ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಲಖಿಂಪುರ ಖೇರ್ ಹಿಂಸಾಚಾರ; 45 ಲಕ್ಷ ರೂ ಪರಿಹಾರ ಘೋಷಿಸಿದ ಸರ್ಕಾರ

|
Google Oneindia Kannada News

ಲಖ್ನೋ, ಅಕ್ಟೋಬರ್ 04: ಉತ್ತರ ಪ್ರದೇಶದ ಲಿಖಿಂಪುರ ಖೇರಿಯಲ್ಲಿನ ಹಿಂಸಾಚಾರದಲ್ಲಿ ಭಾನುವಾರ ಸಾವನ್ನಪ್ಪಿದ ನಾಲ್ವರು ರೈತರ ಕುಟುಂಬಕ್ಕೆ ರಾಜ್ಯ ಸರ್ಕಾರ 45 ಲಕ್ಷ ರೂ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡುವುದಾಗಿ ಘೋಷಿಸಿದೆ.

ಇದರೊಂದಿಗೆ, ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಈ ಘಟನೆ ಕುರಿತು ತನಿಖೆ ಕೈಗೊಳ್ಳಲಿರುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ.

ಉತ್ತರ ಪ್ರದೇಶ; ಲಿಖಿಂಪುರ ಖೇರಿಯ ರೈತರ ಮಾರಣಹೋಮಕ್ಕೆ ವ್ಯಾಪಕ ಖಂಡನೆಉತ್ತರ ಪ್ರದೇಶ; ಲಿಖಿಂಪುರ ಖೇರಿಯ ರೈತರ ಮಾರಣಹೋಮಕ್ಕೆ ವ್ಯಾಪಕ ಖಂಡನೆ

ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಹಾಗೂ ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಈ ಕುರಿತು ಮಾತನಾಡಿದ್ದು, 'ಭಾನುವಾರ ಲಖಿಂಪುರ್ ಖೇರಿಯಲ್ಲಿ ಮೃತಪಟ್ಟ ನಾಲ್ವರು ರೈತರ ಕುಟುಂಬಗಳಿಗೆ ಸರ್ಕಾರ 45 ಲಕ್ಷ ರೂ ಪರಿಹಾರ ಹಾಗೂ ಸರ್ಕಾರಿ ಉದ್ಯೋಗ ನೀಡುತ್ತಿದೆ. ಘಟನೆಯಲ್ಲಿ ಗಾಯಗೊಂಡವರಿಗೆ 10 ಲಕ್ಷ ಪರಿಹಾರ ನೀಡುತ್ತಿದೆ. ರೈತರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗುವುದು. ನಿವೃತ್ತ ಹೈಕೋರ್ಟ್ ನ್ಯಾಯಾಧೀಶರು ಈ ಬಗ್ಗೆ ತನಿಖೆ ನಡೆಸಲಿದ್ದಾರೆ' ಎಂದರು.

UP Government Announces Exgratia Of Rs 45 Lakhs To Kin Of Farmers Who Dies In Violence

'ಸಿಆರ್‌ಪಿಸಿ ಸೆಕ್ಷನ್ 144 ಜಾರಿಯಲ್ಲಿರುವ ಕಾರಣ ಯಾವುದೇ ರಾಜಕೀಯ ಪಕ್ಷದ ನಾಯಕರನ್ನು ಜಿಲ್ಲೆಗೆ ಬರಲು ಅನುಮತಿ ನೀಡಲಾಗುವುದಿಲ್ಲ' ಎಂದು ಮಾಹಿತಿ ನೀಡಿದರು. ಸದ್ಯ ರೈತ ಸಂಘದ ಸದಸ್ಯರಿಗೆ ಅನುಮತಿ ನೀಡಲಾಗಿದೆ.

ಭಾನುವಾರ ಲಿಖಿಂಪುರ್‌ದಲ್ಲಿ ನಡೆದ ಘಟನೆಗೆ ವಿರೋಧ ಪಕ್ಷಗಳು ಭಾರೀ ಟೀಕೆ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಗೇಲ್, ಪಂಜಾಬ್ ಉಪ ಮುಖ್ಯಮಂತ್ರಿ ಸುಖಜಿಂದರ್ ಸಿಂಗ್ ರಾಂಧವ ಇನ್ನೂ ಮತ್ತಿತರರು ಲಖಿಂಪುರ ಖೇರಿಗೆ ಸೋಮವಾರ ಭೇಟಿ ನೀಡಲಿದ್ದರು. ಆದರೆ ಅವರನ್ನು ತಡೆಹಿಡಿಯಲಾಗಿದೆ.

ಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ; ಉ.ಪ್ರದೇಶ ಹಿಂಸಾಚಾರಕ್ಕೆ ರಾಹುಲ್ ಟೀಕೆಮೌನವಾಗಿರುವವರು ಈಗಾಗಲೇ ಸತ್ತಿದ್ದಾರೆ; ಉ.ಪ್ರದೇಶ ಹಿಂಸಾಚಾರಕ್ಕೆ ರಾಹುಲ್ ಟೀಕೆ

ಸಚಿವ ಅಜಯ್ ಮಿಶ್ರಾ ತೆನಿ ಈಚೆಗೆ ರೈತರ ಪ್ರತಿಭಟನೆ ಕುರಿತು ಕಟುವಾದ ಹೇಳಿಕೆ ನೀಡಿದ್ದಲ್ಲದೆ ಪ್ರತಿಭಟಿಸುವವರ ಮೇಲೆ ಕ್ರಮ ಕೈಗೊಳ್ಳುವ ಬಹಿರಂಗ ಬೆದರಿಕೆ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಅವರ ತವರು ಕ್ಷೇತ್ರ ಲಖಿಂಪುರ ಖೇರಿಯಲ್ಲಿ ಸೇರಿದ್ದ ರೈತರು ಸಚಿವರ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದರು. ಇದೇ ಸಂದರ್ಭ ರಸ್ತಾ ರೋಖೋ ನಡೆಸುತ್ತಿದ್ದ ರೈತರ ಮೇಲೆ ಬೆಂಗಾವಲು ವಾಹನ ಹರಿಸಲಾಗಿತ್ತು.

UP Government Announces Exgratia Of Rs 45 Lakhs To Kin Of Farmers Who Dies In Violence

ಈ ಘಟನೆಯ ಸಂದರ್ಭ ಕಾರಿನಲ್ಲಿ ಕೇಂದ್ರ ರಾಜ್ಯ ಸಚಿವ ಅಜಯ್‌ ಮಿಶ್ರಾ ಪುತ್ರ ಇದ್ದರು ಎಂಬ ಆರೋಪ ಕೇಳಿಬಂದಿದ್ದು, ಸಚಿವರ ಪುತ್ರ ಆಶೀಶ್‌ ವಿರುದ್ದ ಕೊಲೆ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.

ಈ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ವ್ಯಾಪಕ ವಿರೋಧ ಕೇಳಿಬಂದಿದೆ. ವಿರೋಧ ಪಕ್ಷಗಳು, ವಿವಿಧ ರೈತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ತುರ್ತಾಗಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿವೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ವಿರುದ್ಧ ಟೀಕೆಗಳು ಕೇಳಿಬಂದಿವೆ. ಇಂಥದೊಂದು ಘಟನೆ ನಡೆದಾಗ್ಯೂ ಆದಿತ್ಯನಾಥ್ ಅಥವಾ ಯಾವುದೇ ಉನ್ನತಾಧಿಕಾರಿಗಳು ಜವಾಬ್ದಾರಿಯುತ ವರ್ತನೆ ತೋರಿಲ್ಲ ಎಂಬ ಆರೋಪಗಳು ಕೇಳಿಬಂದಿವೆ.

ಈ ಘಟನೆಗೆ ಪ್ರತಿಕ್ರಿಯಿಸಿರುವ ಆದಿತ್ಯಾನಾಥ್, 'ಈ ಘಟನೆ "ದುರದೃಷ್ಟಕರ. ಈ ವಿಚಾರದಲ್ಲಿ ನಾವು ಸಂಪೂರ್ಣವಾಗಿ ತನಿಖೆ ನಡೆಸುತ್ತೇವೆ. ಆರೋಪಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲರೂ ಶಾಂತಿ ಕಾಪಾಡುವಂತೆ ಮನವಿ ಮಾಡುತ್ತೇವೆ," ಎಂದಿದ್ದಾರೆ.

ಇದೀಗ ರಾಜ್ಯ ಸರ್ಕಾರ, ಹಿಂಸಾಚಾರದಲ್ಲಿ ಮರಣವನ್ನಪ್ಪಿದ ರೈತ ಕುಟುಂಬಕ್ಕೆ 45 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಸದ್ಯಕ್ಕೆ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಏರ್ಪಡಿಸಲಾಗಿದೆ.

English summary
Uttar Pradesh government announced an ex-gratia of Rs 45 lakh and a government job for the kin of four farmers who died in the Lakhimpur Kheri incident sunday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X