ಬಿಜೆಪಿ ಕಚೇರಿಗೆ ಬೀಗ ಕಳುಹಿಸಿದ ಎಸ್‌ಪಿ ನಾಯಕ!
ಲಕ್ನೋ, ಜನವರಿ 11: ಉತ್ತರ ಪ್ರದೇಶದಲ್ಲಿ ಚುನಾವಣೆಗೂ ಮುನ್ನ ಬಿಜೆಪಿಗೆ ಭಾರೀ ಹಿನ್ನೆಡೆ ಕಾಣುತ್ತಿದೆ. ಪಕ್ಷದ ನಾಯಕರುಗಳು ರಾಜೀನಾಮೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಿಂದಾಗಿ ಸಮಾಜವಾದಿ ಪಕ್ಷದ ವಕ್ತಾರ ಐಪಿ ಸಿಂಗ್ ಲಕ್ನೋದಲ್ಲಿರುವ ಬಿಜೆಪಿ ಕೇಂದ್ರ ಕಚೇರಿಗೆ ಬೀಗವನ್ನು ಉಡುಗೊರೆಯಾಗಿ ಕಳುಹಿಸಿದ್ದಾರೆ. ಇದರ ಆರ್ಡರ್ ಕಾಪಿಯನ್ನು ಬಿಜೆಪಿಯ ಸ್ವತಂತ್ರ ದೇವ್ ಸಿಂಗ್ ಅವರಿಗೆ ಕಳುಹಿಸಲಾಗಿದೆ.
ಸ್ವತಂತ್ರ ದೇವ್ ಸಿಂಗ್‌ರನ್ನು ಟ್ಯಾಗ್ ಮಾಡಿ ಐಪಿ ಸಿಂಗ್ ಟ್ವೀಟ್ ಮಾಡಿದ್ದಾರೆ. "ಓಂಪ್ರಕಾಶ್ ರಾಜ್‌ಭಾರ್ ಜಿ, ಜಯಂತ್ ಚೌಧರಿ, ರಾಜಮಾತಾ ಕೃಷ್ಣ ಪಟೇಲ್ ಜಿ, ಸಂಜಯ್ ಚೌಹಾಣ್ ಜಿ ಮತ್ತು ಈಗ ಸ್ವಾಮಿಪ್ರಸಾದ್ ಮೌರ್ಯ ಜಿ ಸಮಾಜವಾದಿ ಪಕ್ಷದಲ್ಲಿದ್ದಾರೆ. ನಾನು ಬಿಜೆಪಿ ಪ್ರಧಾನ ಕಚೇರಿಗೆ ಹಾಕಲೆಂದು ಸ್ವತಂತ್ರ ದೇವ್ ಸಿಂಗ್‌ರಿಗೆ ಉಡುಗೊರೆಯಾಗಿ ಬೀಗವನ್ನು ಕಳುಹಿಸಿದ್ದೇನೆ. ಮಾರ್ಚ್ 10 (ಫಲಿತಾಂಶದ ದಿನ) ನಂತರ ಅದನ್ನು ಹಾಕಿ ಮತ್ತು ಮನೆಗೆ ಹೋಗಿ. ಇದು ಅಲೆಯಲ್ಲ ಇದು ಎಸ್ಪಿ ಬಿರುಗಾಳಿ," ಎಂದಿದ್ದಾರೆ.
ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ಸಂಪುಟ ಮತ್ತು ಬಿಜೆಪಿಗೆ ರಾಜೀನಾಮೆ ನೀಡಿದ ನಂತರ, ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಕೂಡಾ ಪಕ್ಷವನ್ನು ತೊರೆದಿದ್ದಾರೆ. ಇದರಲ್ಲಿ ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಸೇರಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯ ಅವರಂತೆ, ರೋಷನ್ ಲಾಲ್ ವರ್ಮಾ ಕೂಡ ಈ ವರ್ಷದ ಫೆಬ್ರವರಿ ಮತ್ತು ಮಾರ್ಚ್‌ನಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಸಮಾಜವಾದಿ ಪಕ್ಷಕ್ಕೆ ಸೇರಲು ನಿರ್ಧರಿಸಿದ್ದಾರೆ.

ಯುಪಿ ಸಚಿವ ಸ್ಥಾನಕ್ಕೆ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ
ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಮಂಗಳವಾರ ತಮ್ಮ ರಾಜೀನಾಮೆ ಪತ್ರವನ್ನು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರವು ದಲಿತರು, ರೈತರು, ಸಣ್ಣ ಮತ್ತು ಮಧ್ಯಮ ಪ್ರಮಾಣದ ಉದ್ಯಮಗಳು ಮತ್ತು ನಿರುದ್ಯೋಗಿ ಯುವಕರ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ತಮ್ಮ ಪತ್ರದಲ್ಲಿ ಆರೋಪ ಮಾಡಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ಪತ್ರವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಕೆಲವೇ ನಿಮಿಷಗಳ ನಂತರ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ನಾಯಕನೊಂದಿಗಿನ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಸ್ವಾಮಿ ಪ್ರಸಾದ್ ಮೌರ್ಯರನ್ನು ಪಕ್ಷಕ್ಕೆ ಸ್ವಾಗತಿಸಿದ್ದಾರೆ.
ओमप्रकाश राजभर जी,जयंत चौधरी जी,
— I.P. Singh (@IPSinghSp) January 11, 2022
राजमाता कृष्णा पटेल जी,संजय चौहान जी और अब स्वामीप्रसाद मौर्य जी समाजवादी पार्टी के साथ हैं।
मैंने BJP मुख्यालय पर @swatantrabjp जी को एक ताला तोहफे के रूप में भेज दिया है, 10 मार्च के बाद लगा घर लौट जाइएगा।
लहर नहीं, अब सपा की आँधी चल रही है। pic.twitter.com/DOu4v58L4G
"ಮೌರ್ಯ ಯಾವಾಗಲೂ ನ್ಯಾಯದ ಪರವಾಗಿದ್ದಾರೆ. ಜನಸಾಮಾನ್ಯರಲ್ಲಿ ಚಿರಪರಿಚಿತ ವ್ಯಕ್ತಿಯಾಗಿದ್ದಾರೆ. ನಾನು ಅವರನ್ನು ಮತ್ತು ಇತರ ಎಲ್ಲಾ ನಾಯಕರು, ಕಾರ್ಯಕರ್ತರು ಮತ್ತು ಬೆಂಬಲಿಗರನ್ನು ಸಮಾಜವಾದಿ ಪಕ್ಷಕ್ಕೆ ಸ್ವಾಗತಿಸುತ್ತೇನೆ," ಅಖಿಲೇಶ್ ಯಾದವ್ ಹೇಳಿದ್ದಾರೆ.
ರಾಜ್ಯದಲ್ಲಿ ಕಠಿಣ ನಿರ್ಬಂಧಗಳು ಜನವರಿ 31ರವರೆಗೆ ಮುಂದುವರಿಕೆ#Karnataka #CoronaGuideline #COVID19 #CoronaPandemie #ಒನ್ಇಂಡಿಯಾಕನ್ನಡಸುದ್ದಿ pic.twitter.com/JomJQDjg1v
— oneindiakannada (@OneindiaKannada) January 11, 2022
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23 ಮತ್ತು ಮಾರ್ಚ್ 3 ಮತ್ತು 7 ರಂದು ಚುನಾವಣೆ ನಡೆಯಲಿದೆ. ಪಂಜಾಬ್, ಗೋವಾ ಮತ್ತು ಉತ್ತರಾಖಂಡದಲ್ಲಿ ಫೆಬ್ರವರಿ 14 ರಂದು ಮತದಾನ ನಡೆಯಲಿದೆ. ಮಣಿಪುರದಲ್ಲಿ ಫೆಬ್ರವರಿ 27 ಮತ್ತು ಮಾರ್ಚ್ 3 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ. (ಒನ್‌ಇಂಡಿಯಾ ಸುದ್ದಿ)












Click it and Unblock the Notifications