ಪ್ರವಾದಿ ಕುರಿತ ಹೇಳಿಕೆ ವಿರುದ್ಧ ಪ್ರತಿಭಟನೆ: ಯೋಗಿ ಸರ್ಕಾರದಿಂದ ಬುಲ್ಡೋಜರ್ ಅಸ್ತ್ರ

ಲಕ್ನೋ, ಜೂನ್ 11: ನೂಪುರ್ ಶರ್ಮಾ ಪ್ರವಾದಿ ಮುಹಮ್ಮದ್ ಕುರಿತು ಇತ್ತೀಚೆಗೆ ನೀಡಿದ ಹೇಳಿಕೆಗಳ ಹಿಂಸಾಚಾರದ ನಂತರ, ಉತ್ತರ ಪ್ರದೇಶದ ಸಹರಾನ್‌ಪುರದ ಪೊಲೀಸರು ಭಾರಿ ಬಂದೋಬಸ್ತ್‌ನೊಂದಿಗೆ ಬುಲ್ಡೋಜರ್ ಕಾರ್ಯಾಚರಣೆ ಆರಂಭಿಸಿದ್ದಾರೆ.

ಭಾರಿ ಪೊಲೀಸ್ ಉಪಸ್ಥಿತಿಯಲ್ಲಿ ಮುನ್ಸಿಪಲ್ ತಂಡಗಳೊಂದಿಗೆ ಬುಲ್ಡೋಜರ್‌ಗಳಿಂದ ಎರಡು ಮನೆಗಳನ್ನು ಧ್ವಂಸಗೊಳಿಸಿದ ವಿಡಿಯೊಗಳನ್ನು ಪೊಲೀಸರು ಹಂಚಿಕೊಂಡಿದ್ದಾರೆ. ಸಹರಾನ್‌ಪುರದಲ್ಲಿ ಒಟ್ಟು 64 ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ಮಾಹಿತಿ ನೀಡಿದ್ದಾರೆ.

ಪೊಲೀಸರು ಹಂಚಿಕೊಂಡ ದೃಶ್ಯಗಳಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದ ಆರೋಪಿ ಮುಝಮ್ಮಿಲ್ ಮತ್ತು ಅಬ್ದುಲ್ ವಾಕಿರ್ ನಿವಾಸಗಳನ್ನು ಪೊಲೀಸರು ಮತ್ತು ಮುನ್ಸಿಪಲ್ ತಂಡಗಳ ಮೇಲ್ವಿಚಾರಣೆಯಲ್ಲಿ ಬುಲ್ಡೋಜರ್‌ಗಳು ಅವರ ಮನೆಗಳ ಗೇಟ್‌ ಮತ್ತು ಹೊರಗಿನ ಗೋಡೆಗಳನ್ನು ಅಕ್ರಮವಾಗಿ ನಿರ್ಮಾಣ ಮಾಡಲಾಗಿದೆ ಎಂದು ಕೆಡವಲಾಗಿದೆ.

ಇದೇ ವಿಚಾರವಾಗಿ ಜೂನ್ 3 ರಂದು ಹಿಂಸಾಚಾರ ಮತ್ತು ಕಲ್ಲು ತೂರಾಟಗಳು ನಡೆದ ಕಾನ್ಪುರದಲ್ಲಿ, ಹಿಂಸಾಚಾರದ ಪ್ರಮುಖ ಆರೋಪಿಯಾಗಿರುವ ಸ್ಥಳೀಯ ನಾಯಕ ಜಾಫರ್ ಹಯಾತ್ ಹಶ್ಮಿಗೆ ಸೇರಿದ ಮನೆಯನ್ನು ಪೊಲೀಸರು ನೆಲಸಮಗೊಳಿಸಿದ್ದಾರೆ. ಹಿಂಸಾಚಾರ ಸಂಭವಿಸಿದ ಸ್ಥಳದಿಂದ 3 ಕಿಮೀ ದೂರದಲ್ಲಿರುವ ಕಾನ್ಪುರದ ಸ್ವರೂಪನಗರ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿತ್ತು.

ಕಾನೂನು ಪ್ರಕಾರ ಕಾರ್ಯಾಚರಣೆ

ಕಾನೂನು ಪ್ರಕಾರ ಕಾರ್ಯಾಚರಣೆ

ಮುಖ್ಯ ಆರೋಪಿ ಜಾಫರ್ ಹಯಾತ್ ಹಶ್ಮಿಯ ಹತ್ತಿರದ ಸಂಬಂಧಿ ಎನ್ನಲಾದ ಮೊಹಮ್ಮದ್ ಇಶ್ತಿಯಾಕ್ ಎಂಬಾತನ ಒಡೆತನದ ಹೊಸದಾಗಿ ನಿರ್ಮಿಸಲಾಗಿದ್ದ ಕಟ್ಟಡವನ್ನು ಕಾನ್ಪುರ ಅಭಿವೃದ್ಧಿ ಪ್ರಾಧಿಕಾರ (ಕೆಡಿಎ) ಕೆಡವಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ಆನಂದ್ ಪ್ರಕಾಶ್ ತಿವಾರಿ ಹೇಳಿದ್ದಾರೆ.

ಆರೋಪಿಗಳನ್ನು ಕಸ್ಟಡಿಗೆ ಪಡೆದ ಪೊಲೀಸರು

ಆರೋಪಿಗಳನ್ನು ಕಸ್ಟಡಿಗೆ ಪಡೆದ ಪೊಲೀಸರು

"ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಗಳಿಗೆ ಸೇರಿದ ಅಕ್ರಮ ಆಸ್ತಿಗಳನ್ನು ಕೆಡವಲಾಗಿದೆ. ಕಾನೂನಿನ ಅಡಿಯಲ್ಲೇ ಈ ಕಾರ್ಯಾಚರಣೆ ನಡೆಸಲಾಗಿದೆ" ಎಂದು ತಿವಾರಿ ಹೇಳಿದ್ದಾರೆ. ಜಾವೇದ್ ಅಹ್ಮದ್ ಖಾನ್, ಮೊಹಮ್ಮದ್ ರಾಹಿಲ್ ಮತ್ತು ಸೂಫಿಯಾನ್ ಜೊತೆಗೆ ಹಯಾತ್ ಹಶ್ಮಿಯನ್ನು 72 ಗಂಟೆಗಳ ಪೊಲೀಸ್ ಕಸ್ಟಡಿಗೆ ನೀಡಿ ಸ್ಥಳೀಯ ನ್ಯಾಯಾಲಯ ಶುಕ್ರವಾರ ಆದೇಶ ನೀಡಿತ್ತು.

"ಶನಿವಾರ ಬೆಳಗ್ಗೆ ನ್ಯಾಯಾಲಯದ ಆದೇಶದ ನಂತರ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಮತ್ತು ಮಂಗಳವಾರ ಬೆಳಗ್ಗೆವರೆಗೆ ಅವರು ಪೊಲೀಸ್ ಕಸ್ಟಡಿಯಲ್ಲಿ ಇರುತ್ತಾರೆ, ಹಿಂಸಾಚಾರದ ಕುರಿತು ಹೆಚ್ಚಿನ ತನಿಖೆ ನೆಡೆಯುತ್ತಿದೆ ಎಂದು" ತಿವಾರಿ ಹೇಳಿದ್ದಾರೆ.

230ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ

230ಕ್ಕೂ ಹೆಚ್ಚು ಪ್ರತಿಭಟನಾಕಾರರ ಬಂಧನ

ಪ್ರವಾದಿ ಮುಹಮ್ಮದ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ನಡೆದಿರುವ ಹಿಂಸಾತ್ಮಕ ಘರ್ಷಣೆಯಲ್ಲಿ ಭಾಗವಹಿಸಿದ ಆರೋಪದ ಮೇಲೆ ಇದುವರೆಗೂ 230ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ. ಏಳು ಜಿಲ್ಲೆಗಳಲ್ಲಿ 11 ಪ್ರಕರಣ ದಾಖಲಾಗಿವೆ. ಎಲ್ಲಾ ಪ್ರಕರಣಗಳನ್ನು ಗಂಭೀರ ಅಪರಾಧಗಳ ಅಡಿಯಲ್ಲಿ ದಾಖಲಿಸಲಾಗಿದೆ.

ಸಮಾಜ ವಿರೋಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸ್ವಾತಂತ್ರ್ಯ ಮತ್ತು ಸ್ಪಷ್ಟ ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಚೇರಿ ತಿಳಿಸಿದೆ.

ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ

ಉತ್ತರ ಪ್ರದೇಶದಲ್ಲಿ ಪರಿಸ್ಥಿತಿ ನಿಯಂತ್ರಣದಲ್ಲಿದೆ

ರಾಜ್ಯದಲ್ಲಿ ಈಗ ಪರಿಸ್ಥಿತಿ ನಿಯಂತ್ರಣದಲ್ಲಿದೆ ಮತ್ತು ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದು ಯುಪಿ ಪೊಲೀಸ್‌ನ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ.

ಶಾಂತಿ ಮತ್ತಿ ಸೌಹಾರ್ದತೆ ಹಾಳು ಮಾಡಲು ಪ್ರಯತ್ನಿಸುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ತೆಗೆದುಕೊಳ್ಳುತ್ತಾರೆ. ದರೋಡೆಕೋರ ಕಾಯಿದೆಯಡಿ ಆರೋಪ ಮಾಡುವುದು, ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದು ಸೇರಿದಂತೆ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳಿಗೆ ಹಾನಿ ಮಾಡಿದರೆ ಅದನ್ನು ಪ್ರತಿಭಟನಾಕಾರರಿಂದ ವಸೂಲಿ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+