ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉ.ಪ್ರ ಚುನಾವಣೆ: ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್, ಪ್ರಿಯಾಂಕಾ

|
Google Oneindia Kannada News

ಲಕ್ನೋ, ಜನವರಿ 21: ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆ, ಯುವಕರನ್ನು ಗಮನದಲ್ಲಿಟ್ಟುಕೊಂಡು, ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದೆ.

'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ. "ನಾವು ದ್ವೇಷವನ್ನು ಹರಡುವುದಿಲ್ಲ, ನಾವು ಜನರನ್ನು ಒಗ್ಗೂಡಿಸುತ್ತೇವೆ ಮತ್ತು ನಾವು ಯುವ ಶಕ್ತಿಯೊಂದಿಗೆ ಹೊಸ ಉತ್ತರ ಪ್ರದೇಶವನ್ನು ರಚಿಸಲು ಬಯಸುತ್ತೇವೆ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಯುಪಿಯಲ್ಲಿ ಬಹುಮತದೊಂದಿಗೆ ಎನ್‌ಡಿಎ ಸರ್ಕಾರ ರಚಿಸಲಿದೆ: ಅಮಿತ್ ಶಾಯುಪಿಯಲ್ಲಿ ಬಹುಮತದೊಂದಿಗೆ ಎನ್‌ಡಿಎ ಸರ್ಕಾರ ರಚಿಸಲಿದೆ: ಅಮಿತ್ ಶಾ

ನೇಮಕಾತಿಯೂ ರಾಜ್ಯದ ಅತಿ ದೊಡ್ಡ ಸಮಸ್ಯೆಯಾಗಿದ್ದು, ಇದರಿಂದ ಯುವಕರು ನಿರಾಶೆಗೊಂಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೇಳಿದ್ದಾರೆ.

UP Polls: Rahul, Priyanka rRlease Congress Youth Manifesto

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕಾಂಗ್ರೆಸ್ ಯುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪಕ್ಷದಿಂದ ಮಾತ್ರ ರಾಜ್ಯದ ಯುವಕರಿಗೆ ಹೊಸ ದೃಷ್ಟಿಕೋನ ನೀಡಲು ಸಾಧ್ಯ ಎಂದು ಹೇಳಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ 'ಯುವ ಪ್ರಣಾಳಿಕೆ' ಬಿಡುಗಡೆ ಮಾಡಿ ಮಾತನಾಡಿದ ರಾಹುಲ್ ಗಾಂಧಿ, ಈ ವಿಷನ್ ಡಾಕ್ಯುಮೆಂಟ್ ಸುಳ್ಳಿನ ಭರವಸೆ ಅಲ್ಲ. ಯುವಕರನ್ನು ಸಂಪರ್ಕಿಸಿ ಪ್ರಣಾಳಿಕೆ ಸಿದ್ಧಪಡಿಲಾಗಿದೆ ಎಂದು ಹೇಳಿದರು.

ದೆಹಲಿಯ ಎಐಸಿಸಿ ಕಚೇರಿಯಲ್ಲಿ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿದರು. ಇಬ್ಬರ ಮಾತುಗಳಲ್ಲಿ ಹಾಗೂ ಇಂದು ಬಿಡುಗಡೆಗೊಂಡ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷ ನಿರುದ್ಯೋಗಿ ಯುವಕರ ಪರ ನಿಂತಿರುವುದು ಎದ್ದು ಕಾಣುತ್ತಿದೆ. ಈ ವೇಳೆ ಮಾತನಾಡಿದ ರಾಹುಲ್ ಗಾಂಧಿ ಅವರು, ದೇಶದ ಮತ್ತು ಉತ್ತರ ಪ್ರದೇಶದ ಸಮಸ್ಯೆ ಎಲ್ಲಾ ಯುವಕರಿಗೆ ಗೊತ್ತಿದೆ‌.

ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷ ಯುವ ಸಮುದಾಯಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಯುವಕರಿಗೆ ಹೇಗೆ ಉದ್ಯೋಗ ನೀಡುತ್ತದೆ ಎಂದು ವಿವರಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲ. ಉತ್ತರ ಪ್ರದೇಶದ ಯುವಕರ ಜೊತೆಗೆ ಸಂವಾದ ನಡೆಸಿ ಅವರ ಅಭಿಪ್ರಾಯ ಸೇರಿಸಿ ರೂಪಿಸಲಾಗಿರುವ ಪ್ರಣಾಳಿಕೆ ಎಂದು ತಿಳಿಸಿದರು.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಪ್ರಿಯಾಂಕಾ ಗಾಂಧಿ ಅವರು ಉತ್ತರ ಪ್ರದೇಶದಲ್ಲಿ ಉದ್ಯೋಗದ ಸಮಸ್ಯೆ ಇದೆ. ಯುವಕರು ಉದ್ಯೋಗ ಸಿಗದ ಕಾರಣ ಬೇಸರದಲ್ಲಿದ್ದಾರೆ.

ಹೀಗಾಗಿ ಕಾಂಗ್ರೆಸ್ ಯುವ ಸಮುದಾಯಕ್ಕೆ ಉದ್ಯೋಗ ನೀಡುವ ಪ್ರಯತ್ನ ಮಾಡುತ್ತಿದೆ. ನಮ್ಮ ಪ್ರಣಾಳಿಕೆಯಲ್ಲಿ ಸರ್ಕಾರಿ ಉದ್ಯೋಗಕ್ಕೆ ಪರೀಕ್ಷೆ ಹೇಗೆ ನಡೆಯಬೇಕು ಎಂದು ವಿವರಿಸಿದ್ದೇವೆ.

ಅಲ್ಲದೆ ಹಿಂದೆ ನಡೆದ ಪರೀಕ್ಷಾ ಅಕ್ರಮಗಳನ್ನು ಕಾಂಗ್ರೆಸ್ ತನಿಖೆ ಮಾಡಲಿದೆ. ಜೊತೆಗೆ ಸಣ್ಣ ಉದ್ಯಮ ನಡೆಸುವ ಯುವ ಸಮುದಾಯಕ್ಕೆ ಕಾಂಗ್ರೆಸ್ ಹೇಗೆ ಸಹಾಯ ಮಾಡಲಿದೆ ಎಂದು ಕೂಡ ವಿವರಿಸಲಾಗಿದೆ ಎಂದು ತಿಳಿಸಿದರು.

ಉತ್ತರ ಪ್ರದೇಶ ಒಂದರಲ್ಲೇ 16 ಲಕ್ಷ ಯುವಕರು ಕಳೆದು ವರ್ಷ ಉದ್ಯೋಗ ಕಳೆದುಕೊಂಡಿದ್ದಾರೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ನೀಡುವುದಾಗಿ ಪ್ರಧಾನ ಮಂತ್ರಿ ಆಗುವ ಮೊದಲು ನರೇಂದ್ರ ಮೋದಿ ಹೇಳಿದ್ದರು.

ಆದರೆ ಉದ್ಯೋಗ ಕಸಿದುಕೊಂಡರು. ಈ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಯುವಕರಿಗೆ ಹೊಸ ವಿಶನ್ ಅವಶ್ಯಕತೆ ಇದೆ. ಆ ಹೊಸ ದೃಷ್ಟಿಕೋನದಲ್ಲಿ ಕಾಂಗ್ರೆಸ್ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ದ್ವೇಷವನ್ನು ಹರಡುವುದಿಲ್ಲ.

ಬದಲಿಗೆ ಯುವಕರನ್ನು ಒಂದುಗೂಡಿಸುತ್ತೇವೆ. ನಾವು ಉತ್ತರ ಪ್ರದೇಶವನ್ನು ಕಟ್ಟಲು ಪ್ರಯತ್ನಿಸುತ್ತಿವೆ. ಕಾಂಗ್ರೆಸ್ ಉತ್ತರ ಪ್ರದೇಶದ ಭವಿಷ್ಯಕ್ಕಾಗಿ ಹೋರಾಡುತ್ತಿದೆ ಎಂದು ಹೇಳಿದರು.

- ಮೊದಲ ಹಂತದಲ್ಲಿ ಫೆಬ್ರವರಿ 10ರಂದು ಮತದಾನ

- ಎರಡನೇ ಹಂತದಲ್ಲಿ ಫೆಬ್ರವರಿ 14ರಂದು ಮತದಾನ

- ಮೂರನೇ ಹಂತದಲ್ಲಿ ಫೆಬ್ರವರಿ 20ರಂದು ಮತದಾನ

- ನಾಲ್ಕನೇ ಹಂತದಲ್ಲಿ ಫೆಬ್ರವರಿ 23ರಂದು ಮತದಾನ

- ಐದನೇ ಹಂತದಲ್ಲಿ ಫೆಬ್ರವರಿ 27ರಂದು ಮತದಾನ

- ಆರನೇ ಹಂತದಲ್ಲಿ ಮಾರ್ಚ್ 3ರಂದು ಮತದಾನ

- ಏಳನೇ ಹಂತದಲ್ಲಿ ಮಾರ್ಚ್ 7ರಂದು ಮತದಾನ

English summary
Rahul Gandhi and Priyanka Gandhi Vadra on Friday released the Congress' manifesto for the youth of Uttar Pradesh ahead of the assembly elections, saying only the party can give a new vision to the youth in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X