ಯುಪಿ: ಮತದಾನದ ಫೋಟೋ ಹಂಚಿಕೊಂಡ ಕಾನ್ಪುರ ಮೇಯರ್ ವಿರುದ್ಧ ಎಫ್‌ಐಆರ್

ಲಕ್ನೋ ಫೆಬ್ರವರಿ 20: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೂರನೇ ಹಂತದ ಮತದಾನದ ವೇಳೆ ಕಾನ್ಪುರ ಮೇಯರ್ ಪ್ರಮೀಳಾ ಪಾಂಡೆ ಅವರು ಮತಗಟ್ಟೆಯೊಳಗೆ ಫೋಟೋಗಳು ಮತ್ತು ವಿಡಿಯೊಗಳನ್ನು ಹಂಚಿಕೊಂಡಿದ್ದು ಭಾನುವಾರ ವಿವಾದಕ್ಕೆ ಕಾರಣವಾಯಿತು. ಪ್ರಮೀಳಾ ಪಾಂಡೆ ಅವರು ಕಾನ್ಪುರದ ಹಡ್ಸನ್ ಮತಗಟ್ಟೆಯಲ್ಲಿ ವಿದ್ಯುನ್ಮಾನ ಮತಯಂತ್ರದ (ಇವಿಎಂ) ಫೋಟೋಗಳನ್ನು ಹಂಚಿಕೊಂಡಿದ್ದರು.

ಮತದಾನದ ವೇಳೆ ಗೌಪ್ಯತೆ ಕಾಪಾಡಿಕೊಳ್ಳುವುದನ್ನು ಮರೆತು ಕಾನ್ಪುರ ಮೇಯರ್ ಅವರು ಹಲವಾರು ವಾಟ್ಸಾಪ್ ಗುಂಪುಗಳಲ್ಲಿ ಮತದಾನದ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದರ ಬೆನ್ನಲ್ಲೇ ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್, ಪ್ರಮೀಳಾ ಪಾಂಡೆ ವಿರುದ್ಧ "ಮತದಾನದ ಗೌಪ್ಯತೆಯ ಉಲ್ಲಂಘನೆ"ಗಾಗಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದರು.

Assembly Elections 2022 Voting Live: 9 ಗಂಟೆಗೆ ಯುಪಿ, ಪಂಜಾಬ್‌ ಮತದಾನ ಪ್ರಮಾಣ?
"ಹಡ್ಸನ್ ಸ್ಕೂಲ್ ಮತಗಟ್ಟೆಯಲ್ಲಿ ಮತದಾನದ ಗೌಪ್ಯತೆಯ ಉಲ್ಲಂಘನೆಗಾಗಿ ಶ್ರೀಮತಿ ಪ್ರಮೀಳಾ ಪಾಂಡೆ ವಿರುದ್ಧ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ" ಎಂದು ಕಾನ್ಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಹೇಳಿದ್ದಾರೆ. ಪ್ರಮೀಳಾ ಪಾಂಡೆ ಫೋಟೋಗಳನ್ನು ಹಂಚಿಕೊಂಡಿದ್ದಕ್ಕೆ ವಿಪಕ್ಷಗಳು ಆಕ್ರೋಶ ಹೊರಹಾಕಿವೆ. ಚುನಾವಣೆ ಗೌಪ್ಯತೆ ಉಲ್ಲಂಘಿಸಿದ್ದಕ್ಕಾಗಿ ಪ್ರಮೀಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

UP Election: Kanpur Mayor Pramila Pandey Shares Pics Of Voting On Whatsapp, Booked

403 ಸದಸ್ಯ-ಉತ್ತರ ಪ್ರದೇಶ ವಿಧಾನಸಭೆಗೆ ಫೆಬ್ರವರಿ 10 ರಿಂದ ಫೆಬ್ರವರಿ-ಮಾರ್ಚ್‌ನಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯುತ್ತಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ. ಈ ಹಿಂದೆ ಮೊದಲ ಮತ್ತು ಎರಡನೇ ಹಂತದ ಮತದಾನ ಫೆಬ್ರವರಿ 10 ಮತ್ತು ಫೆಬ್ರವರಿ 14 ರಂದು ಪೂರ್ಣಗೊಂಡಿದೆ. 11 ಜಿಲ್ಲೆಗಳಲ್ಲಿ 58 ವಿಧಾನಸಭಾ ಸ್ಥಾನಗಳು ಮತ್ತು ಒಂಬತ್ತು ಜಿಲ್ಲೆಗಳಲ್ಲಿ 55 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿದೆ. ಇಂದು ಉತ್ತರ ಪ್ರದೇಶದ ಮೂರನೇ ಹಂತದ ಚುನಾವಣೆಯ 16 ಜಿಲ್ಲೆಗಳ 59 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಉತ್ತರ ಪ್ರದೇಶದ ಮೂರನೇ ಹಂತದ ಮತದಾನದಲ್ಲಿ 627 ಅಭ್ಯರ್ಥಿಗಳು ಕಣದಲ್ಲಿದ್ದು, 2.15 ಕೋಟಿಗೂ ಹೆಚ್ಚು ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. ಹತ್ರಾಸ್, ಫಿರೋಜಾಬಾದ್, ಇಟಾಹ್, ಕಾಸ್ಗಂಜ್, ಮೈನ್‌ಪುರಿ, ಫರೂಕಾಬಾದ್, ಕನೌಜ್, ಇಟಾವಾ, ಔರೈಯಾ, ಕಾನ್ಪುರ್ ದೇಹತ್, ಕಾನ್ಪುರ್ ನಗರ್, ಜಲೌನ್, ಝಾನ್ಸಿ, ಲಲಿತ್‌ಪುರ, ಹಮೀರ್‌ಪುರ್ ಮತ್ತು ಮಹೋಬಾ ಜಿಲ್ಲೆಗಳಲ್ಲಿ ಮತದಾನ ನಡೆಯುತ್ತಿದೆ.

ಯಾದವರ ನಾಡು ಎಂದು ಹೆಸರಾಗಿರುವ ಈ ಕ್ಷೇತ್ರಗಳ ಮತದಾನದ ಮೇಲೆ ಎಲ್ಲರ ಗಮನ ನೆಟ್ಟಿದೆ. ಎಸ್‌ಪಿಯ ನಾಯಕ ಅಖಿಲೇಶ್ ಯಾದವ್ ಕೂಡ ಈ ಮೂರನೇ ಹಂತದ ಚುನಾವಣೆಯಲ್ಲಿ ಕರ್ಹಲ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಇಂದು ಮತದಾನ ಚುರುಕುಗೊಂಡಿದ್ದು ಭಾರೀ ನಿರೀಕ್ಷೆಯನ್ನು ಹುಟ್ಟುಹಾಗಿದೆ. ಎಲ್ಲಾ ಪಕ್ಷಗಳು ಗೆಲ್ಲುವ ನಿರೀಕ್ಷೆಯಲ್ಲಿದೆ.

ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ಏಳು ಹಂತಗಳಲ್ಲಿ ನಡೆಯಲಿದೆ. ಉತ್ತರ ಪ್ರದೇಶ ಚುನಾವಣೆಯ ಮೊದಲನೇ ಹಂತದ ಮತದಾನ ಫೆಬ್ರವರಿ 10 ರಂದು, ಎರಡನೇ ಹಂತ ಫೆಬ್ರವರಿ 14 ರಂದು ಪೂರ್ಣಗೊಂಡಿದ್ದು ಇಂದು ಮೂರನೇ ಹಂತ (ಫೆಬ್ರವರಿ 20)ದ ಮತದಾನ ನಡೆಯುತ್ತಿದೆ. ಇನ್ನೂ ನಾಲ್ಕನೇ ಹಂತ ಫೆಬ್ರವರಿ 23 ರಂದು, 5 ನೇ ಹಂತ ಫೆಬ್ರವರಿ 27 ರಂದು, ಮಾರ್ಚ್ 3 ಮತ್ತು 7 ರಂದು 6 ನೇ ಹಂತ ಮತ್ತು ಮಾರ್ಚ್ 7 ರಂದು ಕೊನೆಯ ಹಂತವನ್ನು ನಡೆಸಲಾಗುವುದು. ಉತ್ತರ ಪ್ರದೇಶದ 403, ಪಂಜಾಬ್‌ನ 117, ಉತ್ತರಾಖಂಡದ 70, ಮಣಿಪುರದ 60 ಮತ್ತು ಗೋವಾದ 40 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

Recommended Video

      UP Polls 2022: ಮತದಾನದ ಫೋಟೋ ಹಂಚಿಕೊಂಡ ಕಾನ್ಪುರ ಮೇಯರ್ ವಿರುದ್ಧ FIR | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+