ಉತ್ತರಪ್ರದೇಶ: ಶೀತ, ಕೆಮ್ಮಿಗೆ ಹೆದರಿ ಯುವಕನೊಬ್ಬ ಆತ್ಮಹತ್ಯೆ

ಬಾಂದಾ, ಏಪ್ರಿಲ್ 6: ವಿಶ್ವದೆಲ್ಲೆಡೆ ಕೊರೊನಾ ಸೋಂಕಿತರು, ಮೃತರ ಸಂಖ್ಯೆ ಹೆಚ್ಚಾಗುತ್ತಿದೆ. ಹಾಗೆಂದ ಮಾತ್ರ ಕೊರೊನಾ ಬಂದವರೆಲ್ಲಾ ಸಾಯುತ್ತಾರೆ ಎಂದರ್ಥವಲ್ಲ.

ಉತ್ತರ ಪ್ರದೇಶದಲ್ಲಿ ಯುವಕನೊಬ್ಬ ಕೆಮ್ಮು, ಶೀತ ಬಂದಿದ್ದಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಜನರಲ್ಲಿ ಕೊರೊನಾ ಕುರಿತು ಮತ್ತಷ್ಟು ಜಾಗೃತಿ ಮೂಡಿಸುವ ಅನಿವಾರ್ಯವಿದೆ. ಕೆಮ್ಮು, ಶೀತದಿಂದ ಬಳಲುತ್ತಿದ್ದ 35 ವರ್ಷದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬಾಂದಾ ಜಿಲ್ಲೆಯಲ್ಲಿ ನಡೆದಿದೆ.

ಮೃತನನ್ನು ರಾಜೇಂದ್ರ ಎಂದು ಗುರುತಿಸಲಾಗಿದೆ. ಈತನಿಗೆ ಕೆಮ್ಮು, ಶೀತ ಕಾಣಿಸಿಕೊಂಡ ಬಳಿಕ ಕೆಲ ಗ್ರಾಮಸ್ಥರು ಕೊರೊನಾಸೋಂಕು ತಗುಲಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ನಂತರ ಆತ ಸ್ವಯಂ ಪ್ರೇರಣೆಯಿಂದ ಕೊಠಡಿಯೊಂದರಲ್ಲಿ ಪ್ರತ್ಯೇಕವಾಗಿದ್ದ. ಇದೇ ಕಾರಣದಿಂದ ಆತ ಮೃತಪಟ್ಟಿರಬಹುದೆಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

UP Man With Cough And Cold Hangs Himself Fearing Covid-19

ಜಿಲ್ಲೆಯ ಜಮಲ್ ಪುರ ಗ್ರಾಮದಲ್ಲಿ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊರೊನಾವೈರಸ್ ಭೀತಿಯಿಂದ ಆತ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಚಿಕಿತ್ಸೆಗಾಗಿ ಆ ಯುವಕ ಯಾವುದೇ ಸರ್ಕಾರಿ ಆಸ್ಪತ್ರೆಗೆ ಹೋಗಿಲ್ಲ, ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕೆಲಸಗಾರ ನಾಗಿದ್ದ ರಾಜೇಂದ್ರ ಮಾರ್ಚ್ ತಿಂಗಳ ಮಧ್ಯದಲ್ಲಿ ಸ್ವಗ್ರಾಮಕ್ಕೆ ಹಿಂತಿರುಗಿದ್ದಾನೆ. ಆಗಿನಿಂದಲೂ ಆತ ಶೀತ, ಕೆಮ್ಮು ಹಾಗೂ ಜ್ವರದಿಂದ ಬಳಲುತ್ತಿದ್ದ ಬಗ್ಗೆ ವರದಿಯಾಗಿದೆ ಎಂದು ಮುಖ್ಯ ವೈದ್ಯಾಧಿಕಾರಿ ಸಂತೋಷ್ ಕುಮಾರ್ ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+