ಯುಪಿ: ಫೆ. 23 ರಂದು 4 ನೇ ಹಂತದ ಮತದಾನ- ಅಂಕಿ ಅಂಶ

ಲಕ್ನೋ ಫೆಬ್ರವರಿ 22: ಉತ್ತರ ಪ್ರದೇಶದಲ್ಲಿ ನಾಲ್ಕನೇ ಹಂತದ ಚುನಾವಣೆಗೆ ಬುಧವಾರ(ಫೆಬ್ರವರಿ 23) ಮತದಾನ ನಡೆಯುತ್ತಿದೆ. ನಾಲ್ಕನೇ ಹಂತದಲ್ಲಿ ಒಂಬತ್ತು ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಈ ಹಂತದಲ್ಲಿ 59 ವಿಧಾನಸಭಾ ಸ್ಥಾನಗಳಿಗೆ 624 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ನಾಲ್ಕನೇ ಹಂತದ ಮತದಾನವೂ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದ್ದು, ಸಂಜೆ 6 ರವರೆಗೆ ನಡೆಯಲಿದೆ.

ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಒಟ್ಟು ಏಳು ಹಂತದಲ್ಲಿ ನಡೆಯಲಿದ್ದು ಈಗಾಗಲೇ ಮೂರು ಹಂತದ ಚುನಾವಣೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇನ್ನೂ ನಾಲ್ಕು ಹಂತದ ಮತದಾನ ನಡೆಯಬೇಕಿದೆ. ಈ ಹಂತದ ಪ್ರಮುಖ ಅಭ್ಯರ್ಥಿಗಳಲ್ಲಿ ಉತ್ತರ ಪ್ರದೇಶದ ಕಾನೂನು ಸಚಿವ ಬ್ರಿಜೇಶ್ ಪಾಠಕ್ ಅವರು ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮತ್ತು ಎರಡು ಬಾರಿ ಕಾರ್ಪೊರೇಟರ್ ಸುರೇಂದ್ರ ಸಿಂಗ್ ಗಾಂಧಿ ಅವರನ್ನು ಎದುರಿಸುತ್ತಿದ್ದಾರೆ. ಪಾಠಕ್ 2017 ರಲ್ಲಿ ಲಕ್ನೋ ಸೆಂಟ್ರಲ್ ಸ್ಥಾನವನ್ನು ಗೆದ್ದಿದ್ದರು. ಮತ್ತೊಬ್ಬ ಸಚಿವ ಅಶುತೋಷ್ ಟಂಡನ್ ಲಕ್ನೋ ಪೂರ್ವ ಕ್ಷೇತ್ರದಿಂದ ಕಣದಲ್ಲಿದ್ದಾರೆ. ಇನ್ನೂ ಕಾಂಗ್ರೆಸ್ ಭದ್ರಕೋಟೆ ಎಂದು ಪರಿಗಣಿಸಲಾಗಿರುವ ರಾಯ್ ಬರೇಲಿ ಕೂಡ ಈ ಹಂತದಲ್ಲಿ ಚುನಾವಣೆಗೆ ಹೋಗಲಿದ್ದು, ರಾಯ್ ಬರೇಲಿಯಿಂದ ಬಿಜೆಪಿಯ ಅದಿತಿ ಸಿಂಗ್ ಕಣದಲ್ಲಿದ್ದಾರೆ. ಈ ಹಿಂದೆ ಅವರು ಕಾಂಗ್ರೆಸ್‌ನಲ್ಲಿದ್ದರು.

ಕ್ರಿಮಿನಲ್ ಪ್ರಕರಣಗಳು

ಕ್ರಿಮಿನಲ್ ಪ್ರಕರಣಗಳು

ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಪ್ರಕಾರ, ಉತ್ತರ ಪ್ರದೇಶದ ನಾಲ್ಕನೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಒಟ್ಟು 27% ಅಭ್ಯರ್ಥಿಗಳು ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದರೆ, 37% ರಷ್ಟು ಜನರು 1 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ.

ಪ್ರಮುಖ ಪಕ್ಷಗಳ ಪೈಕಿ ಕಾಂಗ್ರೆಸ್‌ನ 58 ಅಭ್ಯರ್ಥಿಗಳಲ್ಲಿ 31, ಸಮಾಜವಾದಿ ಪಕ್ಷದ (ಎಸ್‌ಪಿ) 57 ಅಭ್ಯರ್ಥಿಗಳಲ್ಲಿ 30, ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) 59 ಅಭ್ಯರ್ಥಿಗಳಲ್ಲಿ 26, ಬಿಜೆಪಿಯ 57 ಅಭ್ಯರ್ಥಿಗಳಲ್ಲಿ 23 ಮತ್ತು ಎಎಪಿಯ 45 ಅಭ್ಯರ್ಥಿಗಳಲ್ಲಿ 11 ಅಭ್ಯರ್ಥಿಗಳು ತಮ್ಮ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಘೋಷಿಸಿದ್ದಾರೆ. ಉತ್ತರ ಪ್ರದೇಶ ಅಸೆಂಬ್ಲಿ ಚುನಾವಣೆ 2022 ಹಂತ 4 ರಲ್ಲಿ ಸ್ಪರ್ಧಿಸುವ ಪ್ರತಿ ಅಭ್ಯರ್ಥಿಯ ಸರಾಸರಿ 2.46 ಕೋಟಿ ರೂ. ಸರಾಸರಿ ಆಸ್ತಿಯನ್ನು ಹೊಂದಿದ್ದಾರೆ.

624 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

624 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಈ ಹಂತದಲ್ಲಿ ಪಿಲಿಭಿತ್, ಲಖಿಂಪುರ ಖೇರಿ, ಸೀತಾಪುರ್, ಹರ್ದೋಯ್, ಉನ್ನಾವೋ, ಲಕ್ನೋ, ರಾಯ್ ಬರೇಲಿ, ಬಂದಾ ಮತ್ತು ಫತೇಪುರ್ ಜಿಲ್ಲೆಗಳ 59 ವಿಧಾನಸಭಾ ಕ್ಷೇತ್ರಗಳಲ್ಲಿ 624 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಸವಯಜ್‌ಪುರ ವಿಧಾನಸಭಾ ಸ್ಥಾನಕ್ಕೆ 15 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದರೆ, ಕನಿಷ್ಠ ಆರು ಅಭ್ಯರ್ಥಿಗಳು ಪಾಲಿಯಾ ಕಲಾನ್ ಮತ್ತು ಸೇವಾತಾ ವಿಧಾನಸಭಾ ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ.

ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು?

ಯಾವ ಪಕ್ಷಕ್ಕೆ ಎಷ್ಟು ಸ್ಥಾನಗಳು?

2017 ರ ವಿಧಾನಸಭಾ ಚುನಾವಣೆಯಲ್ಲಿ 59 ಸ್ಥಾನಗಳಲ್ಲಿ ಬಿಜೆಪಿ 51 ಸ್ಥಾನಗಳನ್ನು ಗೆದ್ದಿತ್ತು, ನಾಲ್ಕು ಸ್ಥಾನಗಳನ್ನು ಸಮಾಜವಾದಿ ಪಕ್ಷ ಮತ್ತು ಮೂರು ಸ್ಥಾನಗಳನ್ನು ಬಹುಜನ ಸಮಾಜ ಪಕ್ಷ ಗೆದ್ದಿದ್ದವು. ಇನ್ನೂ ಬಿಜೆಪಿಯ ಮಿತ್ರ ಪಕ್ಷವಾದ ಅಪ್ನಾ ದಳ (ಸೋನೆಲಾಲ್) ಒಂದು ಸ್ಥಾನವನ್ನು ಪಡೆದುಕೊಂಡಿತ್ತು.

ರೈತರ ಅಸಮಧಾನ

ರೈತರ ಅಸಮಧಾನ

ಇನ್ನೂ ಈ ಬಾರಿ ಲಖಿಂಪುರದಲ್ಲಿ ನಾಲ್ಕನೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಅಕ್ಟೋಬರ್ 3 ರಂದು ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ ಈ ಸ್ಥಳದಲ್ಲಿ ಸಾವನ್ನಪ್ಪಿದ್ದರು. ಹೀಗಾಗಿ ಇಲ್ಲಿನ ರೈತರಿಗೆ ಬಿಜೆಪಿ ವಿರುದ್ಧ ಅಸಮಧಾನವಿದೆ. ಈ ಅಸಮಧಾನ ಈ ಬಾರಿ ಬಿಜೆಪಿ ಗೆಲುವಿಗೆ ದೊಡ್ಡ ಸವಾಲಾಗಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+