ದಲಿತರೊಂದಿಗೆ ಚಹಾಕೂಟ ನಡೆಸುವಂತೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ
ಲಕ್ನೋ, ನವೆಂಬರ್ 15: ದಲಿತರೊಂದಿಗೆ ಚಹಾ ಕೂಟ ನಡೆಸುವಂತೆ ಕಾರ್ಯಕರ್ತರಿಗೆ ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್‌ಸಿಂಗ್ ಸಲಹೆ ನೀಡಿದ್ದಾರೆ.
ಚುನಾವಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರಿಗೆ ಕರೆ ನೀಡಿರುವ ಸ್ವತಂತ್ರ ದೇವ್ ಸಿಂಗ್, ನೂರು ದಲಿತರೊಂದಿಗೆ ಚಹಾ ಸೇವಿಸಿ, ಮತ ಚಲಾಯಿಸಬೇಕಾಗಿರುವುದು ರಾಷ್ಟ್ರೀಯತೆಯ ಆಧಾರದಲ್ಲಿ, ಜಾತಿ, ಹಣ ಅಥವಾ ಧರ್ಮದ ಆಧಾರದಲ್ಲಿ ಅಲ್ಲ ಎಂಬುದನ್ನು ಅವರಿಗೆ ಮನವರಿಕೆ ಮಾಡಿಕೊಡಬೇಕು. 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಚಲಾಯಿಸುವಂತೆ ಮನವೊಲಿಸಬೇಕು ಎಂದು ಸೂಚಿಸಿದ್ದಾರೆ.
ದೇಶದಲ್ಲೇ ಮೊದಲು: ಉತ್ತರ ಪ್ರದೇಶದಲ್ಲಿ ಹಸುಗಳ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ಸೇವೆ
ಅಯೋಧ್ಯೆ ರಾಮ ಮಂದಿರ ಬಿಜೆಪಿಗೆ ವರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿರುವುದು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ವರವಾಗಿ ಪರಿಣಮಿಸಲಿದೆ ಎಂದು ಸಮೀಕ್ಷೆಯೊಂದು ಹೇಳಿದೆ.
ಎಬಿಪಿ, ಸಿ-ವೋಟರ್ ಸಮೀಕ್ಷೆ ಈ ವರದಿ ನೀಡಿದೆ, ಉತ್ತರ ಪ್ರದೇಶ, ಪಂಜಾಬ್ ಸೇರಿದಂತೆ ಮುಂದಿನ ವರ್ಷ ವಿಧಾನಸಭಾ ಚುನಾವಣೆಯನ್ನು ಎದುರಿಸಲಿರುವ ಐದು ರಾಜ್ಯಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.
ಶೇ.63.3ರಷ್ಟು ಮತದಾರರು ರಾಮಮಂದಿರ ನಿರ್ಮಾಣವು ಬಿಜೆಪಿಗೆ ಸಹಾಯ ಮಾಡುತ್ತದೆ ಎಂದು ಭಾವಿಸಿದರೆ, ಶೇ.39.7ರಷ್ಟು ಜನರು ಇದು ನೆರವಿಗೆ ಬರುವುದಿಲ್ಲ ಎಂದು ಹೇಳಿದ್ದಾರೆ.
ಚುನಾವಣಾ ಮೈತ್ರಿ ಇಲ್ಲ: ಯಾವುದೇ ರಾಜಕೀಯ ಪಕ್ಷ ತನ್ನೊಂದಿಗೆ ಮೈತ್ರಿ ಮಾಡಿಕೊಳ್ಳಲು ಆಸಕ್ತಿ ಹೊಂದಿಲ್ಲ ಎಂಬ ವಾಸ್ತವವನ್ನು ಕಾಂಗ್ರೆಸ್ ಒಪ್ಪಿಕೊಂಡಂತೆ ತೋರುತ್ತಿದೆ.
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇತರ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿಯ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಿರುವ ಐಎಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭಾನುವಾರದ ಹೇಳಿಕೆಯಲ್ಲಿಯೇ ಇದು ಚೆನ್ನಾಗಿ ಪ್ರತಿಫಲಿಸುತ್ತಿದೆ.
ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇತರ ರಾಜಕೀಯ ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವ ಯಾವುದೇ ಸಾಧ್ಯತೆಗಳನ್ನು ತಳ್ಳಿಹಾಕಿದಾಗ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಭಾನುವಾರದ ಹೇಳಿಕೆಯಲ್ಲಿ ಇದು ಚೆನ್ನಾಗಿ ಪ್ರತಿಫಲಿಸುತ್ತದೆ.
ಬುಲಂದರ್ ಶಹರ್ ನಲ್ಲಿ ಭಾನುವಾರ ನಡೆದ ಪಕ್ಷದ ಸಭೆಯೊಂದರಲ್ಲಿ ಮಾತನಾಡಿರುವ ಪ್ರಿಯಾಂಕಾ ಗಾಂಧಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಮಾತ್ರ ನಾವು ನಾಮನಿರ್ದೇಶನ ಮಾಡುತ್ತೀವಿ. ಒಂದು ವೇಳೆ ಕಾಂಗ್ರೆಸ್ ಗೆಲುವು ಸಾಧಿಸಿದರೆ, ಅದು ತನ್ನ ಸ್ವಂತ ಸಾಮರ್ಥ್ಯದಿಂದ ಗೆಲುವು ಸಾಧಿಸಲಿದೆ ಎಂದು ಹೇಳಿದರು.
ಈ ಹಿಂದಿನ ಅನುಭವದಿಂದ ಪಾಠ ಕಲಿತಿರುವುದರಿಂದ ಯಾವುದೇ ಪ್ರಮುಖ ರಾಜಕೀಯ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕಳೆದ ತಿಂಗಳು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದರು.