ಯುಪಿ: ಮತಕ್ಕಾಗಿ ಕೃಷಿ ಕಾನೂನು ಹಿಂಪಡೆದ ಬಿಜೆಪಿ: ರೈತರಿಗೆ ಅಖಿಲೇಶ್ ಕಿವಿಮಾತು
ಮುಜಾಫರ್‌ನಗರ, ಜನವರಿ 28: ಚುನಾವಣೆ ಮುಗಿದ ನಂತರ ಬಿಜೆಪಿ ಈಗ ಹಿಂಪಡೆದಿರುವ ರೈತ ವಿರೋಧಿ ಕಾನೂನನ್ನು ಮರಳಿ ತರುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಶುಕ್ರವಾರ ಆರೋಪಿಸಿದ್ದಾರೆ. ಕೇಸರಿ ಪಕ್ಷವು ಮತಕ್ಕಾಗಿ ವಿವಾದಾತ್ಮಕ ಕಾನೂನುಗಳನ್ನು ರದ್ದುಗೊಳಿಸುವುದರಿಂದ ರೈತರು ಈ ಬಗ್ಗೆ ಎಚ್ಚರಿಕೆಯಿಂದಿರಬೇಕು ಎಂದು ಅವರು ಒತ್ತಾಯಿಸಿದರು.
ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಚೌಧರಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಯಾದವ್, ಎಸ್‌ಪಿ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಇಂತಹ ಕಾನೂನುಗಳನ್ನು ಜಾರಿಗೆ ತರಲು ಮರೆಯುವುದಿಲ್ಲ ಎಂದು ರೈತರಿಗೆ ಕಿವಿ ಮಾತನ್ನು ಹೇಳಿದರು. ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಆರ್‌ಎಲ್‌ಡಿ ಸ್ಪರ್ಧಿಸುತ್ತಿದೆ.
ಬಿಜೆಪಿಯು ಪಶ್ಚಿಮ ಉತ್ತರ ಪ್ರದೇಶದಲ್ಲಿ ಜಾಟ್‌ಗಳನ್ನು ಓಲೈಸಲು ಪ್ರಯತ್ನಿಸುತ್ತಿದೆ. ಇಲ್ಲಿಂದ ಸಮುದಾಯದ ಸದಸ್ಯರು ದೆಹಲಿಯ ಗಡಿ ಬಿಂದುಗಳಲ್ಲಿ ಕಾನೂನುಗಳ ವಿರುದ್ಧ ವರ್ಷವಿಡೀ ನಡೆದ ಚಳವಳಿಯಲ್ಲಿ ಭಾಗವಹಿಸಿದ್ದರು. ವಾಸ್ತವವಾಗಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ದೆಹಲಿಯಲ್ಲಿ ಜಾಟ್ ನಾಯಕರೊಂದಿಗೆ ಸಭೆ ನಡೆಸಿದ ನಂತರ ಬಿಜೆಪಿ ಆರ್‌ಎಲ್‌ಡಿ ಮುಖ್ಯಸ್ಥರಿಗೆ ತಮ್ಮ ಪಕ್ಷದೊಂದಿಗೆ ಕೈಜೋಡಿಸಲು ಮುಂದಾಗಿದೆ.

ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್, ಎಸ್‌ಪಿ ವರಿಷ್ಠ ಮುಲಾಯಂ ಸಿಂಗ್ ಯಾದವ್ ಮತ್ತು ರೈತ ನಾಯಕ ಮಹೇಂದ್ರ ಸಿಂಗ್ ಟಿಕಾಯತ್ ಅವರು ರೈತರ ಪರವಾದ ಹೋರಾಟವನ್ನು ನಾನು ಮತ್ತು ಜಯಂತ್ ಮುಂದುವರಿಸುತ್ತಿದ್ದೇವೆ ಎಂದು ಅಖಿಲೇಶ್ ಹೇಳಿದರು.
ಪ್ರಧಾನಿ ಮೋದಿಯವರ ಮಹತ್ವಾಕಾಂಕ್ಷೆಯ ಕಾನೂನಾದ ಮೂರು ಕೃಷಿ ಕಾಯ್ದೆಗಳು ಆರಂಭದಿಂದಲೇ ವ್ಯಾಪಕ ವಿರೋಧ ವ್ಯಕ್ತವಾಗಿದ್ದವು. ಒಂದು ಹಂತದಲ್ಲಿ ವಿರೋಧ ಪಕ್ಷಗಳು ಪ್ರತಿಭಟಿಸಿ ಸುಮ್ಮನಾದರೂ ಸಹಾ ರೈತರೂ ಹೋರಾಟವನ್ನು ಕೈಬಿಟ್ಟಿರಲಿಲ್ಲ. ವರ್ಷದಿಂದ ರೈತರು ಬೀದಿಬದಿಯಲ್ಲಿ ಕುಳಿತು ಪ್ರತಿಭಟಿಸುತ್ತಲೇ ಇದ್ದರು. ಹೀಗಾಗಿ ಕೊನೆಗೂ ರೈತರ ಪ್ರತಿಭಟನೆಗೆ ಮಣಿಸು ವಿವಾದಿತ ಕಾಯ್ದೆ ಹಿಂಪಡೆಯಲು ಮೋದಿ ತೀರ್ಮಾನಿಸಿದರು. ಇತ್ತೀಚೆಗಷ್ಟೇ ದೇಶಾದ್ಯಂತ ಮುಕ್ತಾಯವಾದ ಉಪಚುನಾವಣೆಯಲ್ಲಿ ಬಿಜೆಪಿ ಕೊಂಚ ಹಿನ್ನೆಡೆಯನ್ನು ಅನುಭವಿಸಿತ್ತು. ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನೆಡೆಯಾಗುವ ಸಾಧ್ಯತೆಗಳನ್ನು ಮನಗಂಡು ಮೋದಿ ಇಂತಹದ್ದೊಂದು ತೀರ್ಮಾನ ತೆಗೆದುಕೊಂಡಿರಬಹುದು ಎಂದು ವಿಶ್ಲೇಷಿಸಲಾಗುತ್ತಿದೆ.
ಸಿಖ್ ಸಮುದಾಯದ ಸಂತ ಗುರು ನಾನಕ್ ಅವರ ಜನ್ಮದಿನ. ನೂತನ ಮೂರು ಕೃಷಿ ಕಾಯಿದೆ ಜಾರಿಗೆ ಪಂಜಾಬ್‌ನಲ್ಲೇ ಅತಿಹೆಚ್ಚು ವಿರೋಧ ವ್ಯಕ್ತವಾಗಿತ್ತು. ರೈತರು ಮನೆ-ಮಠ ತೊರೆದು ಸರ್ಕಾರದ ಈ ವಿವಾದಿತ ಕಾನೂನಿನ ವಿರುದ್ದ ತಿರುಗಿ ಬಿದ್ದಿದ್ದರು. ರೈತರ ಕೋಪ ಶಮನ ಮಾಡಲು ಗುರು ಪೂರಬ್ ದಿನ ಭರ್ಜರಿ ಗಿಫ್ಟ್ ನೀಡಿದರು.
ಚುನಾವಣೆಯ ಜತೆ ಜತೆಗೆ ದೇಶದ ಬೆನ್ನೆಲುಬು ಎನಿಸಿಕೊಂಡಿರುವ ರೈತರ ಮನಗೆಲ್ಲುವುದು ಪ್ರಧಾನಿ ಮೋದಿ ಅವರಿಗೆ ಅನಿವಾರ್ಯ ಎನಿಸುವ ಮಟ್ಟಿಗೆ ಪರಿಸ್ಥಿತಿ ನಿರ್ಮಾಣವಾಗಿತ್ತು. ದೇಶದ ಮೂಲೆ ಮೂಲೆಯಿಂದ ರೈತರು ಮೋದಿ ಸರ್ಕಾರದ ಈ ವಿವಾದಿತ ಕೃಷಿ ಕಾನೂನುಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದರು. ರೈತರನ್ನು ಎದುರು ಹಾಕಿಕೊಂಡರೆ ಭವಿಷ್ಯದಲ್ಲಿ ಪಕ್ಷದ ವರ್ಚಸ್ಸಿಗೆ ಹೊಡೆತ ಬೀಳಬಹುದು ಎನ್ನುವ ಮುನ್ನೆಚ್ಚರಿಕೆಯಿಂದ ಈ ಅಚ್ಚರಿಯ ತೀರ್ಮಾನ ಹೊರಬಿದ್ದಿದೆ ಎನ್ನಲಾಗುತ್ತಿದೆ.












Click it and Unblock the Notifications