ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿಗೆ ರಾಹುಲ್ ಗಾಂಧಿಯೇ ನೇರ ಹೊಣೆ:ಉಮಾ ಭಾರತಿ
ಲಕ್ನೋ, ಜುಲೈ 13: ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿಗೆ ರಾಹುಲ್ ಗಾಂಧಿಯೇ ನೇರ ಕಾರಣ ಎಂದು ಬಿಜೆಪಿ ನಾಯಕಿ ಉಮಾ ಭಾರತಿ ಆರೋಪಿಸಿದ್ದಾರೆ.
Recommended Video
ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಉಮಾ ಭಾರತಿ, ರಾಹುಲ್ ಯುವಕರನ್ನು ರಾಜಕೀಯವಾಗಿ ಬೆಳೆಯಲು ಬಿಡುತ್ತಿಲ್ಲ, ಜ್ಯೋತಿರಾದಿತ್ಯ ಸಿಂಧಿಯಾ ಮತ್ತು ಸಚಿನ್ ಪೈಲಟ್ ನಂತಹ ಯುವ ರಾಜಕಾರಣಿಗಳು ವಿದ್ಯಾವಂತರನ್ನು ಬೆಳೆಯಲು ಬಿಡುತ್ತಿಲ್ಲ ಎಂದು ಉಮಾ ಭಾರತಿ ಆರೋಪಿಸಿದ್ದಾರೆ.
ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಹಾಗೂ ಮಧ್ಯಪ್ರದೇಶದಲ್ಲಿ ಕಮಲ್‌ನಾಥ್ ಸರ್ಕಾರ ಪತನಕ್ಕೆ ರಾಹುಲ್ ಗಾಂಧಿಯೇ ಕಾರಣ.ಕರ್ನಾಟಕದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರ ರೂಪುಗೊಂಡಿತ್ತು. ಸರ್ಕಾರ ರಚನೆ ಆದ ಒಂದು ವರ್ಷದೊಳಗೆ ರೆಬೆಲ್ ಶಾಸಕರು ಬಿಜೆಪಿಗೆ ಹಾರಿದ್ದರು. ಮಧ್ಯ ಪ್ರದೇಶದಲ್ಲೂ ಆಪರೇಷನ್ ಕಮಲ ಯಶಸ್ವಿಯಾಗಿತ್ತು. ಈಗ ರಾಜಸ್ಥಾನದ ಮೇಲೆ ಬಿಜಿಪಿ ಕಣ್ಣಿಟ್ಟಿದೆ ಎಂಬುದು ಕಾಂಗ್ರೆಸ್ ಆರೋಪ.

ಈಗಾಗಲೇ ಸಚಿನ್ ತಮ್ಮ ಬಳಿ 30 ಶಾಸಕರು ಇರುವುದಾಗಿ ಹೇಳಿಕೊಂಡಿದ್ದಾರೆ. ಒಂದೊಮ್ಮೆ ಬಿಜೆಪಿ ಸಚಿನ್ ಅವರನ್ನು ಸೆಳೆದರೆ ಅವರ ಬೆಂಬಲಕ್ಕೆ ಇರುವ 30 ಶಾಸಕರು ಬಿಜೆಪಿ ಸೇರುವ ಸಾಧ್ಯತೆ ಇದೆ. ಈ ವೇಳೆ ಸುಲಭವಾಗಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ.
ಹೀಗಾಗಿ, ಕಾಂಗ್ರೆಸ್ ನಾಯಕರಿಗೆ ಬಂಡಾಯ ಶಮನ ಅಗತ್ಯವಾಗಿದ್ದು, ಸಚಿನ್ ಪೈಲಟ್‌ಗೆ ಮುಖ್ಯಮಂತ್ರಿ ಸ್ಥಾನ ನೀಡಲು ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಸಭೆಯಲ್ಲಿ ಎಷ್ಟು ಮಂದಿ ಶಾಸಕರು ಪಾಲ್ಗೊಳ್ಳುತ್ತಾರೆ ಎಂಬುದು ಕಾಂಗ್ರೆಸ್ ಸರ್ಕಾರದ ಭವಿಷ್ಯವನ್ನು ನಿರ್ಧರಿಸಲಿದೆ.
ಹಾಗೆಯೇ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ದೆಹಲಿಯಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದೇ ಆದರೆ ಸರ್ಕಾರ ಬೀಳುತ್ತದೆ ಎಂಬುದು ರಾಜಕೀಯ ಪಂಡಿತರು ಹೇಳಿದ್ದಾರೆ.












Click it and Unblock the Notifications