ಯೋಗಿ ಸರ್ಕಾರದ ವಿರುದ್ಧ ಮಾಯಾವತಿ ಗುಡುಗಿದ್ದೇಕೆ?
ಲಕ್ನೋ, ಆಗಸ್ಟ್ 20: ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಬಿಎಸ್‌ಪಿ ಮುಖ್ಯಸ್ಥ ಮಾಯಾವತಿ ವಾಗ್ದಾಳಿ ನಡೆಸಿದ್ದಾರೆ.
ಇಂಧನ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದ್ದು, ಈ ನಿರ್ಧಾರದಿಂದ ಬಡ ಹಾಗೂ ಮಧ್ಯಮ ವರ್ಗದವರ ಮೇಲೆ ತೀವ್ರ ಪರಿಣಾಮವನ್ನುಂಟು ಮಾಡಲಿದೆ ಎಂದು ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಡೀಸೆಲ್ ಬೆಲೆಯನ್ನು 2.5 ರೂ.ಗೆ ಮತ್ತು ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 1 ರೂ. ಏರಿಸಲಾಗಿದ್ದು, ಸೋಮವಾರ ಮಧ್ಯರಾತ್ರಿಯಿಂದ ಈ ಬೆಲೆಗಳು ಜಾರಿಯಾಗಿವೆ.

ಮಾಯಾವತಿ ಈ ಕುರಿತು ಟ್ವೀಟ್ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಯುಪಿ ಸರ್ಕಾರದ ನಿರ್ಧಾರ ಅನನುಕೂಲಕರವಾಗಿದೆ. ಇದು ಹಣದುಬ್ಬರಕ್ಕೆ ಕಾರಣವಾಗಲಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಪರಿಣಾಮ ಬೀರಲಿದೆ.
ನಿರುದ್ಯೋಗ ಸೇರಿದಂತೆ ಇತರ ಸಮಸ್ಯೆಗಳನ್ನು ಎದುರಿಸುತ್ತಿರುವ ಬಡಜನತೆಗೆ ಇದು ಮತ್ತಷ್ಟು ಹೊರೆಯಾಗಲಿದೆ. ಹಾಗಾಗಿ ಸರ್ಕಾರ ಜನರ ಅಭಿವೃದ್ಧಿ ಬಗ್ಗೆ ಗಮನಹರಿಸಿದರೆ ಉತ್ತಮ' ಎಂದು ದೂರಿದ್ದಾರೆ.












Click it and Unblock the Notifications