ಕಾಂಗ್ರೆಸ್, ಎಸ್‌ಪಿ, ಬಿಎಸ್‌ಪಿಯದ್ದು ಕುಟುಂಬ ರಾಜಕಾರಣ; ಸಿಎಂ ಯೋಗಿ
ಲಕ್ನೋ, ಫೆಬ್ರವರಿ 11: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷಗಳು ಕೇವಲ ತಮಗಾಗಿ ಬದುಕುತ್ತಿದ್ದು, ತಮ್ಮ ಕುಟುಂಬವನ್ನು ಮಾತ್ರ ಪ್ರೋತ್ಸಾಹಿಸುತ್ತಿವೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆರೋಪಿಸಿದ್ದಾರೆ.
ಶಹಜಹಾನ್‌ಪುರದಲ್ಲಿ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಯೋಗಿ, ಉತ್ತರ ಪ್ರದೇಶದಲ್ಲಿ ಡಬಲ್ ಇಂಜಿನ್ ಸರ್ಕಾರವು, ಎರಡು ಪಟ್ಟು ವೇಗದಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದಿದ್ದಾರೆ.
ಸಮಾಜವಾದಿ, ಬಹುಜನ ಸಮಾಜವಾದಿ, ಕಾಂಗ್ರೆಸ್ ಪಕ್ಷಗಳು ತಮಗಾಗಿ ಬದುಕುತ್ತಿದ್ದು, ತಮ್ಮ ವಂಶಸ್ಥರನ್ನು ಮಾತ್ರ ಪ್ರೋತ್ಸಾಹಿಸುತ್ತಿದ್ದಾರೆ. ಒಂದು ವೇಳೆ ನಾವು ರಾಷ್ಟ್ರೀಯತೆ ಬಗ್ಗೆ ಮಾತನಾಡಿದರೆ, ಅವರು ಜಾತೀಯತೆ ಬಗ್ಗೆ ಮಾತನಾಡುತ್ತಾರೆ. ನಾವು ಅಭಿವೃದ್ಧಿ ಬಗ್ಗೆ ಮಾತನಾಡಿದರೆ, ಅವರು ಧಾರ್ಮಿಕತೆ ಬಗ್ಗೆ ಮಾತನಾಡುತ್ತಾರೆ. ನಾವು ಗನ್ನಾ(ಬೆಲ್ಲ)ದ ಬಗ್ಗೆ ಮಾತನಾಡಿದರೆ, ಅವರು ಜಿನ್ನಾ ಬಗ್ಗೆ ಮಾತನಾಡುತ್ತಾರೆ," ಎಂದು ದೂಷಿಸಿದ್ದಾರೆ.

ರಾಜ್ಯದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕೊವಿಡ್-19 ಲಸಿಕೆ ಬಗ್ಗೆ ಪ್ರಚಾರ ಮಾಡಿದವರಿಗೆ ಮತ ನೀಡಿಬೇಕೇ ಹೊರತೂ, ಅಪರಾಧಿಗಳ ಬಗ್ಗೆ ಪ್ರಚಾರ ಮಾಡುವ ಮಾಫಿಯಾ ರಾಜರಿಗೆ ಮತ ಹಾಕಬೇಡಿ ಎಂದು ಮನವಿ ಮಾಡಿಕೊಂಡರು. ಸಮಾಜವಾದಿ ಪಕ್ಷದ ಮುಖ್ಯಸ್ಥ ಹಾಗೂ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ನಾನು ಪ್ರಶ್ನಿಸುತ್ತೇನೆ. ಅವರು ಎಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ ಎಂಬುದನ್ನು ತೋರಿಸಲಿ ಎಂದು ಸವಾಲು ಹಾಕಿದ್ದಾರೆ.
ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಎರಡು ಕೋಟಿ ಯುವ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ಮತ್ತು ಟ್ಯಾಬ್ಲೆಟ್ ಅನ್ನು ವಿತರಣೆ ಮಾಡಲಾಗುವುದು ಎಂದು ಘೋಷಿಸಿದರು. ಬಿಜೆಪಿ ಸರ್ಕಾರವು ಒಂದು ಕೋಟಿ ಯುವಕರಿಗೆ ಸ್ಮಾರ್ಟ್ ಫೋನ್ ಮತ್ತು ಟ್ಯಾಬ್ಲೆಟ್ ವಿತರಿಸುವುದಾಗಿ ಘೋಷಿಸಿತ್ತು. ಆದರೆ, ಅದರ ವಿರುದ್ಧ ಯುವಕರಿಗೆ ಈ ಗ್ಯಾಜೆಟ್ ಅನ್ನು ನೀಡಬಾರದು ಎಂದು ಸಮಾಜವಾದಿ ಪಕ್ಷವು ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಅದಾಗ್ಯೂ ಪರವಾಗಿಲ್ಲ, ಒಂದು ವೇಳೆ ನಾವು ಅಧಿಕಾರಕ್ಕೆ ಬಂದರೆ ಎರಡು ಕೋಟಿ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಫೋನ್ ಮತ್ತು ಟ್ಯಾಬ್ಲೆಟ್ ಅನ್ನು ವಿತರಿಸುತ್ತೇವೆ," ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ.
ಲಖಿಂಪುರ ಹಿಂಸಾಚಾರ ಕೇಸ್: ಆಶಿಶ್ ಮಿಶ್ರಾ ಜಾಮೀನಿನ ಹಿಂದೆ ಬಿಜೆಪಿ ಕ್ಷುಲ್ಲಕ ರಾಜಕಾರಣ
ಫೆಬ್ರವರಿ 14ರಂದು ಎರಡನೇ ಹಂತದ ಮತದಾನ:
ಉತ್ತರ ಪ್ರದೇಶದಲ್ಲಿ ಫೆಬ್ರವರಿ 14ರಂದು ಎರಡನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಲಿದೆ. ಎರಡನೇ ಹಂತದಲ್ಲಿ ರಾಜ್ಯದ 9 ಜಿಲ್ಲೆಗಳ 55 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಶಹರಾಂಪುರ್, ಶಹಜಹಾನ್‌ಪುರ, ಬಿಜ್ನೂರ್, ಅಮ್ರೋಹಾ, ಸಂಭಾಲ್, ಮೊರದಾಬಾದ್, ರಾಂಪುರ್, ಬರೇಲಿ, ಬುದೌನ್ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.












Click it and Unblock the Notifications