ಮುಲಾಯಂ ಸಿಂಗ್ ಭೇಟಿಯಾದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್

ಲಕ್ನೋ, ಜೂನ್ 10: ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರನ್ನು ಹಾಲೀ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.

ಭಾನುವಾರ ರಾತ್ರಿ ಮುಲಾಯಂ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಅವರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶುಗರ್ ಲೆವೆಲ್ ನಲ್ಲಿ ಸುಧಾರಣೆಯಾದ ನಂತರ, ಅವರನ್ನು ಸೋಮವಾರ ಸಂಜೆ ಡಿಸ್ಚಾರ್ಜ್ ಮಾಡಲಾಗಿದೆ.

ಯೋಗಿ ಆದಿತ್ಯನಾಥ್, ಮುಲಾಯಂ ನಿವಾಸದಲ್ಲಿ ಅವರನ್ನು ಭೇಟೀಯಾಗುವ ವೇಳೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಮುಲಾಯಂ ಸಹೋದರ ಶಿವಪಾಲ್ ಯಾದವ್ ಕೂಡಾ ಹಾಜರಿದ್ದರು.

UP CM Yogi Adityanath met former CM Mulayam Singh Yadav at his Lucknow residence

ಕಳೆದ ಲೋಕಸಭಾ ಚುನಾವಣೆಯಲ್ಲಿ ಮುಲಾಯಂ ಸಿಂಗ್ ಯಾದವ್, ಮಣಿಪುರಿ ಕ್ಷೇತ್ರದಿಂದ ಜಯಶೀಲರಾಗಿದ್ದರು. ಅವರು ತಮ್ಮ ಬಿಜೆಪಿ ಪ್ರತಿಸ್ಪರ್ಧಿ ಪ್ರೇಮ್ ಸಿಂಗ್ ಶಕ್ಯ ಅವರನ್ನು 94,389 ಮತಗಳ ಅಂತರದಿಂದ ಸೋಲಿಸಿದ್ದರು.

ಕಳೆದ ಏಪ್ರಿಲ್ ತಿಂಗಳಲ್ಲೂ ಮಧುಮೇಹ ತೊಂದರೆಯಿಂದ ಬಳಲುತ್ತಿದ್ದ ಮುಲಾಯಂ ಸಿಂಗ್ ಅವರನ್ನು, ಲಕ್ನೋದಲ್ಲಿರುವ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇಂದು (ಜೂ 10) ಮುಲಾಯಂ ಅವರನ್ನು ಭೇಟಿಯಾದ ಯೋಗಿ, ಅವರಿಗೆ ಗುಲಾಬಿ ಹೂವು ಮತ್ತು ಪುಸ್ತಕವನ್ನು ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+