ಡಿ.17, 18ರಂದು ಮಾಜಿ ಕ್ಷೇತ್ರ ಅಮೇಥಿಗೆ ರಾಹುಲ್ ಗಾಂಧಿ ಭೇಟಿ

ಲಕ್ನೋ, ಡಿಸೆಂಬರ್ 13: ಮುಂದಿನ‌ ವರ್ಷ ನಡೆಯುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷ ಯೋಜಿಸುತ್ತಿದ್ದು, ಇದಕ್ಕಾಗಿ ಮಹಿಳಾ ಮತದಾರರನ್ನು ಸೆಳೆಯಲು ಶೇಕಡಾ ‌40ರಷ್ಟು ಟಿಕೆಟ್‌ಗಳನ್ನು ಮಹಿಳೆಯರಿಗೆ ನೀಡಲು ನಿರ್ಧರಿಸಿದೆ.‌

ಅಲ್ಲದೆ ಈ ಬಾರಿ ತನ್ನ ಪ್ರಣಾಳಿಕೆಯಲ್ಲಿ ವಿಶಿಷ್ಟವಾದ ಘೋಷಣೆ ಮಾಡಲು ತಯಾರಿ ನಡೆಸಿರುವ ಕಾಂಗ್ರೆಸ್. ಮಹಿಳೆಯರಿಗೆ ಪ್ರತ್ಯೇಕವಾದ ಪ್ರಣಾಳಿಕೆ ಬಿಡುಗಡೆ ಮಾಡಲಿದೆ ಎಂದು ತಿಳಿದುಬಂದಿದೆ. ಹೀಗೆ ಉತ್ತರ ಪ್ರದೇಶ ಚುನಾವಣೆಯಲ್ಲಿ "ಮಹಿಳಾ ಅಸ್ತ್ರ' ಪ್ರಯೋಗಕ್ಕೆ ಮುಂದಾಗಿರುವ ಕಾಂಗ್ರೆಸ್, ಪ್ರಿಯಾಂಕಾ ಗಾಂಧಿ ವಾದ್ರಾ ನಾಯಕತ್ವದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲು ಸನ್ನದ್ಧವಾಗುತ್ತಿದೆ.‌

ಮತ್ತೊಂದೆಡೆ ಕಾಂಗ್ರೆಸ್ ನಾಯಕ ಹಾಗೂ ಎಐಸಿಸಿ ಮಾಜಿ ಅಧ್ಯಕ್ಷರೂ ಆದ ಕೇರಳದ ವಯನಾಡು ಕ್ಷೇತ್ರದ ಸಂಸದ ರಾಹುಲ್ ಗಾಂಧಿ ಕೂಡ ಉತ್ತರ ಪ್ರದೇಶ ಚುನಾವಣೆಯತ್ತ ಗಮನಹರಿಸಿ, ಕಣಕ್ಕೆ ಇಳಿಯುತ್ತಿದ್ದಾರೆ.

UP Election 2022: Congress Leader Rahul Gandhi Will Visit Amethi Constituency on Dec 17, 18

ಇದೇ ಡಿಸೆಂಬರ್ 17 ಮತ್ತು 18ರಂದು ಈ ಹಿಂದೆ ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದ ಅಮೇಥಿ ಕ್ಷೇತ್ರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ತಮ್ಮ ತಾಯಿ ಸೋನಿಯಾ ಗಾಂಧಿ ಬಳಿಕ ರಾಹುಲ್ ಗಾಂಧಿ 2004, 2009 ಮತ್ತು 2014ರಲ್ಲಿ ಅಮೇಥಿಯಿಂದ ಗೆದ್ದು ಸಂಸದರಾಗಿದ್ದರು. ಆದರೆ 2019ರಲ್ಲಿ ಬಿಜೆಪಿಯ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು.

ಆದರೆ ಕೇರಳದ ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದಾರೆ. ಈಗ ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತ್ತೆ ತಮ್ಮ ಹಳೆಯ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ. ಡಿಸೆಂಬರ್ 17 ಮತ್ತು 18ರಂದು ಎರಡು ದಿನ ಅಮೇಥಿಯಲ್ಲಿರುವ ರಾಹುಲ್ ಗಾಂಧಿ, ಅಲ್ಲಿನ‌ ಜನರೊಂದಿಗೆ ಸಂವಾದ ನಡೆಸಲಿದ್ದಾರೆ ಎನ್ನಲಾಗಿದೆ.

ಉತ್ತರ ಪ್ರದೇಶ ಕಾಂಗ್ರೆಸ್ ಉಸ್ತುವಾರಿಯೂ ಆಗಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ವಿಧಾನಸಭೆ ಚುನಾವಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಕಳೆದ ಕೆಲವು ದಿನಗಳಿಂದ ಉತ್ತರ ಪ್ರದೇಶದಲ್ಲೇ ಬೀಡು ಬಿಟ್ಟಿದ್ದಾರೆ.

ಕಳೆದ ವಾರ ಲಕ್ನೋದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದ ಪ್ರಿಯಾಂಕಾ ಗಾಂಧಿ, "ನಾವು ಮಹಿಳಾ ಪ್ರಣಾಳಿಕೆಯನ್ನು ಸಿದ್ಧಪಡಿಸಿದ್ದೇವೆ. ಮಹಿಳೆಯರಿಗೆ ಅಧಿಕಾರ ನೀಡಲು ಬಯಸುತ್ತೇವೆ. ಮಹಿಳೆಯರ ಅಭಿಪ್ರಾಯದ ಬಗ್ಗೆ ಇರುವ ಸಂಕೋಲೆಗಳನ್ನು ಮುರಿಯುವ ವಾತಾವರಣವನ್ನು ನಾವು ನಿರ್ಮಿಸಬೇಕಾಗಿದೆ. ಈ ಮೂಲಕ ರಾಜಕೀಯ ಹಾಗೂ ಸಮಾಜದಲ್ಲಿ ಮಹಿಳೆಯರ ಪೂರ್ಣ ಪ್ರಮಾಣದ ಭಾಗವಹಿಸುವಿಕೆ ಬಗ್ಗೆ ಇರುವ ಶೋಷಣೆಯನ್ನು ಕೊನೆಗೊಳಿಸಬಹುದು,''ಎಂದು ಹೇಳಿದ್ದನ್ನು ಸ್ಮರಿಸಬಹುದು.

ಶೇ.40ರಷ್ಟು ಮಹಿಳಾ ಪ್ರಾತಿನಿಧ್ಯ
ಕಾಂಗ್ರೆಸ್ ಪಕ್ಷ ದೇಶಕ್ಕೆ ಮೊದಲ ಮಹಿಳಾ ಪ್ರಧಾನಿ (ಇಂದಿರಾ ಗಾಂಧಿ)ಯನ್ನು ನೀಡಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಸುಚೇತಾ ಕೃಪಲಾನಿ ಮೊದಲ ಮಹಿಳಾ ಸಿಎಂ ಆಗಿದ್ದರು. ಇತರ ದೇಶಗಳು ಕಡಿಮೆ ಮಹಿಳಾ ಪ್ರಾತಿನಿಧ್ಯವನ್ನು ಹೊಂದಿದ್ದಾಗ, ನಮ್ಮ ದೇಶವು ಮೊದಲ ಮಹಿಳಾ ಪ್ರಧಾನಿಯನ್ನು ಹೊಂದಿತ್ತು ಎಂದು ಹೇಳಿರುವ ಪ್ರಿಯಾಂಕಾ ಗಾಂಧಿ, ಈಗ ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಮಹಿಳೆಯರಿಗೆ ಶೇಕಡಾ 40ರಷ್ಟು ಪ್ರಾತಿನಿಧ್ಯವನ್ನು ನೀಡುತ್ತಿದೆ ಎಂದಿದ್ದಾರೆ.

ಮಹಿಳೆಯರ ಸಬಲೀಕರಣವು ಕಾಗದಕ್ಕೆ ಮಾತ್ರ ಸೀಮಿತವಾಗಿರಬಾರದು. ಯಾವಾಗ ಮಹಿಳೆಯರು ನಿಜವಾಗಿಯೂ ರಾಜಕೀಯದ ಭಾಗವಾಗುತ್ತಾರೆಯೋ, ಆಗ ಅದನ್ನು ಕಾಗದದ ಮೇಲೆ ಅಲ್ಲ ನೆಲದ ಮೇಲೆ ಜಾರಿಗೊಳಿಸಬಹುದಾದ ವಾತಾವರಣ ನಿರ್ಮಾಣ ಆಗುತ್ತದೆ ಎಂದು ಹೇಳಿದ್ದರು.

ಇತರೆ ಪಕ್ಷಗಳಿಗೆ ಸವಾಲೊಡ್ಡಿದ ಕಾಂಗ್ರೆಸ್
ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಅಸ್ತ್ರ ಪ್ರಯೋಗದ ಮೂಲಕ ಉತ್ತರಪ್ರದೇಶದ ಇತರೆ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ ಸೇರಿದಂತೆ ಸಮಾಜವಾದಿ ಪಕ್ಷ ಹಾಗೂ ಬಹುಜನ ಸಮಾಜ ಪಕ್ಷಗಳಿಗೆ ಕಾಂಗ್ರೆಸ್ ಹೊಸ ಸವಾಲನ್ನು ಒಡ್ಡಿದೆ. ಇದಲ್ಲದೆ ಈ ಎಲ್ಲಾ ಪಕ್ಷಗಳಿಗೂ ಮೊದಲೇ ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸುವುದಕ್ಕೂ ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ ಉತ್ತರ ಪ್ರದೇಶದ ಎಲ್ಲಾ 403 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂದು ಘೋಷಿಸಿರುವುದು ಯಾವುದೇ ಪಕ್ಷದೊಂದಿಗೆ ಮೈತ್ರಿ ಇಲ್ಲವೆಂದು ಸಾರಿ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+