ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಯುಪಿ ಚುನಾವಣೆ: ರೈತರ ಕೃಷಿ ಸಾಲ ಮನ್ನಾ, ನಕಲಿ ಕೇಸ್ ವಾಪಸ್; AAP ಭರವಸೆ

|
Google Oneindia Kannada News

ಲಕ್ನೋ, ಜನವರಿ 20: ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ರಾಜಕೀಯ ಪಕ್ಷಗಳು ಮತ್ತು ನಾಯಕರು ಮತದಾರರ ಮನವೊಲಿಸಲು ಜಿದ್ದಾಜಿದ್ದಿನ ಪೈಪೋಟಿಗೆ ಇಳಿದಿದ್ದಾರೆ.

ಈ ಬಾರಿಯ ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಎಂಟ್ರಿ ಕೊಟ್ಟಿರುವ ಆಮ್ ಆದ್ಮಿ ಪಕ್ಷವು, ಉತ್ತರಪ್ರದೇಶದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲಾ ರೈತರ ಸಾಲವನ್ನು ಮನ್ನಾ ಮಾಡುವುದಾಗಿ ಮತ್ತು ಅವರ ವಿರುದ್ಧ ದಾಖಲಾಗಿರುವ ಎಲ್ಲಾ "ನಕಲಿ ಪ್ರಕರಣಗಳನ್ನು" ಹಿಂಪಡೆಯುವುದಾಗಿ ಗುರುವಾರ ಭರವಸೆ ನೀಡಿದೆ.

ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಎಪಿ ಸಂಸದ ಮತ್ತು ಉತ್ತರಪ್ರದೇಶ ಉಸ್ತುವಾರಿ ಸಂಜಯ್ ಸಿಂಗ್, ಉತ್ತರಪ್ರದೇಶದಲ್ಲಿ ಸರ್ಕಾರ ರಚನೆಯಾದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕಬ್ಬು ರೈತರ ಬಾಕಿ ಇರುವ ಬಾಕಿಯನ್ನು ರಾಜ್ಯ ಸರ್ಕಾರ ಪಾವತಿಸಲಿದೆ ಎಂದು ಹೇಳಿದರು.

UP Election 2022: Farmers Farm Loan Waiver and Withdrawl Fake Cases; AAP promise

ಎಎಪಿ ಉತ್ತರಪ್ರದೇಶದ ರೈತರ ಎಲ್ಲಾ ಸಾಲಗಳನ್ನು ಮನ್ನಾ ಮಾಡುತ್ತದೆ ಮತ್ತು ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಅವರ ವಿರುದ್ಧ ದಾಖಲಾಗಿರುವ "ನಕಲಿ ಪ್ರಕರಣಗಳನ್ನು; ಕೂಡಲೇ ಹಿಂಪಡೆಯುತ್ತದೆ ಎಂದು ಸಂಜಯ್ ಸಿಂಗ್ ತಿಳಿಸಿದರು.

ಎಎಪಿ ಪಕ್ಷದ ಸರ್ಕಾರವು ರೈತರಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುತ್ತದೆ. ಪ್ರತಿ ವರ್ಷ ಕಬ್ಬಿನ ಬೆಲೆಯನ್ನು ಹೆಚ್ಚಿಸಲಾಗುವುದು ಮತ್ತು ಕಬ್ಬಿನ ರೈತರ ಬಾಕಿ ಹಣವನ್ನು ಸರ್ಕಾರ ರಚನೆಯಾದ ಒಂದು ದಿನದೊಳಗೆ ಎಎಪಿ ಸರ್ಕಾರದಿಂದ ಹಾಕಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇದು ಅರವಿಂದ್ ಕೇಜ್ರಿವಾಲ್ ಅವರ ಗ್ಯಾರಂಟಿ ಎಂದು ಹೇಳಿದ ಅವರು, ಎಎಪಿ ಈಗಾಗಲೇ ವಿದ್ಯುತ್ ಬಾಕಿ ಮನ್ನಾ, 300 ಯೂನಿಟ್ ಉಚಿತ ವಿದ್ಯುತ್ ಮತ್ತು ರಾಜ್ಯದ ಯುವಕರಿಗೆ 5,000 ರೂ. ನಿರುದ್ಯೋಗ ಭತ್ಯೆ ನೀಡುವುದಾಗಿ ಭರವಸೆ ನೀಡಿದೆ.

UP Election 2022: Farmers Farm Loan Waiver and Withdrawl Fake Cases; AAP promise

ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಉತ್ತರಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ರಾಜ್ಯದಲ್ಲಿ ಕಾಂಗ್ರೆಸ್ 30 ವರ್ಷಕ್ಕೂ ಹೆಚ್ಚು ಕಾಲ ಅಧಿಕಾರದಿಂದ ಹೊರಗುಳಿದಿದ್ದು, 2017ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 312 ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸಿತ್ತು. 403 ಸದಸ್ಯ ಬಲದ ಅಸೆಂಬ್ಲಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷವು 39.67ರಷ್ಟು ಮತಗಳನ್ನು ಗಳಿಸಿತ್ತು. ಸಮಾಜವಾದಿ ಪಕ್ಷ (ಎಸ್‌ಪಿ) 47 ಸ್ಥಾನಗಳನ್ನು ಗೆದ್ದುಕೊಂಡಿದ್ದರೆ, ಬಿಎಸ್‌ಪಿ 19 ಸ್ಥಾನಗಳನ್ನು ಗೆದ್ದಿತ್ತು ಮತ್ತು ಕಾಂಗ್ರೆಸ್ ಕೇವಲ 7 ಸ್ಥಾನಗಳನ್ನು ಗೆಲ್ಲಲು ಸಾಧ್ಯವಾಗಿತ್ತು.

Recommended Video

ಈತ ಇರೋದ್ರಿಂದ ಪಾಂಡ್ಯಾ ರೀಎಂಟ್ರಿ ಆಗೋಕೆ ಚಾನ್ಸೇ ಇಲ್ಲ | Oneindia Kannada

English summary
UP Election 2022: The Aam Aadmi Party on Thursday promised to waive loans of all farmers and withdraw all fake cases lodged against them if it is voted to power in Uttar Pradesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X