• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಯುಪಿ 2022ರ ಚುನಾವಣೆ: 'ನಮಗೆ 300 ಸ್ಥಾನಗಳಲ್ಲಿ ಗೆಲುವು ಖಚಿತ' ಎಂದ ಬಿಜೆಪಿ

|
Google Oneindia Kannada News

ಲಕ್ನೋ, ಜೂ. 1: ''ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 300 ಸ್ಥಾನಗಳನ್ನು ಗೆಲ್ಲುವುದು ಖಚಿತ'' ಎಂದು ಉತ್ತರಪ್ರದೇಶ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದ 80 ಲೋಕಸಭೆ ಕ್ಷೇತ್ರ ವ್ಯಾಪ್ತಿಯ 403 ವಿಧಾನಸಭೆ ಸ್ಥಾನಗಳಿಗೆ 2022ರಲ್ಲಿ ಚುನಾವಣೆ ನಡೆಯಲಿದೆ. ಬಿಜೆಪಿಯು 2022ರಲ್ಲಿ ನಡೆಯಲಿರುವ ಚುನಾವಣೆಗೆ ಈಗಾಗಲೇ ಸಿದ್ದತೆ ಆರಂಭಿದೆ.

2022ರ ವಿಧಾನಸಭಾ ಚುನಾವಣಾ ಯುದ್ಧಕ್ಕೆ ಈಗಲೇ ಸಜ್ಜಾಗುತ್ತಿದೆ ಬಿಜೆಪಿ 2022ರ ವಿಧಾನಸಭಾ ಚುನಾವಣಾ ಯುದ್ಧಕ್ಕೆ ಈಗಲೇ ಸಜ್ಜಾಗುತ್ತಿದೆ ಬಿಜೆಪಿ

ಉತ್ತರ ಪ್ರದೇಶದಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌ ನೇತೃತ್ವದಲ್ಲಿ ಬಿಜೆಪಿ ನಾಯಕರ ಸಭೆ ಮಂಗಳವಾರ ನಡೆದಿದೆ. ಈ ಸಭೆ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಉತ್ತರಪ್ರದೇಶದಲ್ಲಿ ಮತ್ತೆ ಬಿಜೆಪಿ ಗೆಲುವು ಪಡೆಯಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರವೇ ಸಂತೋಷ್‌ ಉತ್ತರಪ್ರದೇಶ ಲಕ್ನೋದಲ್ಲಿರುವ ಪಕ್ಷದ ಪ್ರಧಾನ ಕಚೇರಿಗೆ ಭೇಟಿ ನೀಡಿದ್ದು, ಮಂಗಳವಾರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ವತಂತ್ರ ದೇವ್‌ ಸಿಂಗ್‌, ನಾಯಕರಾದ ಜೆಪಿಎಸ್‌ ರಾಥೋರ್‌ ಮತ್ತು ಗೋವಿಂದ ನಾರಾಯಣ್‌ ಶುಕ್ಲಾ ಉಪಸ್ಥಿತಿಯಲ್ಲಿ ಸಭೆ ನಡೆಸಿದ್ದಾರೆ.

''ಬಿ.ಎಲ್‌. ಸಂತೋಷ್‌, ಪಕ್ಷದ ಸಭೆ ಮಾತ್ರವಲ್ಲದೆ ಕೋವಿಡ್‌ ನಿರ್ವಹಣೆಯ ಪರಿಶೀಲನೆಯನ್ನೂ ನಡೆಸಲಿದ್ದಾರೆ'' ಎಂದು ಗೋವಿಂದ ನಾರಾಯಣ್‌ ಶುಕ್ಲಾ ತಿಳಿಸಿದ್ದಾರೆ. ಬಿಜೆಪಿ ನಾಯಕರೊಂದಿಗೆ ಸಭೆ ನಡೆಸುವುದಕ್ಕೂ ಮುನ್ನಾ ಕೇಂದ್ರ ಸಚಿವೆ ರಾಧಾ ಮೋಹನ್‌ ಸಿಂಗ್‌, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಜೊತೆ ಸೋಮವಾರ ಬಿ.ಎಲ್‌. ಸಂತೋಷ್‌ ಸಭೆ ನಡೆಸಿದ್ದರು.

UP 2022 Assembly election: We will win 300 seats says BJP

ಪಂಜಾಬ್, ಉತ್ತರಾಖಂಡ್ ಮತ್ತು ಗುಜರಾತ್ ಸೇರಿದಂತೆ ಹಲವಾರು ವಿಧಾನಸಭಾ ಚುನಾವಣಾ ಯುದ್ದಕ್ಕೆ ಬಿಜೆಪಿ ಈಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ.

(ಒನ್ಇಂಡಿಯಾ ಸುದ್ದಿ)

English summary
We will win 300 seats in Uttar pradesh 2022s Assembly election says BJP.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
Desktop Bottom Promotion