UP Election Result 2022: ಕರ್ಹಾಲ್‌ನಲ್ಲಿ ಅಖಿಲೇಶ್ ಯಾದವ್ ಮುನ್ನಡೆ
ಲಕ್ನೋ, ಮಾರ್ಚ್ 10: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು 8.30ರ ಸುಮಾರಿಗೆ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಎಸ್.ಪಿ.ಸಿಂಗ್ ಬಘೇಲ್ ಹಿನ್ನಡೆಯಾಗಿದೆ. ಮೂರನೇ ಹಂತದ ಚುನಾವಣೆಯಲ್ಲಿ ಅಖಿಲೆಶ್ ಯಾದವ್ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಅಖಿಲೇಶ್ ವಿರುದ್ಧ ಬಿಜೆಪಿ ಅಭ್ಯರ್ಥಿ ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಎಸ್.ಪಿ.ಸಿಂಗ್ ಬಘೇಲ್ ಕಣದಲ್ಲಿದ್ದಾರೆ.
ಉತ್ತರಪ್ರದೇಶದ ವಿಧಾನಸಭೆ ಚುನಾವಣೆಯ ಮೊದಲನೇ ಹಂತದ ಚುನಾವಣೆ ಫೆಬ್ರವರಿ 10ರಂದು ನಡೆದಿದೆ. ಉತ್ತರ ಪ್ರದೇಶದ ಒಟ್ಟು 403 ವಿಧಾನಸಭಾ ಸ್ಥಾನಗಳ ಪೈಕಿ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದೆ. ಈ ಹಂತದಲ್ಲಿ 2.27 ಕೋಟಿ ಮತದಾರರು ಒಟ್ಟು 623 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಕೊರೊನಾ ಹಿನ್ನೆಲೆಯಲ್ಲಿ ಚುನಾವಣಾ ಆಯೋಗವು ರೋಡ್‌ಶೋಗಳು ಮತ್ತು ಭೌತಿಕ ರ್‍ಯಾಲಿಗಳ ಮೇಲೆ ನಿಷೇಧವನ್ನು ವಿಧಿಸಿದೆ. ಇದರ ಪರಿಣಾಮವಾಗಿ ರಾಜಕೀಯ ಪಕ್ಷಗಳು ವರ್ಚುವಲ್ ಮಾಧ್ಯಮವನ್ನು ಬಳಸಿಕೊಂಡು ಪ್ರಚಾರ ಮಾಡಿವೆ.
ಮೊದಲ ಹಂತವು ಹೆಚ್ಚಾಗಿ ಪಶ್ಚಿಮ ಯುಪಿಯ ಜಾಟ್-ಪ್ರಾಬಲ್ಯವನ್ನು ಒಳಗೊಂಡಿದೆ. ಅಲ್ಲಿನ ರೈತರು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಹೀಗಾಗಿ ಈ ಕ್ಷೇತ್ರಗಳ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಮೂರನೇ ಹಂತದಲ್ಲಿ 11 ಜಿಲ್ಲೆಗಳಲ್ಲಿ ಮೊದಲ ಹಂತದ ಮತದಾನ * ಶಾಮ್ಲಿ * ಹಾಪುರ್ * ಗೌತಮ್ ಬುದ್ಧ ನಗರ * ಮುಜಾಫರ್‌ನಗರ * ಮೀರತ್ * ಬಾಗ್ಪತ್ * ಗಾಜಿಯಾಬಾದ್ * ಬುಲಂದ್‌ಶಹರ್ * ಅಲಿಗಢ * ಮಥುರಾ * ಆಗ್ರಾದಲ್ಲಿ ನಡೆದಿದೆ.

ಕಳೆದ ಬಾರಿ 2017 ರಲ್ಲಿ 58 ಸ್ಥಾನಗಳಲ್ಲಿ ಬಿಜೆಪಿ 53 ಸ್ಥಾನಗಳನ್ನು ಗಳಿಸಿದರೆ, ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ತಲಾ ಎರಡು ಸ್ಥಾನಗಳನ್ನು ಪಡೆದಿದ್ದವು. ಒಂದು ಸ್ಥಾನ ರಾಷ್ಟ್ರೀಯ ಲೋಕದಳದ ಪಾಲಾಗಿತ್ತು.
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಂದು ಮೊದಲ ಹಂತದಲ್ಲಿ ರಾಜ್ಯದ ಪಶ್ಚಿಮ ಭಾಗದ 11 ಜಿಲ್ಲೆಗಳ 58 ಸ್ಥಾನಗಳಿಗೆ ಮತದಾನ ನಡೆಯಿತು. ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ರಾಜ್ಯದ 55 ಸ್ಥಾನಗಳಿಗೆ ಮತದಾನ ನಡೆಯಿತು. ಉತ್ತರ ಪ್ರದೇಶದಲ್ಲಿ ಫೆಬ್ರವರಿ 20ರಂದು ಮೂರನೇ ಹಂತದಲ್ಲಿ 59 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ಪ್ರಕ್ರಿಯೆ ನಡೆಯಿತು. ಫೆಬ್ರವರಿ 23ರಂದು ನಾಲ್ಕನೇ ಹಂತದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ತದನಂತರ ಫೆಬ್ರವರಿ 27ರಂದು ಐದನೇ ಹಂತದಲ್ಲಿ 60 ಸ್ಥಾನಗಳಿಗೆ ಚುನಾವಣೆ ನಡೆಯಿತು. ಮಾರ್ಚ್ 3ರಂದು ಆರನೇ ಹಂತದಲ್ಲಿ 57 ಸ್ಥಾನಗಳಿಗೆ ಮತ್ತು ಮಾರ್ಚ್ 7ರಂದು ಅಂತಿಮವಾಗಿ ಏಳನೇ ಹಂತದಲ್ಲಿ 54 ಕ್ಷೇತ್ರಗಳಿಗೆ ಮತದಾನ ನಡೆಸಲಾಗಿತ್ತು. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆದಿದೆ.
2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಉತ್ತರಪ್ರದೇಶದಲ್ಲಿ ಯಾವುದೇ ಪಕ್ಷ ಅಧಿಕಾರ ಸ್ಥಾಪಿಸಲು ಬೇಕಿರುವ ಮ್ಯಾಜಿಕ್ ನಂಬರ್ 202.












Click it and Unblock the Notifications