ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಟಿ ಕಂಗನಾ ರಣಾವತ್ ಉತ್ತರ ಪ್ರದೇಶ ಸರ್ಕಾರದ ಯೋಜನೆಯ ರಾಯಭಾರಿ

|
Google Oneindia Kannada News

ಲಕ್ನೋ, ಅಕ್ಟೋಬರ್ 02: ಬಾಲಿವುಡ್ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪಾದನೆ ಕಾರ್ಯಕ್ರಮಕ್ಕೆ ರಾಯಭಾರಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಕಂಗನಾ ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ಕಂಗನಾ ಅವರು ತೇಜಸ್ ಹೆಸರಿನ ಸಿನಿಮಾದಲ್ಲಿ ಭಾರತೀಯ ವಾಯುಪಡೆಯ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ಉತ್ತರ ಪ್ರದೇಶದ ಮೊರದಾಬಾದ್‌ನಲ್ಲಿ ಚಿತ್ರೀಕರಣ ನಡೆಸಲಾಗಿದೆ. ಇದೀಗ ಅವರು ಲಕ್ನೋಗೆ ತೆರಳಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಉತ್ತರ ಪ್ರದೇಶ: ರೈತರ ವಿರುದ್ಧದ ಕೇಸ್ ಹಿಂಪಡೆಯಲು ಸರ್ಕಾರ ನಿರ್ಧಾರಉತ್ತರ ಪ್ರದೇಶ: ರೈತರ ವಿರುದ್ಧದ ಕೇಸ್ ಹಿಂಪಡೆಯಲು ಸರ್ಕಾರ ನಿರ್ಧಾರ

ರಾಮಜನ್ಮಭೂಮಿ ಪೂಜೆ ಸಂದರ್ಭದಲ್ಲಿ ಬಳಕೆ ಮಾಡಿದ್ದ ನಾಣ್ಯವನ್ನು ಯೋಗ ಆದಿತ್ಯನಾಥ್ ಅವರು ಉಡುಗೊರೆಯಾಗಿ ನೀಡಿರುವುದಾಗಿ ತಿಳಿದುಬಂದಿದೆ. ಯೋಗಿ ಆದಿತ್ಯನಾಥ್ ಭೇಟಿ ಬಳಿಕ ವಿಡಿಯೋ ಹಂಚಿಕೊಂಡಿರುವ ಕಂಗನಾ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸ್ಫೂರ್ತಿದಾಯಕ, ಹುರುಪಿನ ಹಾಗೂ ನಿಷ್ಕಪಟ ವ್ಯಕ್ತಿತ್ವದವರು ಎಂದು ಹೇಳಿದ್ದಾರೆ.

UP Govt Names Kangana Ranaut As Brand Ambassador Of One District-One Product Scheme

ನಮ್ಮ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ಉತ್ತರ ಪ್ರದೇಶ ಸರ್ಕಾರ ನೀಡಿದ ಸಹಾಯಕ್ಕೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಹಾಗೂ ಮುಂಬರುವ ಚುನಾವಣೆಗಾಗಿ ಮುಖ್ಯಮಂತ್ರಿಗೆ ಶುಭ ಕೋರಿದ್ದಾರೆ.

ಈ ಹಿಂದೆ ಉತ್ತರ ಪ್ರದೇಶದಲ್ಲಿ ತಪಸ್ವಿ ರಾಜ ಶ್ರೀ ರಾಮಚಂದ್ರ ಇದ್ದರು ಹಾಗೂ ಈಗ ನಮಗೆ ಯೋಗಿ ಆದಿತ್ಯನಾಥ್ ಇದ್ದಾರೆ ಎಂದು ಕಂಗನಾ ಹೇಳಿದ್ದಾರೆ.

ಭೇಟಿ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು, ನಟಿಗೆ ಅಯೋಧ್ಯೆ ರಾಮಜನ್ಮಭೂಮಿ ಪೂಜೆ ಸಂದರ್ಭದಲ್ಲಿ ಬಳಕೆ ಮಾಡಿದ್ದ ನಾಣ್ಯ ಉಡುಗೊರೆಯಾಗಿ ನೀಡಿದ್ದಾಗಿ ತಿಳಿದು ಬಂದಿದೆ. ಇನ್ನು ಯೋಗಿ ಆದಿತ್ಯನಾಥ್​ ಅವರನ್ನ ಭೇಟಿಯಾಗಿರುವುದಕ್ಕೆ ಸಂಬಂಧಿಸಿದಂತೆ ಕಂಗನಾ ತಮ್ಮ ಇನ್​​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಈ ವೇಳೆ ಯೋಗಿ ಆದಿತ್ಯನಾಥ್​ ಅವರ ಕಾರ್ಯದ ಬಗ್ಗೆ ನಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಕಂಗನಾ ರಣಾವತ್​ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜೆ. ಜಯಲಲಿತಾ ಅವರ ಬಯೋಗ್ರಫಿಯಲ್ಲಿ ನಟಿಸಿದ್ದು, ಚಿತ್ರ ಈಗಾಗಲೇ ತೆರೆ ಕಂಡಿದೆ.

ಈ ವೇಳೆ ಯೋಗಿ ಆದಿತ್ಯನಾಥ್​ ಅವರ ಕಾರ್ಯದ ಬಗ್ಗೆ ನಟಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಕಂಗನಾ ರಣಾವತ್​ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ದಿವಂಗತ ಜೆ. ಜಯಲಲಿತಾ ಅವರ ಬಯೋಗ್ರಫಿಯಲ್ಲಿ ನಟಿಸಿದ್ದು, ಚಿತ್ರ ಈಗಾಗಲೇ ತೆರೆ ಕಂಡಿದೆ.

ಸಿನಿಮಾದ ಸಹ ಬರಹಗಾರ ರಜತ್ ಅರೋರಾ ಈ ಬಗ್ಗೆ ಹೇಳಿಕೊಂಡಿದ್ದಾರೆ. 'ಜಯಲಲಿತಾ ರಾಜಕೀಯ ಬದುಕು ತುಂಬಾನೇ ದೀರ್ಘವಾಗಿತ್ತು. ಇದನ್ನು 15 ನಿಮಿಷಗಳಲ್ಲಿ ಹೇಳಿದರೆ ನಾವು ಅದಕ್ಕೆ ನ್ಯಾಯ ಒದಗಿಸಿದಂತೆ ಆಗುವುದಿಲ್ಲ ಎಂದು ನಮಗನಿಸಿತು. ಹೀಗಾಗಿ, 'ತಲೈವಿ ಪಾರ್ಟ್​ 2' ತರೋಕೆ ಸಿದ್ಧತೆ ನಡೆದಿದೆ. ನಾವು ಕಂಗನಾ ಜತೆಗೆ ಮಾತುಕತೆ ನಡೆಸಿದ್ದೇವೆ' ಎಂದಿದ್ದಾರೆ ರಜತ್.

English summary
The Uttar Pradesh government on Friday named actor Kangana Ranaut as the brand ambassador of its 'one district-one product' scheme.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X