ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೋವಿಡ್ 19: ಉತ್ತರಪ್ರದೇಶದಲ್ಲಿ ವಾರಾಂತ್ಯ ಲಾಕ್‌ಡೌನ್ ಘೋಷಣೆ

|
Google Oneindia Kannada News

ಲಕ್ನೋ, ಏಪ್ರಿಲ್ 20: ಉತ್ತರ ಪ್ರದೇಶದಲ್ಲಿ ವಾರಾಂತ್ಯ ಲಾಕ್‌ಡೌನ್ ಘೋಷಣೆ ಮಾಡಲಾಗಿದೆ. ಹಾಗೆಯೇ 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿವ ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಧಿಸಲು ಮುಂದಾಗಿದೆ.

ಏಪ್ರಿಲ್ 24 ರಿಂದ ಜಾರಿಗೆ ಬರಲಿದೆ. 500ಕ್ಕಿಂತ ಹೆಚ್ಚು ಸಕ್ರಿಯ ಪ್ರಕರಣಗಳಿರುವ ಜಿಲ್ಲೆಗಳಲ್ಲಿ ರಾತ್ರಿ 8 ರಿಂದ ಮರುದಿನ ಬೆಳಗ್ಗೆ 7ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗುತ್ತದೆ.

5 ಜಿಲ್ಲೆಗಳಿಗೆ ಲಾಕ್‌ಡೌನ್: ಹೈಕೋರ್ಟ್ ಆದೇಶ ನಿರಾಕರಿಸಿದ ಸಿಎಂ ಯೋಗಿ5 ಜಿಲ್ಲೆಗಳಿಗೆ ಲಾಕ್‌ಡೌನ್: ಹೈಕೋರ್ಟ್ ಆದೇಶ ನಿರಾಕರಿಸಿದ ಸಿಎಂ ಯೋಗಿ

ಪ್ರತಿಯೊಬ್ಬರು ಸರ್ಕಾರದ ನಿಯಮವನ್ನು ಪಾಲಿಸಿ ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಯಾವುದೇ ಕಾರಣಕ್ಕೂ ಸುಮ್ಮನೆ ಮನೆಯಿಂದ ಹೊರಗೆ ಹೋಗುವುದು ಬೇಡ, ಹೊರಗೆ ಹೋಗುವುದಾದರೆ ಮಾಸ್ಕ್ ಧರಿಸಿ.

UP Govt Imposes Weekend Lockdown Across State

ಉತ್ತರ ಪ್ರದೇಶದಲ್ಲಿ ದಿನೇ ದಿನೇ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಅಲಹಾಬಾದ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. ಆದರೆ, ಈ ಆದೇಶಕ್ಕೆ ಪ್ರತಿಕ್ರಿಯಿಸಿದ ಉತ್ತರ ಪ್ರದೇಶ ಸರ್ಕಾರ ಸದ್ಯಕ್ಕೆ ಆ ಐದು ನಗರಗಳಲ್ಲಿ ಯಾವುದೇ ರೀತಿಯ ಲಾಕ್‌ಡೌನ್ ಮಾಡುವುದಿಲ್ಲ ಎಂದು ಸರ್ಕಾರ ಹೇಳಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಅವಶ್ಯಕವಾಗಿದೆ. ಈಗಾಗಲೇ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಹಲವು ಕ್ರಮಗಳನ್ನು ಕೈಗೊಂಡಿದ್ದು ಮುಂದೆಯೂ ಕಠಿಣ ನಿಯಮಗಳನ್ನು ತರಲಾಗುವುದು. ಜೀವ ಉಳಿಸುವುದರ ಜೊತೆಗೆ ಜೀವವನ್ನು ಕಾಪಾಡಬೇಕು.

ಇಂತಹ ಸಂದರ್ಭದಲ್ಲಿ ಇಡೀ ನಗರವನ್ನು ಲಾಕ್ ಡೌನ್ ಮಾಡಿದರೆ ಜೀವನ ನಿರ್ವಹಣೆ ಕಷ್ಟ ಆಗಲಿದೆ. ಜನರು ಸಹ ಸ್ವಯಂ ನಿರ್ಬಂಧ ಹಾಕಿಕೊಳ್ಳುತ್ತಿದ್ದಾರೆ ಎಂದು ಸರ್ಕಾರ ತಿಳಿಸಿದೆ.

ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಕ್ನೋ, ಅಲಹಾಬಾದ್, ಕಾನ್ಪುರ್, ವಾರಾಣಸಿ ಮತ್ತು ಗೋರಖ್‌ಪುರದಲ್ಲಿ ಒಂದು ವಾರದವರೆಗೆ ಲಾಕ್‌ಡೌನ್ ವಿಧಿಸುವಂತೆ ಸೂಚನೆ ನೀಡಲಾಗಿತ್ತು. ಇದೀಗ ಅಲಹಾಬಾದ್ ಹೈಕೋರ್ಟ್ ವಿರುದ್ಧ ಉತ್ತರ ಪ್ರದೇಶ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

English summary
The Uttar Pradesh government on Tuesday announced a statewide weekend lockdown to curb the rising number of Covid-19 cases in the state. The weekend lockdown will come into force from April 24.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X