹ್ವಾನವಿಲ್ಲ: ವಿಶ್ವ ಹಿಂದೂ ಪರಿಷತ್

|
Google Oneindia Kannada News

ಲಕ್ನೋ, ಜುಲೈ 28: ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀ ರಾಮಮಂದಿರ ಭೂಮಿ ಪೂಜೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಆಹ್ವಾನವಿಲ್ಲವೆಂದು ವಿಶ್ವ ಹಿಂದೂ ಪರಿಷತ್ ಹೇಳಿದೆ.

Recommended Video

Andre Russell wasn't unhappy with me : Dinesh Karthik | Oneindia Kannada

ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶ್ರೀರಾಮಮಂದಿರ ಭೂಮಿ ಪೂಜೆ ನೆರವೇರಲಿದೆ. ಯಾವುದೇ ರಾಜ್ಯದ ಮುಖ್ಯಮಂತ್ರಿಗಳನ್ನು ಭೂಮಿ ಪೂಜೆಗೆ ಆಹ್ವಾನಿಸಿಲ್ಲ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾತ್ರ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ.

ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ 5 ಕೋಟಿ ರು ಕೊಟ್ಟ ಬಾಪುಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕಾಗಿ 5 ಕೋಟಿ ರು ಕೊಟ್ಟ ಬಾಪು

ಈ ಮೊದಲು ಉದ್ಧವ್ ಠಾಕ್ರೆ ಮಾತನಾಡಿ, ದೇಶಾದ್ಯಂತ ಕೊರೊನಾ ಸೋಂಕು ಹೆಚ್ಚಳವಾಗಿರುವಾಗ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಜನರಿಗೆ ತೋರಿಸಬಹುದಿತ್ತು. ದೊಡ್ಡ ಕಾರ್ಯಕ್ರಮವನ್ನಾಗಿ ಮಾಡುವ ಅಗತ್ಯವಿಲ್ಲ ಎಂದಿದ್ದರು.

Uddhav Thackery Not Invited For Bhoomi Pooja Of Ram Temple

ವಿಶ್ವ ಹಿಂದು ಪರಿಷತ್ ಈ ಕುರಿತು ಪ್ರತಿಕ್ರಿಯೆ ನೀಡಿ ಉದ್ಧವ್ ಠಾಕ್ರೆ ಶಿವಸೇನೆಯ ಮುಖ್ಯಸ್ಥ ಎನ್ನುವ ಕಾರಣಕ್ಕೆ ಅವರನ್ನು ಆಹ್ವಾನಿಸದೆ ಇದ್ದಿದ್ದಲ್ಲ, ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಕೂಡ ಹೌದು, ಯಾವ ರಾಜ್ಯದ ಮುಖ್ಯಮಂತ್ರಿಗೂ ಆಹ್ವಾನ ನೀಡಿಲ್ಲ ಎಂದು ಅಲೋಕ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ಭೂಮಿ ಪೂಜಾ ಸಂದರ್ಭದಲ್ಲಿ ಗೃಹ ಸಚಿವಾಲಯ ನೀಡಿರುವ ಎಲ್ಲಾ ನಿಯಮಗಳನ್ನು ಪಾಲಿಸಲಾಗುತ್ತದೆ. ಕೆಲವೇ ಕೆಲವು ಮಂದಿಯನ್ನು ಮಾತ್ರ ಆಹ್ವಾನಿಸಲಾಗಿದೆ. ದೂರದರ್ಶನದಲ್ಲಿ ಲೈವ್ ಬರಲಿದೆ.

English summary
After the BJP on Monday lashed at Maharashtra Chief Minister Uddhav Thackeray for giving up Hindutva for power, Alok Kumar, Working President of Vishva Hindu Parishad today said that the Shiv Sena Chief has not been invited for the 'bhoomi pujan' of Ram Temple in Ayodhya which will take place on August
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X