ಮೊದಲ ಹಂತದ ಮತದಾನ: ಉತ್ತರ ಪ್ರದೇಶ ಮತದಾರರಿಗೆ ನಾಯಕರ ಸಂದೇಶ
ಲಕ್ನೋ, ಫೆಬ್ರವರಿ 10: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನದ ಹಿನ್ನೆಲೆ "ಭಯಮುಕ್ತ ದೇಶ ನಿರ್ಮಾಣಕ್ಕಾಗಿ ಹೊರಗೆ ಬಂದು ಮತದಾನ ಮಾಡಿ," ಎಂದು ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಮೊದಲ ಹಂತದಲ್ಲಿ 11 ಜಿಲ್ಲೆಗಳ 58 ವಿಧಾನಸಭೆ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಶಾಮ್ಲಿ, ಮೀರತ್, ಹಾಪುರ್, ಮುಜಾಫರ್ ನಗರ್, ಭಾಗ್ಪತ್, ಗಜಿಯಾಬಾದ್, ಬುಲಂದ್ ಶಹರ್, ಅಲಿಘರ್, ಆಗ್ರಾ, ಗೌತಮ್ ಬುದ್ಧ ನಗರ್ ಹಾಗೂ ಮಥುರಾ ಜಿಲ್ಲೆಗಳಲ್ಲಿ ಮತದಾನ ಶುರುವಾಗಿದೆ.
Recommended Video
ಉತ್ತರ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದೆ. ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಚುನಾವಣಾ ಭದ್ರತೆಗಾಗಿ 412 ಸೆಂಟ್ರಲ್ ಪ್ಯಾರಾಮಿಲಿಟರ್ ಫೋರ್ಸ್ ಕಂಪನಿಗಳ 50,000 ಸಿಬ್ಬಂದಿಯನ್ನು ವಿವಿಧ ಕ್ಷೇತ್ರಗಳಲ್ಲಿ ನಿಯೋಜನೆ ಮಾಡಲಾಗಿದೆ.

ಮೊದಲು ಮತ, ಆಮೇಲೆ ಉಪಹಾರ
ಇಂದು ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವಾಗಿದೆ. ಎಲ್ಲಾ ಮತದಾರರು ಕೋವಿಡ್-19 ನಿಯಮಗಳನ್ನು ಅನುಸರಿಸುವ ಮೂಲಕ ಪ್ರಜಾಪ್ರಭುತ್ವದ ಈ ಪವಿತ್ರ ಹಬ್ಬದಲ್ಲಿ ಉತ್ಸಾಹದಿಂದ ಭಾಗವಹಿಸಬೇಕೆಂದು ನಾನು ವಿನಂತಿಸುತ್ತೇನೆ. ನೆನಪಿಡಿ - ಮೊದಲು ಮತದಾನ ಮಾಡಿ, ನಂತರ ಉಪಹಾರ ಮಾಡಿ, ಎಂದು ಹಿಂದಿಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಭಯಮುಕ್ತ ಭಾರತಕ್ಕೆ ರಾಹುಲ್ ಗಾಂಧಿ ಸಂದೇಶ
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೊದಲ ಹಂತದ ಮತದಾನದ ಹಿನ್ನೆಲೆ "ಭಯಮುಕ್ತ ದೇಶ ನಿರ್ಮಾಣಕ್ಕಾಗಿ ಹೊರಗೆ ಬಂದು ಮತದಾನ ಮಾಡಿ," ಎಂದು ಎಐಸಿಸಿ ಮಾಜಿ ಅಧ್ಯಕ್ಷ ಹಾಗೂ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಮತದಾರರಿಗೆ ಅಮಿತ್ ಶಾ ಮೆಸೇಜ್
ಇಂದು ಉತ್ತರ ಪ್ರದೇಶದಲ್ಲಿ ಮೊದಲ ಹಂತದ ಮತದಾನವಾಗಿದೆ. ರಾಜ್ಯದಲ್ಲಿ ಅಭಿವೃದ್ಧಿಯ ಜೊತೆಗೆ ನಿಮಗೆ ಭದ್ರತೆ, ಗೌರವ ಮತ್ತು ಉತ್ತಮ ಆಡಳಿತ ನೀಡುವ ಸರ್ಕಾರವನ್ನು ಆಯ್ಕೆ ಮಾಡಲು ಈ ಹಂತದ ಎಲ್ಲಾ ಸಹೋದರ ಸಹೋದರಿಯರು ಗರಿಷ್ಠ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ನಾನು ಮನವಿ ಮಾಡುತ್ತೇನೆ. ನಿಮ್ಮ ಒಂದು ಮತ ಉತ್ತರ ಪ್ರದೇಶದ ಉಜ್ವಲ ಭವಿಷ್ಯದ ಆಧಾರವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಅಪರಾಧ ಮುಕ್ತ ರಾಜ್ಯಕ್ಕಾಗಿ ಮತದಾನ ಮಾಡಿ
ಇಂದು ಪ್ರಜಾಪ್ರಭುತ್ವದ ಮಹಾತ್ಯಾಗದ ಮೊದಲ ಹಂತವಾಗಿದೆ. ನಿಮ್ಮ ಅಮೂಲ್ಯವಾದ ಮತದ ತ್ಯಾಗವಿಲ್ಲದೆ ಈ ಆಚರಣೆ ಪೂರ್ಣಗೊಳ್ಳುವುದಿಲ್ಲ. ನಿಮ್ಮ ಒಂದು ಮತವು ಅಪರಾಧ-ಮುಕ್ತ, ಭಯ-ಮುಕ್ತ, ಗಲಭೆ-ಮುಕ್ತ ಉತ್ತರ ಪ್ರದೇಶದ ಸಂಕಲ್ಪವನ್ನು ಬಲಪಡಿಸುತ್ತದೆ. ಅದಕ್ಕೆ ‘ಮೊದಲು ಮತ ಹಾಕಿ ಆಮೇಲೆ ಆಮೇಲೆ ಬೇರೆ ಕೆಲಸ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.












Click it and Unblock the Notifications