ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download
LIVE

Yogi Adityanath Swearing-in Live; ಯುಪಿಯಲ್ಲಿ 2ನೇ ಬಾರಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ

|
Google Oneindia Kannada News

ಲಕ್ನೋ, ಮಾರ್ಚ್ 25; ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದಿರುವ ಬಿಜೆಪಿ ಶುಕ್ರವಾರದಿಂದ ರಾಜ್ಯದಲ್ಲಿ ಆಡಳಿತ ನಡೆಸಲಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.

403 ಸದಸ್ಯ ಬಲದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 255 ಸ್ಥಾನಗಳಲ್ಲಿ ಜಯಗಳಿಸಿದೆ. ಗುರುವಾರ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಯೋಗಿ ಆದಿತ್ಯನಾಥ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ಶುಕ್ರವಾರ ಸಂಜೆ 4 ಗಂಟೆಗೆ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಬಿಜೆಪಿ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

UP CM Yogi Adityanath Swearing in Ceremony Live Updates and Highlights in Kannada

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಯೋಗಿ ಆದಿತ್ಯನಾಥ್ ಆಯ್ಕೆಯಾಗಿದ್ದಾರೆ. 2017ರ ಚುನಾವಣೆಯಲ್ಲಿ ಪಕ್ಷ ಜಯಗಳಿಸಿದಾಗ ಮಾರ್ಚ್ 17ರಂದು ಅವರು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು.

Newest FirstOldest First
4:11 PM, 25 Mar
ಉತ್ತರ ಪ್ರದೇಶ

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಕಾರ್ಯಕ್ರಮಕ್ಕಾಗಿ ಏಕನಾ ಕ್ರಿಕೆಟ್ ಮೈದಾನದಲ್ಲಿ ನೆರೆದ ಜನಸಮೂಹ.
4:08 PM, 25 Mar
ಉತ್ತರ ಪ್ರದೇಶ

ಯೋಗಿ ಆದಿತ್ಯನಾಥ್ ಜೊತೆಗೆ ಇಬ್ಬರು ಉಪ ಮುಖ್ಯಮಂತ್ರಿಗಳಾಗಿ ಪ್ರಮಾಣವಚನ. ಎರಡನೇ ಬಾರಿ ಡಿಸಿಎಂ ಆಗುತ್ತಿರುವ ಕೇಶವ ಪ್ರಸಾದ್ ಮೌರ್ಯ. ಯೋಗಿ ಸರ್ಕಾರದಲ್ಲಿ ಬ್ರಿಜೇಶ್ ಪಠಾಕ್ ಅವರಿಗೂ ಉಪ ಮುಖ್ಯಮಂತ್ರಿ ಪಟ್ಟ.
4:06 PM, 25 Mar
ಉತ್ತರ ಪ್ರದೇಶ

ಲಕ್ನೋದ ಏಕನಾ ಕ್ರಿಕೆಟ್ ಕ್ರೀಡಾಂಗಣದ ಭವ್ಯ ವೇದಿಕೆಯಲ್ಲಿ ಉತ್ತರ ಪ್ರದೇಶದಲ್ಲಿ 2ನೇ ಬಾರಿ ಮುಖ್ಯಮಂತ್ರಿ ಆಗಿ ಪ್ರಮಾಣವಚನ ಸ್ವೀಕರಿಸಿದ ಯೋಗಿ ಆದಿತ್ಯನಾಥ್.
4:03 PM, 25 Mar
ಉತ್ತರ ಪ್ರದೇಶ

ಯುಪಿ ಸಿಎಂ-ನಿಯೋಜಿತ ಯೋಗಿ ಆದಿತ್ಯನಾಥ್ ಅವರು ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂಗೆ ಆಗಮಿಸಿದ್ದು, ಅಲ್ಲಿ ಅವರು ಸತತ 2ನೇ ಅವಧಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
3:56 PM, 25 Mar
ಉತ್ತರ ಪ್ರದೇಶ

ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿ 2ನೇ ಬಾರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಲಕ್ನೋಗೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ.
3:46 PM, 25 Mar
ಉತ್ತರ ಪ್ರದೇಶ

ಉತ್ತರ ಪ್ರದೇಶ ಸಿಎಂ ಆಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸುತ್ತಿರುವ ಬಿಜೆಪಿಯ ಯೋಗಿ ಆದಿತ್ಯನಾಥ್ ಅವರ ಪೂರ್ವಿಕರ ನಿವಾಸ ಪೌರಿ ಗರ್ವಾಲ್ ಜಿಲ್ಲೆಯ ಪಂಚೂರ್ ಗ್ರಾಮದಲ್ಲಿ ಜನರು ಸಂಭ್ರಮಾಚರಣೆ ನಡೆಸಿದರು.
3:41 PM, 25 Mar
ಉತ್ತರ ಪ್ರದೇಶ

ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೂ ಮುನ್ನ ಲಕ್ನೋದ ವಾಜಪೇಯಿ ಸ್ಟೇಡಿಯಂನಲ್ಲಿ ಬಿಜೆಪಿ ಗೋರಖ್‌ಪುರ ಸಂಸದ ರವಿ ಕಿಶನ್ ಭಾಷಣ.
Advertisement
3:35 PM, 25 Mar
ಉತ್ತರ ಪ್ರದೇಶ

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೊತೆ ಒಟ್ಟು 52 ಸಚಿವರು ಪ್ರಮಾಣವಚನ ಸ್ವೀಕರಿಸುವ ನಿರೀಕ್ಷೆಯಿದೆ.
3:17 PM, 25 Mar
ಉತ್ತರ ಪ್ರದೇಶ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಯೋಗಿ ಆದಿತ್ಯನಾಥ್ ಲಕ್ನೋ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ.
3:15 PM, 25 Mar
ಉತ್ತರ ಪ್ರದೇಶ

ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಯೋಗಿ ಆದಿತ್ಯನಾಥ್ ಎರಡನೇ ಬಾರಿಗೆ ಉತ್ತರ ಪ್ರದೇಶದ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು.
3:11 PM, 25 Mar
ಉತ್ತರ ಪ್ರದೇಶ

ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿ 2ನೇ ಬಾರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಲು ಕ್ಷಣಗಣನೆ.
2:24 PM, 25 Mar
ಉತ್ತರ ಪ್ರದೇಶ

ನೂತನವಾಗಿ ಚುನಾಯಿತ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಪೂರ್ವಭಾವಿಯಾಗಿ ಭಾರತೀಯ ಜನತಾ ಪಕ್ಷದ ಬೆಂಬಲಿಗರು ಶುಕ್ರವಾರ ರಾಜ್ಯಾದ್ಯಂತ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
Advertisement
1:19 PM, 25 Mar
ಉತ್ತರ ಪ್ರದೇಶ

ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪದಗ್ರಹಣಕ್ಕೆ ಅದ್ಧೂರಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಸಾವಿರಾರು ಜನರು ಈ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
1:17 PM, 25 Mar
ಉತ್ತರ ಪ್ರದೇಶ

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸಮಾರಂಭಕ್ಕಾಗಿ ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂ ಅಣಿಯಾಗಿದೆ.
12:12 PM, 25 Mar
ಉತ್ತರ ಪ್ರದೇಶ

‘ಬಡವರಿಗೂ ಮನೆಗಳನ್ನು ನಿರ್ಮಿಸಿಕೊಡಬಹುದು ಎಂದು ಮೊದಲ ಬಾರಿಗೆ ಜನರು ಭಾವಿಸಿದ್ದು, ಮೊದಲ ಬಾರಿಗೆ ನೇರವಾಗಿ ಬಡವರ ಖಾತೆಗೆ ಹಣ ಹೋಗಬಹುದು ಎಂಬ ಅಭಿಪ್ರಾಯ ಮೂಡಿದೆ. ಹಬ್ಬಗಳನ್ನು ಈಗ ಶಾಂತಿಯುತವಾಗಿ ಆಚರಿಸಬಹುದು ಎಂದು ಯೋಗಿ ಆದಿತ್ಯನಾಥ್ ಹೇಳಿದರು.
12:10 PM, 25 Mar
ಉತ್ತರ ಪ್ರದೇಶ

ಯೋಗ ಗುರು ರಾಮದೇವ್, "ದಿ ಕಾಶ್ಮೀರ್ ಫೈಲ್ಸ್" ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ನಟ ಅನುಪಮ್ ಖೇರ್ ಕೂಡ ಆಹ್ವಾನಿತರ ಪಟ್ಟಿಯಲ್ಲಿ ಗುರುತಿಸಿಕೊಂಡಿದ್ದಾರೆ.
12:09 PM, 25 Mar
ಉತ್ತರ ಪ್ರದೇಶ

ಯೋಗಿ ಪ್ರಮಾಣವಚನಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಸದಸ್ಯರೊಂದಿಗೆ ಪ್ರಮುಖ ದಾರ್ಶನಿಕರನ್ನು ಆಹ್ವಾನಿಸಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ ರಾಜ್ಯ ಮಟ್ಟದ ಕಾರ್ಯಾಧ್ಯಕ್ಷ ದಿನೇಶ್ ಶಂಕರ್ ತಿಳಿಸಿದ್ದಾರೆ.
12:08 PM, 25 Mar
ಉತ್ತರ ಪ್ರದೇಶ

ಮೊದಲ ಬಾರಿಗೆ ಮುಖ್ಯಮಂತ್ರಿಯಾದಾಗ ಆಡಳಿತಾತ್ಮಕ ಅನುಭವವಿರಲಿಲ್ಲ ಎಂದು ಆದಿತ್ಯನಾಥ್ ಹೇಳಿದರು. ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ನೀಡಲು ಮಾರ್ಗದರ್ಶನ ನೀಡಿದ ಮೋದಿ ಮತ್ತು ಶಾ ಅವರಿಗೆ ಧನ್ಯವಾದ ಅರ್ಪಿಸಿದರು.
10:01 AM, 25 Mar

ಕೇಂದ್ರ ಸಚಿವರಾದ ಅಮಿತ್ ಶಾ, ಅನುರಾಗ್ ಠಾಕೂರ್, ಮುಖ್ತಾರ್ ಅಬ್ಬಾಸ್ ನಖ್ವಿ, ನರೇಂದ್ರ ಸಿಂಗ್ ತೋಮರ್, ಧರ್ಮೇಂದ್ರ ಪ್ರಧಾನ್, ನಿತಿನ್ ಗಡ್ಕರಿ, ಪಿಯೂಷ್ ಗೋಯಲ್, ಭೂಪೇಂದ್ರ ಯಾದವ್, ಮಹೇಂದ್ರ ನಾಥ್ ಪಾಂಡೆ, ಸ್ಮೃತಿ ಇರಾನಿ, ಹರ್ದೀಪ್ ಸಿಂಗ್ ಪುರಿ, ಅನ್ನಪೂರ್ಣ ಯಾದವ್, ಶೋಭಾ ಕರಂದ್ಲಾಜೆ ಭಾಗವಹಿಸುವ ಸಾಧ್ಯತೆಯಿದೆ.
10:00 AM, 25 Mar

ಬಿಜೆಪಿ ಆಡಳಿತವಿರುವ ಇತರ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ಪುಷ್ಕರ್ ಸಿಂಗ್ ಧಾಮಿ ಮತ್ತು ಬಸವರಾಜ ಬೊಮ್ಮಾಯಿಗೂ ಆಹ್ವಾನ ನೀಡಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಕೂಡ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.
8:09 AM, 25 Mar

ಲಕ್ನೋದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಆಡಳಿತವಿರುವ 12 ರಾಜ್ಯಗಳ ಸಿಎಂಗಳು, ಬಿಜೆಪಿ ಹಿರಿಯ ನಾಯಕರು ಮತ್ತು ಹಿರಿಯ ನಾಯಕರು ಭಾಗವಹಿಸುವ ಸಾಧ್ಯತೆಯಿದೆ.
8:09 AM, 25 Mar

ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಯುಪಿ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್ ಮತ್ತು ಮಾಯಾವತಿ ಅವರಿಗೆ ಖುದ್ದಾಗಿ ಕರೆ ಮಾಡಿ ಆಹ್ವಾನಿಸಿದ್ದಾರೆ.
8:09 AM, 25 Mar
ಉತ್ತರ ಪ್ರದೇಶ

ಶುಕ್ರವಾರ ಸಂಜೆ 4 ಗಂಟೆಗೆ ಲಕ್ನೋದಲ್ಲಿರುವ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನೂತನ ಮುಖ್ಯಮಂತ್ರಿ ಆಗಿ ಯೋಗಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
9:37 PM, 24 Mar

ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ.
9:37 PM, 24 Mar

ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್ ಯೋಗಿ ಆದಿತ್ಯನಾಥ್‌ಗೆ ಪ್ರಮಾಣ ವಚನ ಬೋಧಿಸಲಿದ್ದಾರೆ.

English summary
Yogi Adityanath Swearing in Live Updates in Kannada: BJP's Yogi Adityanath to take oath as Uttar Pradesh chief minister on March 25. Check Live updates, news and Highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X