ಉತ್ತರ ಪ್ರದೇಶ ಮಾಜಿ ಸಿಎಂ ಕಲ್ಯಾಣ್‌ಸಿಂಗ್‌ಗೆ ಐಸಿಯುನಲ್ಲಿ ಚಿಕಿತ್ಸೆ
ಲಕ್ನೋ, ಜುಲೈ 05: ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದು, ಈಗ ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನಿಗಳ ಸ್ನಾತಕೋತ್ತರ ಸಂಸ್ಥೆಯ ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ರಕ್ತದೊತ್ತಡ ಹಾಗೂ ಹೃದಯಬಡಿತ ಸಹಜವಾಗಿದೆ, ಆದರೆ ಪ್ರಜ್ಞೆ ಕ್ಷೀಣಿಸಿದೆ. ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಕೂಡ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಆಸ್ಪತ್ರೆಯ ಪ್ರಕಟಣೆ ಪ್ರಕಾರ , ಹೃದ್ರೋಗ ಮೂತ್ರಪಿಂಡ ಶಾಸ್ತ್ರ, ನರವಿಜ್ಞಾನ ಸೇರಿದಂತೆ ಹಲವು ವಿಭಾಗಗಳ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ, ತಜ್ಞರು ಕಲ್ಯಾಣ್ ಸಿಂಗ್ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ.

ಶನಿವಾರ ಮಧ್ಯಾಹ್ನವೇ ಸಿಂಗ್ ಅವರ ಆರೋಗ್ಯ ಏಕಾಏಕಿ ಹದಗೆಟ್ಟಿತ್ತು, ವೈದ್ಯರು ಅವರ ದೇಹದಲ್ಲಿ ಊತ ಕಾಣಿಸಿಕೊಂಡಿದೆ ಎಂದಿದ್ದಾರೆ.ವೈದ್ಯಕೀಯ ಪರೀಕ್ಷೆಯಲ್ಲಿ ಕ್ರಿಟಿನಿನ್ ಹಿಗ್ಗಿರುವುದು ತಿಳಿದುಬಂದಿದೆ.
ಕಳೆದ ಸೆಪ್ಟೆಂಬರ್ 7ರಂದು ಕಲ್ಯಾಣ್ ಸಿಂಗ್ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು, ಇದಾದ ಬಳಿಕ ಲಕ್ನೋವಿನ ಆಯುರ್ವಿಜ್ಞಾನ ಸಂಸ್ಥೆಗೆ ಅವರನ್ನು ದಾಖಲಿಸಲಾಗಿತ್ತು. ಸುಮಾರು ಒಂದು ತಿಂಗಳ ಚಿಕಿತ್ಸೆ ಬಳಿಕ ಅಕ್ಟೋಬರ್‌ನಲ್ಲಿ ಅವರು ಡಿಸ್ಚಾರ್ಜ್ ಆಗಿದ್ದರು.
ಬಿಜೆಪಿಯ ಪ್ರಮುಖ ನಾಯಕರಲ್ಲಿ ಗುರುತಿಸಿಕೊಂಡಿರುವ ಕಲ್ಯಾಣ್ ಸಿಂಗ್ ಅವರು ಉತ್ತರ ಪ್ರದೇಶದ ಮಾಜಿ ಸಿಎಂ ಮಾತ್ರವಲ್ಲ, ರಾಜಸ್ಥಾನದ ರಾಜ್ಯಪಾಲರೂ ಕೂಡ ಆಗಿದ್ದರು.












Click it and Unblock the Notifications