• search
  • Live TV
ಲಕ್ನೋ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪ್ರತಿ ತಿಂಗಳು ಪತಿಗೆ ಜೀವನಾಂಶ ನೀಡುವಂತೆ ಪತ್ನಿಗೆ ಕೋರ್ಟ್ ಆದೇಶ

|

ಲಕ್ನೋ, ಅಕ್ಟೋಬರ್ 23: ಪ್ರತಿ ತಿಂಗಳು ಪತಿಗೆ ಜೀವನಾಂಶ ನೀಡುವಂತೆ ಪತ್ನಿಗೆ ಹೈಕೋರ್ಟ್ ಆದೇಶ ನೀಡಿದೆ.

ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶ ನೀಡಿದ್ದು, 62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ ಬೇರೆ ಯಾವುದೇ ಆದಾಯ ಮೂಲವಿಲ್ಲ.

ನ.24ರೊಳಗೆ ಕೋರ್ಟ್‌ಗೆ ಹಾಜರಾಗದಿದ್ದರೆ ಷರೀಫ್ ಘೋಷಿತ ಅಪರಾಧಿ

ಆದರೆ 58 ವರ್ಷದ ಇವರ ಪತ್ನಿ ಮುನ್ನಿ ದೇವಿ ಸೇನೆಯಿಂದ ನಿವೃತ್ತಿ ಹೊಂದಿದವರಾಗಿದ್ದಾರೆ. ಹೀಗಾಗಿ ಇವರಿಗೆ 12 ಸಾವಿರ ರೂ. ಪೆನ್ಷನ್ ಬರುತ್ತದೆ. ಇದರಲ್ಲಿ 2 ಸಾವಿರ ರೂ. ನೀಡುವಂತೆ ಕೋರ್ಟ್ ಆದೇಶಿಸಿದೆ.

ಮಹಿಳೆಯರು ಗಂಡನಿಗೆ ಜೀವನಾಂಶ ಕೊಡುವ ಪ್ರಕರಣಗಳು ತೀರಾ ವಿರಳ, ಹೀಗಾಗಿ ಸೊಹಂಕರ್‍ಗೆ ಮಾಸಿಕ ಜೀವನಾಂಶ ನೀಡುವ ಕುರಿತು ಮುನ್ನಿ ದೇವಿಗೆ ನಿರ್ದೇಶನ ನೀಡುವಂತೆ ನ್ಯಾಯಾಲಯಕ್ಕೆ ಮನವರಿಕೆ ಮಾಡಲು ಸ್ವಲ್ಪ ಸಮಯ ಹಿಡಿಯಿತು ಎಂದು ವಕೀಲರು ಮಾಹಿತಿ ನೀಡಿದ್ದಾರೆ.

ಆರಂಭದಲ್ಲಿ ಕಿಶೋರಿ ಲಾಲ್ ಸೊಹಂಕರ್ ಪತ್ನಿಯನ್ನು ಮನೆಗೆ ಬರುವಂತೆ ನಿರ್ದೇಶಿಸಬೇಕೆಂದು ಕೌಟುಂಬಿಕ ನ್ಯಾಯಾಲಯದ ಮೊರೆ ಹೋಗಿದ್ದಾರೆ. ಆದರೆ ಪತ್ನಿ ಇವರ ಜೊತೆಗೆ ಇರಲು ಒಪ್ಪಿಲ್ಲ.

ಹೀಗಾಗಿ ಸೊಹಂಕರ್ ತನ್ನ ಜೀವನ ನಿರ್ವಹಣೆಗೆ ಪ್ರತಿ ತಿಂಗಳ ಹಣ ಕೊಡಿಸುವಂತೆ ಕೋರ್ಟ್ ಬಳಿ ಮನವಿ ಮಾಡಿದರು ಎಂದು ಸೊಹಂಕರ್ ಪರ ವಕೀಲ ಬಿ.ಕೆ.ತಾಯಲ್ ಅವರು ತಿಳಿಸಿದ್ದಾರೆ. ಕಿಶೋರ್ ಲಾಲ್ ಸೊಹಂಕರ್ ಮುಜಾಫರ್ ನಗರದ ಖಟುವಾಲಿಯಲ್ಲಿ ಟೀ ಅಂಗಡಿ ಇಟ್ಟುಕೊಂಡಿದ್ದಾರೆ.

English summary
A court in Uttar Pradesh's Muzaffarnagar district has ordered a 58-year-old woman to pay monthly alimony to her estranged husband who owns a tea stall.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X