Breaking News: ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಟಿಕೆಟ್!

ಲಕ್ನೋ, ಅಕ್ಟೋಬರ್ 19: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೇ.40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕೆಂದು ನಾವು ಬಯಸುತ್ತೇವೆ" ಎಂದು ಹೇಳಿದರು.

UP Election: Priyanka Gandhi assurance about to give 40 per cent of Congress tickets to women

"ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡಲಿದೆ ಎಂದು ನಾವು ನಿರ್ಧರಿಸಿದ್ದೇವೆ" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

ಕಾಂಗ್ರೆಸ್ ಕಚೇರಿಗೆ ಆಹ್ವಾನಿಸಿದ ಪ್ರಿಯಾಂಕಾ ಗಾಂಧಿ:
"ಮುಂಬರುವ ನವೆಂಬರ್ 15ರವರೆಗೆ ಮಹಿಳೆಯರಿಗೆ ಅವಕಾಶವಿರುತ್ತದೆ. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಛಿಸುವ ಯಾವುದೇ ಮಹಿಳೆಯರು ಕಾಂಗ್ರೆಸ್ ಪಕ್ಷದ ಕಚೇರಿಗೆ ಬಂದು ಭೇಟಿ ಮಾಡಬಹುದು ಎಂದು ಪ್ರಿಯಾಂಕಾ ಗಾಂಧಿ ಆಹ್ವಾನ ನೀಡಿದ್ದಾರೆ. ಮಹಿಳಾ ನಾಯಕರಿಗೆ ಅವರ ಸಾಮರ್ಥ್ಯ ಮತ್ತು ಕ್ಷೇತ್ರದಲ್ಲಿ ಅವರು ಮಾಡಿದ ಅಭಿವೃದ್ಧಿ ಕೆಲಸಗಳ ಆಧಾರದ ಮೇಲೆ ಅವಕಾಶಗಳನ್ನು ನೀಡಲಾಗುವುದು," ಎಂದು ಹೇಳಿದ್ದಾರೆ.

ಉತ್ತರ ಪ್ರದೇಶ ಪ್ರಚಾರ ಸಮಿತಿ ಮುಖ್ಯಸ್ಥರಾದ ಪುನಿಯಾ:
2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ನ 20 ಸದಸ್ಯರ ಪ್ರಮುಖ ಚುನಾವಣಾ ಪ್ರಚಾರ ಸಮಿತಿಯ ಮುಖ್ಯಸ್ಥರಾಗಿ ಶುಕ್ರವಾರ ಪುನಿಯಾ ಅವರನ್ನು ನೇಮಕ ಮಾಡಲಾಗಿದೆ. ಭಾನುವಾರ ಪಕ್ಷದಲ್ಲಿ ಹೊಸದಾಗಿ ನೇಮಕಗೊಂಡ ಪ್ರಚಾರ ಸಮಿತಿಯ ಮುಖ್ಯಸ್ಥ ಪಿಎಲ್ ಪುನಿಯಾ, ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರದ ಮುಖ್ಯಸ್ಥರು ಪ್ರಿಯಾಂಕಾ ಗಾಂಧಿ ಎಂದು ಹೇಳಿದರು. ಪ್ರಸ್ತುತ ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಅವರು, ರಾಜ್ಯದಲ್ಲಿ ಅತ್ಯಂತ ಜನಪ್ರಿಯ ರಾಜಕೀಯ ವ್ಯಕ್ತಿ ಎಂದು ಪ್ರತಿಪಾದಿಸಿದರು.

2017ರ ಉತ್ತರ ಪ್ರದೇಶ ಚುನಾವಣೆ ಫಲಿತಾಂಶ:
ಕಳೆದ 2017ರ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ 403 ಸ್ಥಾನಗಳ ಪೈಕಿ ಬಿಜೆಪಿ 312 ರಲ್ಲಿ ಗೆಲುವು ದಾಖಲಿಸಿತ್ತು. ಈ ಪಕ್ಷ ಶೇ. 39.67ರಷ್ಟು ಮತವನ್ನು ಪಡೆದುಕೊಂಡಿತ್ತು. ಅಂದು ಸಮಾಜವಾದಿ ಪಕ್ಷವು 47 ಸ್ಥಾನಗಳನ್ನು, ಬಹುಜನ ಸಮಾಜ ಪಕ್ಷ (BSP) 19 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಕೇವಲ 7 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+