ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ.10ರ ರಾತ್ರಿ 10 ಗಂಟೆಯಿಂದ ಜುಲೈ.13ರವರೆಗೂ ಲಾಕ್ ಡೌನ್!

|
Google Oneindia Kannada News

ಲಕ್ನೋ, ಜುಲೈ.09: ಕೊರೊನಾವೈರಸ್ ಸೋಂಕು ಹರಡುವಿಕೆ ಅಟ್ಟಹಾಸಕ್ಕೆ ಕಡಿವಾಣ ಹಾಕುವುದಕ್ಕೆ ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರವು ಕಟ್ಟುನಿಟ್ಟಿನ ಕ್ರಮಗಳನ್ನು ಜಾರಿಗೊಳಿಸುತ್ತಿದೆ.

Recommended Video

Susheel Gowda , ದುರಂತದ ಹಿಂದಿನ ಕಾರಣವೇನು | Filmibeat Kannada

ಶುಕ್ರವಾರದಿಂದಲೇ ರಾಜ್ಯದಲ್ಲಿ ಮೂರು ದಿನಗಳ ಕಾಲ ಲಾಡ್ ಡೌನ್ ಘೋಷಿಸಲಾಗಿದೆ. ಜುಲೈ.10ರ ರಾತ್ರಿ 10 ಗಂಟೆಯಿಂದ ಜುಲೈ.13ರ ಸೋಮವಾರ ಬೆಳಗ್ಗೆ 5 ಗಂಟೆವರೆಗೂ ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಬೆಂಗಳೂರಿನ ಮತ್ತೊಂದು ಬಡಾವಣೆ ವ್ಯಾಪಾರಿಗಳಿಂದ ಲಾಕ್ ಡೌನ್ಬೆಂಗಳೂರಿನ ಮತ್ತೊಂದು ಬಡಾವಣೆ ವ್ಯಾಪಾರಿಗಳಿಂದ ಲಾಕ್ ಡೌನ್

ಕೊರೊನಾವೈರಸ್ ಸೋಂಕು ಹರಡುವಿಕೆ ಪ್ರಮಾಣ ತಗ್ಗಿಸುವ ಉದ್ದೇಶದಿಂದ ಶುಕ್ರವಾರ ರಾತ್ರಿ 10 ಗಂಟೆಯಿಂದಲೇ ಲಾಕ್ ಡೌನ್ ಘೋಷಿಸಲಾಗಿದೆ. ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ರಾಜ್ಯಾದ್ಯಂತ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ.

UP Government Imposes Lockdown In State From 10 PM Tomorrow Till 5 AM On 13th July

ಉತ್ತರ ಪ್ರದೇಶದಲ್ಲಿ ಹೇಗಿದೆ ಕೊರೊನಾವೈರಸ್ ಕಂಡೀಷನ್?:

ಕೊರೊನಾವೈರಸ್ ಅಟ್ಟಹಾಸಕ್ಕೆ ಉತ್ತರ ಪ್ರದೇಶ ಕೂಡಾ ತತ್ತರಿಸಿ ಹೋಗಿದೆ. ಪ್ರತಿನಿತ್ಯ ನೂರಾರು ಪ್ರಕರಣಗಳು ವರದಿಯಾಗುತ್ತಿದ್ದು, ರಾಜ್ಯದಲ್ಲಿ ಇದುವರೆಗೂ ಒಟ್ಟು 31156 ಮಂದಿಗೆ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ಪೈಕಿ 20331 ಸೋಂಕಿತರು ಗುಣಮುಖರಾಗಿದ್ದರೆ, 9980 ಸಕ್ರಿಯ ಪ್ರಕರಣಗಳಿವೆ. ಮಹಾಮಾರಿಗೆ ರಾಜ್ಯದಲ್ಲಿ ಒಟ್ಟು 845 ಜನರು ಪ್ರಾಣ ಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ಹಲವು ರಾಜ್ಯಗಳು ಭಾನುವಾರ ಕಡ್ಡಾಯ ಲಾಕ್ ಡೌನ್ ಘೋಷಿಸುತ್ತಿವೆ. ಆದರೆ ಉತ್ತರ ಪ್ರದೇಶ ಸರ್ಕಾರವು ಒಂದು ಹೆಜ್ಜೆ ಮುಂದೆ ಹೋಗಿದ್ದು, ಎರಡು ದಿನಗಳ ಕಾಲ ಲಾಕ್ ಡೌನ್ ಮಾಡುವುದಕ್ಕೆ ತೀರ್ಮಾನಿಸಿದೆ.

English summary
Uttar Pradesh Government Imposes Lockdown In The State From 10 PM Tomorrow Till 5 AM On 13th July.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X