5 ವರ್ಷಗಳ ನಂತರ ಜೊತೆಯಾದ ಕುಟುಂಬ: ಪ್ರಚಾರದಲ್ಲಿ ಅಖಿಲೇಶ್, ಮುಲಾಯಂ, ಶಿವಪಾಲ್
ಲಕ್ನೋ, ಫೆಬ್ರವರಿ 18: ಉತ್ತರ ಪ್ರದೇಶದಲ್ಲಿ ಎರಡು ಹಂತದ ಮತದಾನದ ನಂತರ ಪ್ರಚಾರವು ಮತ್ತಷ್ಟು ತೀವ್ರಗೊಂಡಿದೆ. ಇಟಾವಾದಲ್ಲಿ ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ಅವರ ತಂದೆ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ಪ್ರಚಾರದ ಹಾದಿಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಐದು ವರ್ಷಗಳ ನಂತರ ಮೊದಲ ಬಾರಿಗೆ ಕುಟುಂಬವೇ ಜೊತೆಯಾಗಿ ಪ್ರಚಾರದಲ್ಲಿ ತೊಡಗಿದೆ.
2017ರ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ಲಕ್ನೋದಲ್ಲಿ "ಸಮಾಜವಾದಿ ವಿಕಾಸ್ ರಥ" ಅನ್ನು ಆರಂಭ ಮಾಡಲು ಅಕ್ಟೋಬರ್ 2016 ರಲ್ಲಿ ಈ ಮೂವರು ಸಾರ್ವಜನಿಕವಾಗಿ ಒಟ್ಟಿಗೆ ಕಾಣಿಸಿಕೊಂಡಿದ್ದರು. 2016ರಲ್ಲಿ ಕೌಟುಂಬಿಕ ಕಲಹದಿಂದಾಗಿ ಅಖಿಲೇಶ್ ತನ್ನ ಚಿಕ್ಕಪ್ಪ ಶಿವಪಾಲ್‌ರನ್ನು ಸಮಾಜವಾದಿ ಪಕ್ಷದಿಂದ ಹೊರಕ್ಕೆ ಇಟ್ಟಿದ್ದರು.
ಇದರಿಂದಾಗಿ ಆಕ್ರೋಶಕ್ಕೆ ಒಳಗಾದ ಅಖಿಲೇಶ್ ಯಾದವ್ ಚಿಕ್ಕಪ್ಪ ಶಿವಪಾಲ್ ಸಿಂಗ್ ಯಾದವ್ ತಮ್ಮದೇ ಆದ ಪ್ರಗತಿಶೀಲ ಸಮಾಜವಾದಿ ಪಕ್ಷವನ್ನು (ಲೋಹಿಯಾ) ಸ್ಥಾಪಿಸಿದರು. ಆದರೆ, 2019ರ ಲೋಕಸಭೆ ಚುನಾವಣೆಯಲ್ಲಿ ಪಿಎಸ್‌ಪಿ ರಾಜ್ಯದಲ್ಲಿ ಒಂದೇ ಒಂದು ಸ್ಥಾನವನ್ನು ಗೆಲ್ಲಲು ವಿಫಲವಾಗಿತ್ತು. ಶಿವಪಾಲ್ ಸಿಂಗ್ ಯಾದವ್ ಅವರ ಪಕ್ಷವು ಈಗ ಅಖಿಲೇಶ್ ಯಾದವ್ ನೇತೃತ್ವದ ಮೈತ್ರಿಕೂಟದ ಭಾಗವಾಗಿದೆ.

"ಬಿಜೆಪಿಯನ್ನು ಸೋಲಿಸಲು ನಮಗೆ ಸಹಾಯಕ"
ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಲು ಕೈಜೋಡಿಸಲು ನಿರ್ಧರಿಸಿದ್ದರಿಂದ ಕಳೆದ ವರ್ಷ ಅಖಿಲೇಶ್ ಮತ್ತು ಶಿವಪಾಲ್ ನಡುವಿನ ಭಿನ್ನಾಭಿಪ್ರಾಯ ಅಧಿಕೃತವಾಗಿ ಕೊನೆಗೊಂಡಿದೆ. ಆದರೆ, ಅಂದಿನಿಂದ ಇಬ್ಬರೂ ನಾಯಕರು ಒಟ್ಟಿಗೆ ವೇದಿಕೆ ಹಂಚಿಕೊಳ್ಳುವುದನ್ನು ಕಂಡಿರಲಿಲ್ಲ. ಒಮ್ಮೆ ಎಸ್‌ಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟ ಇಟಾವಾದಲ್ಲಿ, ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಇಬ್ಬರೂ ವೇದಿಕೆಯನ್ನು ಹಂಚಿಕೊಂಡಿದ್ದಾರೆ. ಚಿಕ್ಕಪ್ಪನ (ಶಿವಪಾಲ್ ಸಿಂಗ್ ಯಾದವ್) ಮರಳುವಿಕೆಯು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಶಕ್ತಿಯನ್ನು ಬಲಪಡಿಸುತ್ತದೆ ಮತ್ತು ಯುಪಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ನಮಗೆ ಸಹಾಯ ಮಾಡುತ್ತದೆ ಎಂದು ಅಖಿಲೇಶ್ ಹೇಳಿದ್ದಾರೆ.
ಗುರುವಾರ, ಸಮಾಜವಾದಿ ಪಕ್ಷದ "ಸಮಾಜವಾದಿ ವಿಜಯ ರಥ" ಇಟಾವಾದ ಲಯನ್ ಸಫಾರಿಯಿಂದ ಪ್ರಾರಂಭವಾಯಿತು. 'ರಥ' ಚಳವಳಿಯ ಸಂದರ್ಭದಲ್ಲಿ, ಶಿವಪಾಲ್ ಮತ್ತು ಮುಲಾಯಂ ಸಿಂಗ್ ಯಾದವ್ ಸಮಾಜವಾದಿ ಪಕ್ಷ ಮತ್ತು ಅದರ ಮೈತ್ರಿಗಾಗಿ ಪ್ರಚಾರ ಮಾಡಿದರು. ಅಖಿಲೇಶ್ ಯಾದವ್ ತಮ್ಮ ಚೊಚ್ಚಲ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಮೈನ್‌ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಲ್ಲಿ ಮುಲಾಯಂ ರ್‍ಯಾಲಿಯನ್ನು ನಡೆಸಿದರು.
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10 ಮತ್ತು 14 ರಂದು ಎರಡು ಹಂತಗಳ ಮತದಾನ ಮುಗಿದಿದ್ದು, ಉಳಿದ ಐದು ಹಂತಗಳಿಗೆ ಫೆಬ್ರವರಿ 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆದಿದೆ. ಪಂಜಾಬ್‌ನಲ್ಲಿ ಫೆಬ್ರವರಿ 20 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಪಂಚ ರಾಜ್ಯಗಳಲ್ಲಿ ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.
ಇನ್ನು ಬಿಜೆಪಿ ಅಭ್ಯರ್ಥಿ ಎಸ್‌ಪಿ ಸಿಂಗ್ ಬಾಘೆಲ್ ಮೇಲೆ ಸಮಾಜವಾದಿ ಪಕ್ಷದ ಗೂಂಡಾಗಳು ದಾಳಿ ನಡೆಸಿದ್ದಾರೆಂದು ಅಖಿಲೇಶ್ ಯಾದವ್ ವಿರುದ್ಧ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಅನುರಾಗ್ ಠಾಕೂರ್ ಅವರನ್ನೊಳಗೊಂಡ ಬಿಜೆಪಿ ನಿಯೋಗವು ಲಕ್ನೋದಲ್ಲಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ. (ಒನ್‌ಇಂಡಿಯಾ ಸುದ್ದಿ)
-
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ನಾಸೀರ್ ಅಹ್ಮದ್ ವಜಾ; ಪಕ್ಷದಲ್ಲಿ ಶಿಸ್ತಿಲ್ಲದಿದ್ದರೆ ಕ್ರಮ ಎಂದ ಡಿಕೆ ಶಿವಕುಮಾರ್ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ












Click it and Unblock the Notifications