UP Election Result 2022: ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ
ಉತ್ತರಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶ ಕ್ಷಣಕ್ಷಣಕ್ಕೂ ಕುತೂಹಲ ಮೂಡಿಸಿದ್ದು ಬೆಳಗ್ಗೆ ಸಮಯ 10ಕ್ಕೆ ಬಿಜೆಪಿ 225, ಎಸ್ಪಿ 95, ಬಿಎಸ್ಪಿ 7, ಕಾಂಗ್ರೆಸ್ 6, ಆರ್ ಎಲ್ ಡಿ 7, ಎಡಿಎಸ್ 3, ನಿಶಾದ್ 5, ಇತರೆ 2 ಕಡೆಗೆ ಮುನ್ನಡೆ ಸಾಧಿಸಿದೆ.
ಜಸ್ವಂತನಗರ ಕ್ಷೇತ್ರದಿಂದ ಎಸ್‌ಪಿಯಿಂದ ಶಿವಪಾಲ್ ಸಿಂಗ್ ಯಾದವ್ ಮುನ್ನಡೆ ಸಾಧಿಸಿದರೆ ಬಿಜೆಪಿ ಅಭ್ಯರ್ಥಿ ವಿವೇಕ್ ಶಕ್ಯಾ ಅವರಿಗೆ ಹಿನ್ನಡೆಯಾಗಿದೆ. ಚುನಾವಣಾ ಆಯೋಗದ ಪ್ರಕಾರ, ಆರಂಭಿಕ ಹಂತದಲ್ಲಿ ಸಂದಿಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಅಲ್ಕಾ ಸಿಂಗ್ ಮುನ್ನಡೆ ಸಾಧಿಸಿದ್ದಾರೆ. ಉನ್ನಾವೋ ಜಿಲ್ಲೆಯ ಆರು ವಿಧಾನಸಭೆ ಕ್ಷೇತ್ರಗಳ ಪೈಕಿ ಬೆಳಗ್ಗೆ 10 ಗಂಟೆ ವೇಳೆಗೆ ನಾಲ್ಕು ಕಡೆಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ಗೋರಖ್‌ಪುರದಲ್ಲಿ ಯೋಗಿ ಆದಿತ್ಯನಾಥ್ ಮುನ್ನಡೆ ಸಾಧಿಸಿದರೆ, ಕರ್ಹಾನಲ್ ಕ್ಷೇತ್ರದಲ್ಲಿ ಅಖಿಲೇಶ್ ಯಾದವ್ ಮುನ್ನಡೆ ಸಾಧಿಸಿದ್ದಾರೆ. ಇನ್ನೂ ಲಂಖಿಪುರದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಉನ್ನಾವೋ ಮತ್ತು ವಾರಣಾಸಿಯಲ್ಲಿ ಬಿಜೆಪಿ ಗೆಲುವಿನ ಭಾವುಟ ಹಾರಿಸುತ್ತಿದ್ದು, ರಾಯಬರೇಲಿಯಲ್ಲಿ ಆದಿತಿಸಿಂಗ್ ಗೆ ಹಿನ್ನಡೆಯಾಗಿದೆ.

ಮಥುರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶ್ರೀಕಾಂತ ಶರ್ಮಾ ಮುನ್ನಡೆ ಸಾಧಿಸಿದ್ದಾರೆ. ಜೊತೆಗೆ ಸಿರಾತ್ ಕ್ಷೇತ್ರದಲ್ಲೂ ಬಿಜೆಪಿ ಮುನ್ನಡೆ ಸಾಧಿಸಿದೆ. ಲಕ್ನೋ ಕಂಟೋನ್ಮೆಂಟ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬ್ರಜೇಶ್ ಪಾಠಕ್ ಮುನ್ನಡೆ ಸಾಧಿಸಿದರೆ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಪ್ರಸಾದ್ ನಗರ ಕ್ಷೇತ್ರದಲ್ಲಿ ಎಸ್‌ಪಿ ಅಭ್ಯರ್ಥಿ ಫಾಜಿಲ್ ನಗರ ಸ್ವಾಮಿ ಅವರು ಮುನ್ನಡೆ ಸಾಧಿಸಿದರೆ, ಬಿಜೆಪಿ ಅಭ್ಯರ್ಥಿ ನರೇಂದ್ರ ಕುಮಾರ್ ಸಿಂಗ್ ಅವರಿಗೆ ಹಿನ್ನಡೆಯಾಗಿದೆ. ಕುಂದಾ ಕ್ಷೇತ್ರದಲ್ಲಿ ಎಸ್‌ಪಿ ಅಭ್ಯರ್ಥಿ ಗುಲ್ಶನ್ ಯಾದವ್ ಮುನ್ನಡೆ ಸಾಧಿಸಿದರೆ ಜೆಡಿಎಸ್ ಅಭ್ಯರ್ಥಿ ರಘುರಾಜ್ ಪ್ರತಾಪ್ ಸಿಂಗ್ ಅವರಿಗೆ ಹಿನ್ನಡೆಯಾಗಿದೆ.
ಚುನಾವಣಾ ಫಲಿತಾಂಶವನ್ನು ಪರಿಶೀಲಿಸುವುದು ಹೇಗೆ? ಎಲ್ಲಿ?
ಒನ್ ಇಂಡಿಯಾ ಕನ್ನಡದ ಲೈವ್ ಲಿಂಕ್ ಮೂಲಕ ನೀವು ಪಂಚ ರಾಜ್ಯಗಳ ವಿಧಾನಸಭೆ ಚುನಾವಣಾ ಫಲಿತಾಂಶವನ್ನು ನೀವು ನೋಡಬಹುದು. ಇದನ್ನು ಹೊರತುಪಡಿಸಿ ಚುನಾವಣಾ ಫಲಿತಾಂಶಗಳನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ವೆಬ್‌ಸೈಟ್ ಅಂದರೆ eciresults.nic.in ನಲ್ಲಿ ಪರಿಶೀಲಿಸಬಹುದು.












Click it and Unblock the Notifications