ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದಿನಗೂಲಿ ಕಾರ್ಮಿಕರಿಗೆ ದಿನಕ್ಕೆ 1000ರೂ ಘೋಷಿಸಿದ ಆದಿತ್ಯನಾಥ್ ಸರ್ಕಾರ

|
Google Oneindia Kannada News

ಲಕ್ನೌ, ಮಾರ್ಚ್ 21: ದಿನಗೂಲಿ ಕಾರ್ಮಿಕರಿಗೆ ಪ್ರತಿದಿನ 1000 ರೂಪಾಯಿ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.

ದೇಶಾದ್ಯಂತ ಕೊರೊನಾ ವೈರಸ್ ಹರಡುತ್ತಿದ್ದು, ಸೋಂಕು ಹರಡದಂತೆ ತಡೆಯಲು ಜನರನ್ನು ಮನೆಯಲ್ಲಿ ಉಳಿದುಕೊಳ್ಳಿ ಎಂದು ಸರ್ಕಾರ ವಿನಂತಿಸಿಕೊಂಡಿದೆ. ಇದರಿಂದ ಸಹಜವಾಗಿ ಬೀದಿ ವ್ಯಾಪಾರಿಗಳಿಗೆ, ದಿನಗೂಲಿ ಕಾರ್ಮಿಕರ ದೈನಂದಿನ ಬದುಕು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ.

ಮೋದಿ ದೇಶವನ್ನು ಉದ್ದೇಶಿಸಿ ಭಾಷಣದ ನಂತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆಮೋದಿ ದೇಶವನ್ನು ಉದ್ದೇಶಿಸಿ ಭಾಷಣದ ನಂತರ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ

ಇದನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರ, 15 ಲಕ್ಷ ದಿನಗೂಲಿ ಕಾರ್ಮಿಕರು ಹಾಗೂ 20.37 ಲಕ್ಷ ನಿರ್ಮಾಣ ಕಾರ್ಮಿಕರ ದೈನಂದಿನ ಜೀವನಕ್ಕೆ ಅಗತ್ಯವಾದ ವಸ್ತುಗಳನ್ನು ಪೂರೈಸಲು ದಿನಕ್ಕೆ ಸಾವಿರ ರೂಪಾಯಿ ಪರಿಹಾರವಾಗಿ ನೀಡಲಿದೆ.

UP Govt Will Give 1,000 To Daily Wage Labourers

ಇದುವರೆಗೂ ಭಾರತದಲ್ಲಿ ಒಟ್ಟು 270ಕ್ಕೂ ಅಧಿಕ ಜನರಿಗೆ ಸೋಂಕು ತಗುಲಿದೆ. ಒಟ್ಟು ಐದು ಜನರು ಸಾವನ್ನಪ್ಪಿದ್ದಾರೆ. ಇನ್ನು ಉತ್ತರ ಪ್ರದೇಶದಲ್ಲಿ ಒಟ್ಟು 23 ಕೇಸ್‌ಗಳು ದಾಖಲಾಗಿದೆ, ಅದರಲ್ಲಿ 9 ಜನರು ಚೇತರಿಸಿಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

ಮೋದಿ ಘೋಷಿಸಿದ್ದ 'ಜನತಾ ಕರ್ಫ್ಯೂ' ಮೆಚ್ಚಿದ ವಿಶ್ವ ಆರೋಗ್ಯ ಸಂಸ್ಥೆಮೋದಿ ಘೋಷಿಸಿದ್ದ 'ಜನತಾ ಕರ್ಫ್ಯೂ' ಮೆಚ್ಚಿದ ವಿಶ್ವ ಆರೋಗ್ಯ ಸಂಸ್ಥೆ

ಇನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಎಲ್ಲರು ಬೆಂಬಲ ನೀಡಿ, ಆ ದಿನ ಮನೆಯಲ್ಲೇ ಉಳಿದುಕೊಂಡು ಕೊರೊನಾ ವಿರುದ್ಧ ಒಟ್ಟಾಗಿ ಹೋರಾಡಬೇಕಾಗಿದೆ ಎಂದು ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

English summary
Uttara pradesh Chief Minister Yogi Adityanath: Rs 1000 each will be given 15 lakh daily wage labourers and 20.37 lakh construction workers to help them meet their daily needs.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X