ಉತ್ತರ ಪ್ರದೇಶ: 22,439 ಮಂದಿಗೆ ಕೊರೊನಾ, 10 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಸ್ತರಣೆ

ಲಕ್ನೋ, ಏಪ್ರಿಲ್ 15: ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ವಿಸ್ತರಿಸಲಾಗುತ್ತಿದೆ.

ಉತ್ತರ ಪ್ರದೇಶದಲ್ಲೂ ಕೊರೊನಾ ವೈರಸ್ ಅಬ್ಬರ ಮತ್ತಷ್ಟು ತೀವ್ರವಾಗಿದ್ದು, ಗುರುವಾರ ಬರೋಬ್ಬರಿ 22439 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇನ್ನೂ 1-12ನೇ ತರಗತಿಯ ಶಾಲಾ-ಕಾಲೇಜ್ ಬಂದ್ ಆದೇಶವನ್ನು ಮೇ 15 ರವರೆಗೆ ಸಿಎಂ ವಿಸ್ತರಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಇಂದು 22,439 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದ್ದು, 114 ಸೋಂಕಿತರು ಮೃತಪಟ್ಟಿದ್ದಾರೆ. ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ 2,000ಕ್ಕೂ ಹೆಚ್ಚು ಸಕ್ರಿಯ ಪ್ರಕರಣಗಳನ್ನು ಹೊಂದಿರುವ 10 ಜಿಲ್ಲೆಗಳಲ್ಲಿ ರಾತ್ರಿ ಕರ್ಫ್ಯೂ ವಿಸ್ತರಿಸಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ರಾತ್ರಿ ಕರ್ಫ್ಯೂ ಈಗ ರಾತ್ರಿ 8 ರಿಂದ ಬೆಳಗ್ಗೆ 7 ರವರೆಗೆ ಜಾರಿಯಲ್ಲಿದೆ.

UP Logs Record 22,439 Covid Cases, Night Curfew Duration Extended In 10 Districts

ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿರುವ 10 ಜಿಲ್ಲೆಗಳಲ್ಲಿ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತು ಖುದ್ದಾಗಿ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದರು.ಸೋಂಕು ಲಕ್ಷಣಗಳು ಕಂಡು ಬರುತ್ತಿದ್ದಂತೆ ಸಿಎಂ ಕಚೇರಿಯ ಕೆಲವು ಅಧಿಕಾರಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು.

ಅದರ ಬೆನ್ನ್ಲಲೇ ಮಂಗಳವಾರ ಯೋಗಿ ಆದಿತ್ಯನಾಥ್ ಅವರು ಪ್ರತ್ಯೇಕ ವಾಸದಲ್ಲಿರುವುದಾಗಿ ತಿಳಿಸಿದ್ದರು. ಇದೀಗ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕು ಲಕ್ಷಣಗಳು ಕಂಡುಬರುತ್ತಿದ್ದಂತೆ ಕೊರೊನಾ ಪರೀಕ್ಷೆಗೆ ಒಳಗಾದೆ ಇದೀಗ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+