ತನ್ನ ವಿರುದ್ಧದ ಪ್ರಕರಣಗಳನ್ನು ಒಂದೊಂದಾಗಿ ರದ್ದುಪಡಿಸಿಕೊಳ್ಳುತ್ತಿದ್ದಾರೆ ಯೋಗಿ: ಬಿಎಸ್‌ಪಿ ಸಂಸದ

ಲಕ್ನೋ, ಮಾರ್ಚ್ 13: ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತಮ್ಮ ವಿರುದ್ಧದ ಪ್ರಕರಣಗಳನ್ನು ಒಂದೊಂದಾಗಿ ರದ್ದುಪಡಿಸಿಕೊಳ್ಳುತ್ತಿದ್ದಾರೆ ಎಂದು ಬಿಎಸ್‌ಪಿ ಸಂಸದ ಅಫ್ಜಲ್ ಅನ್ಸಾರಿ ಆರೋಪಿಸಿದ್ದಾರೆ.

ಬಲ್ಲಿಯಾ ಜಿಲ್ಲೆಯ ಬೆಳ್ತಾರಾ ರಸ್ತೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಶುಕ್ರವಾರ ಮಾತನಾಡಿರುವ ಅವರು, ಉತ್ತರಪ್ರದೇಶ ರಾಜ್ಯವನ್ನು ಈಗಾಗಲೇ ನಾಲ್ಕು ಭಾಗಗಳನ್ನಾಗಿ ಮಾಡಿದೆ ಎಂದು ಕಿಡಿಕಾರಿದ್ದಾರೆ. ಬಿಜೆಪಿ ದ್ವೇಷದ ರಾಜಕೀಯದಲ್ಲಿ ತೊಡಗಿಕೊಂಡಿದೆ. ಇದರಿಂದ ಹಲವು ವರ್ಷಗಳಿಂದ ದೇಶದ ಸಾಮಾಜಿಕ ಸಾಮರಸ್ಯವನ್ನು ನಾಶಪಡಿಸುತ್ತಿದೆ.

ಮಾಫಿಯಾ ಮೇಲೆ ಬುಲ್ಡೋಜರ್ ಹರಿಸುವುದಾಗಿ ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ. ಆದರೆ, ತಮ್ಮ ವಿರುದ್ಧ ಹಾಗೂ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಗಳನ್ನು ಒಂದೊಂದಾಗಿ ರದ್ದುಪಡಿಸುತ್ತಿದ್ದಾರೆ. ಇದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ.

UP CM Yogi Adityanath Withdrawing Cases Against Himself, Alleges BSP MP

ಇದೇ ವೇಳೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಗಂಭೀರ ಆರೋಪ ಮಾಡಿರುವ ಅವರು, ಯೋಗಿ ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದಾಗಿನಿಂದ ತಮ್ಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಒಂದೊಂದಾಗಿ ರದ್ದುಪಡಿಸುತ್ತಿದ್ದಾರೆ. ಈ ಮೂಲಕ ಮಿಸ್ಟರ್ ಕ್ಲೀನ್ ಎಂಬ ಬಿರುದು ಪಡೆದುಕೊಳ್ಳಲು ಸಜ್ಜಾಗುತ್ತಿದ್ದಾರೆಂದು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+