ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಖಿಂಪುರ ಪ್ರಕರಣ: ಆಶಿಶ್ ಮಿಶ್ರಾಗೆ ಜಾಮೀನು ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ

|
Google Oneindia Kannada News

ಲಕ್ನೋ ಫೆಬ್ರವರಿ 21: ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಹಾಗೂ ಲಖಿಂಪುರ ಖೇರಿ ಪ್ರಕರಣದ ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಅವರಿಗೆ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಮೃತಪಟ್ಟ ರೈತರ ಕುಟುಂಬಗಳು ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದಾರೆ.

ಫೆಬ್ರವರಿ 15 ರಂದು, ಅಲಹಾಬಾದ್ ಹೈಕೋರ್ಟ್ ಆಶಿಶ್ ಮಿಶ್ರಾ ಅವರಿಗೆ ಷರತ್ತುಬದ್ಧ ಜಾಮೀನು ಘೋಷಿಸಿದೆ. ಜೊತೆಗೆ ಆಶಿಶ್ ಮಿಶ್ರಾ ಅವರು ಮಂಗಳವಾರ ಸಂಜೆ ಜೈಲಿನಿಂದ ಬಿಡುಗಡೆಯಾದರು. ಜಿಲ್ಲೆಯ ಟಿಕೋನಿಯಾದಲ್ಲಿ ರೈತರ ಆಂದೋಲನದ ವೇಳೆ ಭುಗಿಲೆದ್ದ ಹಿಂಸಾಚಾರದಲ್ಲಿ ನಾಲ್ವರು ರೈತರ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಕಳೆದ ವರ್ಷ ಅಕ್ಟೋಬರ್ 10 ರಿಂದ ಜೈಲಿನಲ್ಲಿದ್ದರು.

ಸಚಿವರ ಮಗನಿಗೆ ಜಾಮೀನು: ನ್ಯಾಯದ ಭರವಸೆ ಇಲ್ಲ ಎಂದ ರೈತ
ವಿಶೇಷ ತನಿಖಾ ತಂಡವು (ಎಸ್‌ಐಟಿ) ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ರೈತರನ್ನು ಹೊಡೆದುರುಳಿಸಿದ ಘಟನೆಯಲ್ಲಿ ಆಶಿಶ್ ಮಿಶ್ರಾ ಅವರನ್ನು ಪ್ರಮುಖ ಆರೋಪಿ ಎಂದು ಹೆಸರಿಸಿದೆ.

Union Minister’ Son Bail in UP Farmer Killing Case Challenged in SC

ಕಳೆದ ವರ್ಷ ಅಕ್ಟೋಬರ್ 3 ರಂದು ಅಜಯ್ ಮಿಶ್ರಾ ಅವರ ಸ್ಥಳೀಯ ಬನ್ಬೀರ್ ಗ್ರಾಮಕ್ಕೆ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರು ಭೇಟಿ ನೀಡಿದ್ದನ್ನು ವಿರೋಧಿಸಿ ಟಿಕೋನಿಯಾ ವಿಯಾಜ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾಗ ರೈತರ ಮೇಲೆ ಕಾರೊಂದು ಹರಿದಿತ್ತು. ಈ ವೇಳೆ ನಾಲ್ವರು ಕಾರುಗಳ ಬೆಂಗಾವಲಿನ ಚಕ್ರದಡಿಯಲ್ಲಿ ಸಿಲುಕಿ ಪ್ರಾಣ ಕಳೆದುಕೊಮಡಿದ್ದರು. ನಂತರದ ಹಿಂಸಾಚಾರದಲ್ಲಿ ಇಬ್ಬರು ಬಿಜೆಪಿ ಕಾರ್ಯಕರ್ತರು, ಚಾಲಕ ಮತ್ತು ಪತ್ರಕರ್ತ ಸೇರಿದಂತೆ ನಾಲ್ವರು ಸಾವನ್ನಪ್ಪಿದರು. ಈ ಪ್ರಕರಣದಲ್ಲಿ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರಮುಖ ಆರೋಪಿಯಾಗಿದ್ದು ಅವರನ್ನು ಬಂಧಿಸಲಾಗಿತ್ತು. ಆದರೀಗ ಅವರಿಗೆ ಜಾಮೀನು ನೀಡಲಾಗಿದ್ದು ಅವರು ಬಿಡುಗಡೆಯಾಗಿ ಹೊರಬಂದಿದ್ದಾರೆ. ಇದನ್ನು ಪ್ರಶ್ನಿಸಿ ಮೃತ ರೈತ ಕುಟುಂಬಗಳು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಮತ್ತು ಲಖಿಂಪುರ ಖೇರಿ ಪ್ರಕರಣದಲ್ಲಿ ಕೊಲೆ ಆರೋಪಿ ಆಶಿಶ್ ಮಿಶ್ರಾಗೆ ಜಾಮೀನು ಸಿಕ್ಕಿದ್ದು, ಇದು ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ರೈತರಿಗೆ ಭಾರಿ ನಿರಾಸೆ ಮೂಡಿಸಿದೆ. ಆಶಿಶ್ ಮಿಶ್ರಾಗೆ ಉತ್ತರ ಪ್ರದೇಶದ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಅವರ ವಿರುದ್ಧದ ಪ್ರಕರಣದಲ್ಲಿನ ವ್ಯತ್ಯಾಸಗಳನ್ನು ಎತ್ತಿ ತೋರಿಸಿದೆ. ಈ ಆದೇಶವು ವಿವಾದಾಸ್ಪದವಾಗಿದೆ ಎಂದು ಹೇಳಲಾಗುತ್ತಿದೆ. ವಿಶೇಷವಾಗಿ ರಾಜ್ಯದಲ್ಲಿ ಚುನಾವಣಾ ಸಮಯದಲ್ಲಿ ಆಶಿಶ್ ಮಿಶ್ರಾಗೆ ಜಾಮೀನು ಮಂಜೂರಾಗಿದ್ದು ಆಡಳಿತಾರೂಢ ಬಿಜೆಪಿ ಎರಡನೇ ಅವಧಿಗೆ ಅಧಿಕಾರವನ್ನು ಬಯಸುತ್ತಿದೆಯೇ ಎನ್ನುವ ಅನುಮಾನ ಮೂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಬೇಡಿಕೆಗಳಿದ್ದರೂ ಕಡೆಗಣಿಸಿ ಈ ನಿರ್ಧಾರ ರೈತರಿಗೆ ಬೇಸರ ತಂದಿದೆ.

Recommended Video

ಪಂದ್ಯದ ದಿಕ್ಕನ್ನೇ ಬದಲಿಸಿ ಇಶಾನ್ ಕಿಶನ್! | Oneindia kannada

ಫೆಬ್ರವರಿ 23 ರಂದು ನಾಲ್ಕನೇ ಹಂತದಲ್ಲಿ ಲಖಿಂಪುರ ಖೇರಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ರೈತರ ಕೆಂಗಣ್ಣಿಗೆ ಬಿಜೆಪಿ ತುತ್ತಾದಂತಿದೆ. ಇನ್ನೂ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಚುನಾವಣಾ ಸಭೆಯಲ್ಲಿ ಮಾತನಾಡಿ, ರೈತರನ್ನು ತುಳಿದ ಸಚಿವರ ಮಗನಿಗೆ ನ್ಯಾಯಾಲಯದಿಂದ ಜಾಮೀನು ಸಿಕ್ಕಿದೆ. ಸರ್ಕಾರವು ಪ್ರಕರಣದ ತನಿಖೆಯನ್ನು ಸರಿಯಾದ ರೀತಿಯಲ್ಲಿ ಮುಂದುವರಿಸಿಲ್ಲ. ಆದರೆ ನಮ್ಮ ಸರ್ಕಾರ ಬಂದಾಗ ರೈತರ ಜೀವವನ್ನು ತೆಗೆದುಕೊಂಡ ಆರೋಪಿಗಳಿಗೆ ಮಾತ್ರವಲ್ಲದೇ ಅವರನ್ನು ರಕ್ಷಿಸಿದವರನ್ನು ಬಂಧಿಸಲಾಗುವುದು. ಜೊತೆ ಪ್ರಕರಣದ ಕುರಿತು ಸರಿಯಾಗಿ ತನಿಖೆ ನಡೆಸಲಾಗುವುದು ಎಂದಿದ್ದಾರೆ. ಕಾನೂನನ್ನು ತಮ್ಮ ಕೈಯಲ್ಲಿ ತೆಗೆದುಕೊಳ್ಳಲು ಬಯಸುವವರಿಗೆ ಮುಂಬರುವ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ ಮತ ಹಾಕಲು ಬಯಸುವ ಅಗತ್ಯವಿಲ್ಲ ಎಂದಿದ್ದಾರೆ.

English summary
The families of the farmers killed in Uttar Pradesh's Lakhimpur Kheri on Monday moved Supreme Court challenging the bail to Ashish Mishra, the son of Union minister Ajay Mishra and the main accused in the case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X