ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ ಮತಎಣಿಕೆ: ಮಾ.10ರಂದು ಇಡೀ ದಿನ ಮದ್ಯ ಮಾರಾಟಕ್ಕೆ ಬ್ರೇಕ್

|
Google Oneindia Kannada News

ಲಕ್ನೋ, ಮಾರ್ಚ್ 9: ಉತ್ತರ ಪ್ರದೇಶದಲ್ಲಿ ವಿಧಾನಸಭೆ ಚುನಾವಣಾ ಫಲಿತಾಂಶದ ಹಿನ್ನೆಲೆ ಮಾರ್ಚ್ 10ರ ಗುರುವಾರ ಇಡೀ ದಿನ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಮದ್ಯ ಮಾರಾಟ ನಿರ್ಬಂಧಕ್ಕೆ ಸಂಬಂಧಿಸಿದಂತೆ ರಾಜ್ಯ ಅಬಕಾರಿ ಇಲಾಖೆ ಬುಧವಾರ ಘೋಷಣೆ ಹೊರಡಿಸಿದೆ.

ರಾಜ್ಯದಲ್ಲಿ ಮದ್ಯ ಮಾರಾಟವನ್ನು ನಿರ್ಬಂಧಿಸಿ ಅಬಕಾರಿ ಇಲಾಖೆ ಪ್ರಕಟಣೆಯನ್ನು ಹೊರಡಿಸಿದೆ. ಅದಾಗ್ಯೂ, ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Lokniti-CSDS Exit Poll Result 2022: ಐದು ರಾಜ್ಯಗಳಲ್ಲಿ ಯಾರಿಗೆ ಗದ್ದುಗೆ? Lokniti-CSDS Exit Poll Result 2022: ಐದು ರಾಜ್ಯಗಳಲ್ಲಿ ಯಾರಿಗೆ ಗದ್ದುಗೆ?

ಮಾರ್ಚ್ 10ರಂದು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಮತಎಣಿಕೆ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆ ರಾಜ್ಯಾದ್ಯಂತ ಮದ್ಯ ಮಾರಾಟ ಮತ್ತು ಸಾಗಿಸುವುದಕ್ಕೆ ನಿರ್ಬಂಧ ವಿಧಿಸಲಾಗಿದೆ. ಇದರ ಹೊರತಾಗಿ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಜ್ಯ ಅಬಕಾರಿ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

UP Election Results 2022: Liquor Sale Banned in Uttar Pradesh on March 10th entire day

ಉತ್ತರ ಪ್ರದೇಶದ 403 ಕ್ಷೇತ್ರಗಳ ಮತಎಣಿಕೆ:

ಉತ್ತರ ಪ್ರದೇಶದ 403 ವಿಧಾನಸಭೆ ಕ್ಷೇತ್ರಗಳಿಗೆ ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ಈಗಾಗಲೇ ಪೂರ್ಣಗೊಂಡಿದೆ. ಎಲ್ಲ ಅಭ್ಯರ್ಥಿಗಳ ಭವಿಷ್ಯ ಇವಿಎಂಗಳಲ್ಲಿ ಭದ್ರವಾಗಿದೆ. ಗುರುವಾರ ಬೆಳಗ್ಗೆ 8 ಗಂಟೆಗೆ 75 ಜಿಲ್ಲೆಗಳ 403 ಕ್ಷೇತ್ರಗಳ ಮತಎಣಿಕೆ ಕಾರ್ಯ ಆರಂಭವಾಗುತ್ತದೆ. ಮೊದಲಿಗೆ ಅಂಚೆ ಮತಗಳ ಎಣಿಕೆ ಕಾರ್ಯ ಶುರುವಾಗುತ್ತದೆ. ರಾಜ್ಯದಲ್ಲಿ ಸರ್ಕಾರ ರಚನೆಗೆ 202 ಸ್ಥಾನಗಳ ಅಗತ್ಯವಿದ್ದು, ಬಹುಪಾಲು ಮತದಾನೋತ್ತರ ಸಮೀಕ್ಷೆಗಳು ಬಿಜೆಪಿಗೆ ಎರಡನೇ ಬಾರಿ ಸರ್ಕಾರ ರಚನೆ ಅವಕಾಶ ಸಿಗಲಿದೆ ಎಂದು ಭವಿಷ್ಯ ನುಡಿದಿವೆ.

English summary
UP Assembly Election Results 2022: Liquor Sale Banned in Uttar Pradesh on March 10th entire day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X