ಯುಪಿ ಚುನಾವಣೆ; ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮಾಜಿ ಕೇಂದ್ರ ಕಾನೂನು ಸಚಿವ
ಲಕ್ನೋ, ಫೆಬ್ರವರಿ 15: 46 ವರ್ಷಗಳ ಸುದೀರ್ಘ ಒಡನಾಟದ ನಂತರ ಕೇಂದ್ರ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಮಂಗಳವಾರ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದಾರೆ.
ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಫೆಬ್ರವರಿ 10ರಿಂದ ಆರಂಭವಾಗಿದ್ದು, ಸೋಮವಾರದಂದು ರಾಜ್ಯದಲ್ಲಿ ಎರಡನೇ ಹಂತದ ಮತದಾನ ಪೂರ್ಣಗೊಂಡಿದೆ. ವಿಧಾನಸಭಾ ಚುನಾವಣೆಯ ನಡುವೆಯೇ ಅಶ್ವನಿ ಕುಮಾರ್ ರಾಜೀನಾಮೆ ನೀಡಿರುವುದು ಕಾಂಗ್ರೆಸ್‌ಗೆ ಭಾರೀ ಹಿನ್ನಡೆಯಾಗಿದೆ.
ಕೇಂದ್ರ ಮಾಜಿ ಕಾನೂನು ಸಚಿವ ಅಶ್ವನಿ ಕುಮಾರ್ ಅವರು ಪಕ್ಷಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ ಜೊತೆಗಿನ ನಾಲ್ಕು ದಶಕಗಳ ಹಳೆಯ ಸಂಬಂಧವನ್ನು ಕೊನೆಗೊಳಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಕುಮಾರ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರು ಕಾಂಗ್ರೆಸ್‌ನ ಹೊರಗೆ ರಾಷ್ಟ್ರೀಯ ಹಿತಾಸಕ್ತಿಗೆ ಉತ್ತಮವಾಗಿ ಸೇವೆ ಸಲ್ಲಿಸಬಹುದು ಎಂದು ಹೇಳಿದ್ದಾರೆ.

ಕಾಂಗ್ರೆಸ್‌ನಲ್ಲಿ ನಾಯಕತ್ವದ ಕೊರತೆ
ಕಾಂಗ್ರೆಸ್‌ಗೆ ರಾಜೀನಾಮೆ ನೀಡಲು ಕಾರಣ ವಿವರಿಸಿದ ಅಶ್ವಿನಿ ಕುಮಾರ್, ಪಕ್ಷದಲ್ಲಿ ನಾಯಕತ್ವದ ಕೊರತೆ ಇದ್ದು, ಕಾಂಗ್ರೆಸ್ ಪುನಶ್ಚೇತನಕ್ಕೆ ಸಾಧ್ಯವಾಗದೆ ನಿರಂತರವಾಗಿ ನೆಲಕಚ್ಚುತ್ತಿದೆ ಎಂದು ತಿಳಿಸಿದ್ದಾರೆ. ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಮತ್ತು ಗುಲಾಂ ನಬಿ ಆಜಾದ್ ಅವರಿಗೆ ಪದ್ಮಭೂಷಣಕ್ಕೆ ಸಂಬಂಧಿಸಿದ ಇತ್ತೀಚಿನ ವಿವಾದಗಳು ರಾಜೀನಾಮೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದೆ. ಈ ಘಟನೆಗಳಿಂದಾಗಿ ಪಕ್ಷಕ್ಕೆ ರಾಜೀನಾಮೆ ನೀಡುವ ಮನಸ್ಸು ಮಾಡಿದ್ದೇನೆ ಎಂದು ಮಾಜಿ ಕಾನೂನು ಸಚಿವರು ಹೇಳಿದ್ದಾರೆ.
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷರಿಗೆ ಪತ್ರ
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಅಶ್ವನಿ ಕುಮಾರ್, ""ಈ ವಿಷಯವನ್ನು ಪರಿಗಣಿಸಿದ ನಂತರ, ಪ್ರಸ್ತುತ ಪರಿಸ್ಥಿತಿ ಮತ್ತು ನನ್ನ ಘನತೆಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷದ ಹೊರಗಿನ ದೊಡ್ಡ ರಾಷ್ಟ್ರೀಯ ಸಮಸ್ಯೆಗಳಿಂದ ನಾನು ಉತ್ತಮವಾಗಿ ಸೇವೆ ಸಲ್ಲಿಸುತ್ತೇನೆ ಎಂದು ನಾನು ತೀರ್ಮಾನಿಸಿದೆ,'' ಎಂದು ಹೇಳಿದರು.

46 ವರ್ಷಗಳ ಸುದೀರ್ಘ ಒಡನಾಟದ ನಂತರ ನಾನು ಪಕ್ಷವನ್ನು ತೊರೆಯುತ್ತಿದ್ದೇನೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ರೂಪಿಸಿದ ಉದಾರ ಪ್ರಜಾಪ್ರಭುತ್ವದ ಭರವಸೆಯ ಆಧಾರದ ಮೇಲೆ ಪರಿವರ್ತನೆಯ ನಾಯಕತ್ವದ ಕಲ್ಪನೆಯಿಂದ ಪ್ರೇರಿತವಾದ ಸಾರ್ವಜನಿಕ ಸಮಸ್ಯೆಗಳನ್ನು ಸಕ್ರಿಯವಾಗಿ ಮುಂದುವರಿಸಲು ಎದುರು ನೋಡುತ್ತೇನೆ ಎಂದೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಉತ್ತರಪ್ರದೇಶ ಚುನಾವಣಾ ಮಾಹಿತಿ
ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ 403 ವಿಧಾನಸಭಾ ಸ್ಥಾನಗಳಿಗೆ ಮೊದಲ ಹಂತದ ಮತದಾನ ಫೆಬ್ರವರಿ 10ರಂದು, ಎರಡನೇ ಹಂತ ಫೆಬ್ರವರಿ 14ರಂದು ನಡೆದಿದೆ. ಮೂರನೇ ಹಂತದ ಮತದಾನ ಫೆಬ್ರವರಿ 20ರಂದು, ನಾಲ್ಕನೇ ಹಂತ ಫೆಬ್ರವರಿ 23ರಂದು, ಐದನೇ ಹಂತ ಫೆಬ್ರವರಿ 27ರಂದು, ಆರನೇ ಮಾರ್ಚ್ 3ರಂದು ಹಂತ ಮತ್ತು ಕೊನೆಯ ಹಂತ ಮಾರ್ಚ್ 7ರಂದು ಮತದಾನ ನಡೆಯಲಿದೆ. ಉತ್ತರಪ್ರದೇಶದಲ್ಲಿ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications