ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮ ಜನ್ಮಭೂಮಿ ಟ್ರಸ್ಟ್ ಸದಸ್ಯರ ಜೊತೆ ಯೋಗಿ ಆದಿತ್ಯನಾಥ್ ಚರ್ಚೆ

|
Google Oneindia Kannada News

ಲಕ್ನೌ, ಜುಲೈ 25: ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯಕ್ರಮ ನೆರವೇರಿಸಲು ದಿನಾಂಕ ನಿಗದಿಯಾಗಿದ್ದು, ಈ ಹಿನ್ನೆಲೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದರು.

Recommended Video

ಚೀನಾಗಿಂತ ಭಾರತದ ವಾಯುಪಡೆ ಅಪ್ಡೇಟ್ ಆಗಿದೆ | Oneindia Kannada

ಆಗಸ್ಟ್ 5 ರಂದು ನಡೆಯಲಿರುವ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಧ್ಯಾಹ್ನ 12.15ಕ್ಕೆ ರಾಮ ಜನಮಭೂಮಿ ನಿರ್ಮಾಣಕ್ಕೆ ಅಡಿಪಾಯ ಹಾಕಲಿದ್ದಾರೆ.

ಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತಅಯೋಧ್ಯೆ ರಾಮ ಮಂದಿರ ಶಿಲಾನ್ಯಾಸಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕೃತ

ಈ ಹಿನ್ನೆಲೆ ಇಂದು ಅಯೋಧ್ಯೆಗೆ ಭೇಟಿ ನೀಡಿದ ಸಿಎಂ ಯೋಗಿ ಆದಿತ್ಯನಾಥ್, ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರ ಜೊತೆ ಚರ್ಚೆ ನಡೆಸಿದರು. ಅದಕ್ಕೂ ಮುಂಚೆ ರಾಮನ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Up Cm Yogi Adityanath Hold Meeting With Ram Janmabhoomi Trust Members

ಭೂಮಿ ಪೂಜೆ ಕಾರ್ಯಕ್ರಮದ ಸಿದ್ಧತೆ ಮತ್ತು ಆಯೋಜನೆ ಕುರಿತು ಟ್ರಸ್ಟ್ ಹಾಗೂ ಸ್ಥಳಿಯ ಆಡಳಿತ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು. ಕೊರೊನಾ ಭೀತಿ ಇರುವುದರಿಂದ ಅನ್‌ಲಾಕ್‌ ನಿಯಮಗಳನ್ನು ಪಾಲಿಸಬೇಕಾದ ಅನಿವಾರ್ಯತೆ ಇದೆ. ಹಾಗಾಗಿ, ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸದಂತೆ ನೋಡಿಕೊಳ್ಳಬೇಕಿದೆ. ಈ ನಿಟ್ಟಿನಲ್ಲಿ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು.

Up Cm Yogi Adityanath Hold Meeting With Ram Janmabhoomi Trust Members

ಇನ್ನು ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಕ್ಕೆ ತಡೆ ನೀಡಬೇಕೆಂದು ದೆಹಲಿ ಮೂಲದ ಪತ್ರಕರ್ತರೊಬ್ಬರು ಅಲಹಾಬಾದ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಲಾಕ್‌ಡೌನ್ ನಿಯಮ ಉಲ್ಲಂಘನೆಯಾಗಲಿದೆ ಎಂದು ದೂರಿದ್ದರು. ಆದರೆ, ನ್ಯಾಯಾಲಯ ಈ ಅರ್ಜಿಯನ್ನಿ ತಿರಸ್ಕರಿಸಿದೆ. ಈ ಆರೋಪದಲ್ಲಿ ವಾಸ್ತವತೆ ಇಲ್ಲ ಎಂದು ನಿರಾಕರಿಸಿದೆ.

English summary
Uttar Pradesh Chief Minister Yogi Adityanath is holding a meeting with the members of Shri Ram Janmabhoomi Teerth Kshetra Trust and local administration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X