ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶದ ಕೈರಾನಾದಲ್ಲಿ ಅಮಿತ್ ಶಾ ಮನೆ ಮನೆ ಪ್ರಚಾರ

|
Google Oneindia Kannada News

ಲಕ್ನೋ, ಜನವರಿ 21: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಮತಬೇಟೆ ಜೋರಾಗಿ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಪರ ಕೇಂದ್ರ ಗೃಹ ಸಚಿವ ಅಮಿತ್ ಚುನಾವಣಾ ಅಖಾಡಕ್ಕೆ ಇಳಿದು ಭರ್ಜರಿ ಪ್ರಚಾರ ನಡೆಸಲಿದ್ದಾರೆ.

ಉತ್ತರ ಪ್ರದೇಶದ ಪಶ್ಚಿಮದ ಕೈರಾನಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಮನೆ ಮನೆ ಪ್ರಚಾರ ನಡೆಸಲಿದ್ದಾರೆ. ಆ ಮೂಲಕ ವಿಧಾನಸಭೆ ಕ್ಷೇತ್ರದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ತುಂಬುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟಿಸಿದ ನಂತರದಲ್ಲಿ ಮೊದಲ ಬಾರಿಗೆ ಅಮಿತ್ ಶಾ ರಾಜಕೀಯ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಪಕ್ಷದ ಪರ ಪ್ರಚಾರ ನಡೆಸುವವರಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಬಿಜೆಪಿಯ ಹಿರಿಯ ನಾಯಕ ಅಮಿತ್ ಶಾ, ಶಾಮ್ಲಿ ಮತ್ತು ಬಾಗ್‌ಪತ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ತದನಂತರ ಮೀರತ್‌ನಲ್ಲಿ ಬಿಜೆಪಿಯ ಗಣ್ಯರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

UP Election 2022: Home Minister Amit Shah door-to-door campaign in Kairana on Saturday

ಹಿಂದೂಗಳ ವಲಸೆ ಬಗ್ಗೆ ಶಾ ಉಲ್ಲೇಖ:

ಕಳೆದ 2017ರ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಕೈರಾನಾ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಹಿಂದೂಗಳಿಗೆ ಬೆದರಿಕೆ ಹಾಕಲಾಗುತ್ತಿದೆ. ಈ ಜೀವ ಬೆದರಿಕೆಗಳಿಂದ ಅತಿಹೆಚ್ಚಿನ ಸಂಖ್ಯೆಯಲ್ಲಿ ಹಿಂದೂಗಳು ವಲಸೆ ಹೋಗಿದ್ದಾರೆ ಎಂಬ ಬಗ್ಗೆ ಬಿಜೆಪಿ ಆರೋಪಿಸಿತ್ತು. ಕಳೆದ 1985ರ ನಂತರ ಸತತ ಎರಡು ವಿಧಾನಸಭಾ ಚುನಾವಣೆಗಳಲ್ಲಿ ಯಾವ ಪಕ್ಷವೂ ಗೆಲುವು ಸಾಧಿಸದಿರುವ ಮಟ್ಟಕ್ಕೆ ಉತ್ತರಪ್ರದೇಶದಲ್ಲಿ ಬಿಜೆಪಿ ಗೆಲುವು ಕಂಡುಕೊಂಡಿತು.

ಲೋಕಸಭೆ ಚುನಾವಣೆ ಗೆಲ್ಲಲು ಯುಪಿ ಬಹುಮುಖ್ಯ:

2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮರಳಿ ಅಧಿಕಾರಕ್ಕೆ ಪಡೆದುಕೊಳ್ಳುವ ನಿಟ್ಟಿನಲ್ಲೇ ರಣತಂತ್ರಗಳನ್ನು ಹೆಣೆಯುತ್ತಿದೆ. ದೇಶದಲ್ಲಿ ಅತಿಹೆಚ್ಚು ವಿಧಾನಸಭೆ ಮತ್ತು ಅತಿಹೆಚ್ಚು ಲೋಕಸಭೆ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಪಕ್ಷವನ್ನು ಬಲಿಷ್ಠಪಡಿಸಲು ಎಲ್ಲಿಲ್ಲದ ಕಸರತ್ತು ಮುಂದುವರಿಸಲಾಗುತ್ತಿದೆ. ಈ ಬಾರಿ 403 ವಿಧಾನಸಭೆ ಕ್ಷೇತ್ರಗಳಲ್ಲಿ 300ಕ್ಕೂ ಹೆಚ್ಚು ಸ್ಥಾನಗಳಲ್ಲಿ ಪಕ್ಷಕ್ಕೆ ಗೆಲುವು ತಂದುಕೊಡುವ ನಿಟ್ಟಿನಲ್ಲಿ ಬಿಜೆಪಿ ರಣತಂತ್ರ ಹೆಣೆಯುತ್ತಿದೆ.

ಉತ್ತರ ಪ್ರದೇಶದಲ್ಲಿ ಚುನಾವಣೆ:

ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, ಫೆಬ್ರವರಿ 14, ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ.

ಕಳೆದ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.

Recommended Video

ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶದ CM ಅಭ್ಯರ್ಥಿ ನಾನಲ್ಲ ಎಂದಿದ್ದು ಯಾಕೆ | Oneindia Kannada

English summary
UP Assembly Election 2022: Home Minister Amit Shah door-to-door campaign in Kairana on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X