ಯುಪಿ: ಅಖಿಲೇಶ್ ಮತ್ತು ಶಿವಪಾಲ್ ಯಾದವ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಗಳಿಲ್ಲ
ಲಕ್ನೋ ಜನವರಿ 2: ಫೆಬ್ರವರಿ 10 ರಿಂದ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಅಖಿಲೇಶ್ ಯಾದವ್ ಮತ್ತು ಶಿವಪಾಲ್ ಯಾದವ್ ವಿರುದ್ಧ ಯಾವುದೇ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಘೋಷಿಸಿದೆ. ಅಖಿಲೇಶ್ ಮತ್ತು ಶಿವಪಾಲ್ ಯಾದವ್ ವಿರುದ್ಧ ಯಾವುದೇ ಅಭ್ಯರ್ಥಿಯನ್ನು ಕಂಡುಹಿಡಿಯಲಾಗದಷ್ಟು ಕಾಂಗ್ರೆಸ್ ದುರ್ಬಲವಾಗಿದೆಯೇ ಎಂದು ಜನರು ಕಾಂಗ್ರೆಸ್‌ನ ಈ ನಿರ್ಧಾರದ ಮೇಲೆ ಪ್ರಶ್ನೆಗಳನ್ನು ಎತ್ತುತ್ತಿದ್ದಾರೆ, ಆದರೆ ಕಾಂಗ್ರೆಸ್ ಪಕ್ಷವು ಸೌಜನ್ಯಕ್ಕಾಗಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳುತ್ತದೆ.
ವಾಸ್ತವವಾಗಿ ಈ ಸೌಜನ್ಯವು ಎರಡೂ ಪಕ್ಷಗಳಿಂದ ಕಂಡುಬರುತ್ತದೆ. ಸಂಸತ್ ಚುನಾವಣೆಯಲ್ಲಿ ಸಮಾಜವಾದಿ ಪಕ್ಷವು ಅಮೇಥಿ ಮತ್ತು ರಾಯ್ ಬರೇಲಿಯಿಂದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ. 2017ರಲ್ಲಿ ಬಿಜೆಪಿಯನ್ನು ಸೋಲಿಸಲು ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದವು, ಆದರೆ ಮೋದಿ ಅಲೆ ಎಲ್ಲವನ್ನು ಧ್ವಂಸ ಮಾಡಿತ್ತು. 2017 ರ ಚುನಾವಣಾ ಫಲಿತಾಂಶವನ್ನು ಪರಿಗಣಿಸಿ, ಬಹುಶಃ ಎರಡು ಪಕ್ಷಗಳು ಈ ಬಾರಿ ಮೈತ್ರಿ ಮಾಡಿಕೊಂಡಿಲ್ಲ.

ಎಸ್‌ಪಿ ಭದ್ರಕೋಟೆಯಾದ ಮೈನ್‌ಪುರಿ
ಅಖಿಲೇಶ್ ಯಾದವ್ ಅವರು ತಮ್ಮ ತಂದೆ ಮುಲಾಯಂ ಸಿಂಗ್ ಯಾದವ್ ಅವರ ಭದ್ರಕೋಟೆಯಾದ ಮೈನ್‌ಪುರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕರ್ಹಾಲ್ ವಿಧಾನಸಭಾ ಕ್ಷೇತ್ರದಿಂದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಇವರ ವಿರುದ್ಧ ಬಿಜೆಪಿ ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರನ್ನು ಕಣಕ್ಕಿಳಿಸಿದೆ.

ಎಸ್‌ಪಿಯಿಂದಲೇ ಎಸ್‌ಪಿ ಸಿಂಗ್
ಎಸ್‌ಪಿ ಸಿಂಗ್ ಬಘೇಲ್ ಅವರು ಎಸ್‌ಪಿಯಿಂದಲೇ ತಮ್ಮ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ್ದಾರೆ. ಅವರನ್ನು ಮುಲಾಯಂ ಸಿಂಗ್ ಯಾದವ್‌ಗೆ ಅತ್ಯಂತ ಆಪ್ತ ಎಂದು ಪರಿಗಣಿಸಲಾಗಿತ್ತು. ನಾಮಪತ್ರ ಸಲ್ಲಿಸುವ ವೇಳೆ ಎಸ್‌ಪಿ ಸಿಂಗ್ ಬಘೇಲ್ ಅವರು ಮೈನ್‌ಪುರಿ ಯಾರ ಭದ್ರಕೋಟೆಯೂ ಅಲ್ಲ ಎಂದು ಹೇಳಿದ್ದರು. "ನಾನು ನನ್ನ ಎಲ್ಲಾ ಶಕ್ತಿಯಿಂದ ಹೋರಾಡುತ್ತೇನೆ ... ನಾನು ಕನ್ನೌಜ್, ಫಿರೋಜಾಬಾದ್ ಮತ್ತು ಇಟಾವಾ (ಸಮಾಜವಾದಿ ಭದ್ರಕೋಟೆ)ದಲ್ಲಿ ಎಸ್‌ಪಿ ಕುಸಿತವನ್ನು ನೋಡಿದ್ದೇನೆ" ಎಂದು ಅವರು ಹೇಳಿದರು.

ಇಟಾವಾದಿಂದ ಶಿವಪಾಲ್ ಸ್ಪರ್ಧೆ
ಅಖಿಲೇಶ್ ಯಾದವ್ ಚಿಕ್ಕಪ್ಪ ಶಿವಪಾಲ್ ಯಾದವ್ ನಡುವೆ 2017ರ ಚುನಾವಣೆಗೂ ಮುನ್ನ ಕೌಟುಂಬಿಕ ಭಿನ್ನಾಭಿಪ್ರಾಯದಿಂದ ಶಿವಪಾಲ್ ಯಾದವ್ ಎಸ್‌ಪಿ ತೊರೆದು ಪ್ರತ್ಯೇಕ ಪಕ್ಷ ಕಟ್ಟಿದ್ದರು. ಆದರೆ ಈ ಬಾರಿ ಬಿಜೆಪಿಯನ್ನು ಎದುರಿಸಲು ಅಖಿಲೇಶ್ ಯಾದವ್ ಅವರ ಅತಂತ್ರ ಮೈತ್ರಿಕೂಟಕ್ಕೆ ಸೇರ್ಪಡೆಯಾದರು. ಆದರೆ ಅಧಿಕೃತವಾಗಿ ಘೋಟಣೆಯಾಗದ ಹಿನ್ನೆಲೆ ಶಿವಪಾಲ್ ಯಾದವ್ ಇಟಾವಾದಲ್ಲಿನ ಜಸ್ವಂತ್ ನಗರದಿಂದ ಸ್ಪರ್ಧಿಸಲಿದ್ದಾರೆ. ಆದರೆ ಮುಲಾಯಂ ಸಿಂಗ್ ಯಾದವ್ ಕುಟುಂಬ ಈ ಕ್ಷೇತ್ರದಲ್ಲಿ ಪ್ರಾಬಲ್ಯ ಸಾಧಿಸಿದೆ. ಇದೇ ವೇಳೆ ಮಾಯಾವತಿ ಇಬ್ಬರೂ ನಾಯಕರ ವಿರುದ್ಧ ದಲಿತ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದ್ದಾರೆ.

11 ಜಿಲ್ಲೆಗಳಲ್ಲಿ ಮೊದಲ ಹಂತದ ಮತದಾನ
ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 11 ಜಿಲ್ಲೆಗಳಲ್ಲಿ ಒಟ್ಟು 58 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 10 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.












Click it and Unblock the Notifications