ಯುಪಿ ಅತ್ಯಾಚಾರ ಪ್ರಕರಣ: 'ಆತ್ಮಗಳು ನಡುಗಿಸುವ ಶಿಕ್ಷೆ ನೀಡಲಾಗುವುದು' ಯುಪಿ ಸರ್ಕಾರದ ಭರವಸೆ
ಲಕ್ನೋ ಸೆಪ್ಟೆಂಬರ್ 15: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಇಬ್ಬರು ದಲಿತ ಅಪ್ರಾಪ್ತ ಸಹೋದರಿಯರು ಮರದ ಮೇಲೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ ಉತ್ತರ ಪ್ರದೇಶ ಸರ್ಕಾರವು ತ್ವರಿತ ಕ್ರಮ ಮತ್ತು ನ್ಯಾಯದ ಭರವಸೆ ನೀಡಿದೆ. ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಅವರು ತ್ವರಿತ ನ್ಯಾಯಾಲಯದ ಮೂಲಕ ನ್ಯಾಯವನ್ನು ತಲುಪಿಸಲಾಗುವುದು ಮತ್ತು ವಿಚಾರಣೆ ನಡೆಸಲಾಗುವುದು ಎಂದು ಹೇಳಿದರು.
ಇಂಡಿಯಾ ಟುಡೇ ಟಿವಿಗೆ ಪ್ರತ್ಯೇಕವಾಗಿ ಮಾತನಾಡಿದ ಯುಪಿ ಉಪ ಮುಖ್ಯಮಂತ್ರಿ, "ಈ ವಿಷಯದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಮತ್ತು ತಪ್ಪಿತಸ್ಥರನ್ನು ಬಿಡಲಾಗುವುದಿಲ್ಲ. ಸರ್ಕಾರವು ಸಂತ್ರಸ್ತ ಕುಟುಂಬದೊಂದಿಗೆ ನಿಂತಿದೆ ಮತ್ತು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದೆ" ಎಂದಿದ್ದಾರೆ.
ಘಟನೆಯಲ್ಲಿ ಜುನೈದ್, ಸೊಹೈಲ್, ಹಫೀಜುಲ್, ಕರಿಮುದ್ದೀನ್ ಮತ್ತು ಆರೀಫ್ ಭಾಗಿಯಾಗಿದ್ದರು. ಘಟನೆಗೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ. ಹುಡುಗಿಯರನ್ನು ಕತ್ತು ಹಿಸುಕಿ ಕೊಂದು ನಂತರ ನೇಣು ಹಾಕಿ ಕ್ರೂರವಾಗಿ ಹತ್ಯೆ ಮಾಡಲಾಗಿದೆ. ಈ ಘಟನೆಯಲ್ಲಿ ಭಾಗಿಯಾದವರ ವಿರುದ್ಧ ಮುಂದಿನ ಪೀಳಿಗೆಯು ಸಹ ನಡುಗುವಂಥ ಕ್ರಮವನ್ನು ಸರ್ಕಾರ ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದರು.

ತನ್ನ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ ಎಂದು ಸಂತ್ರಸ್ತರ ತಾಯಿ ಆರೋಪಿಸಿದ್ದಾರೆ. ಹದಿಹರೆಯದವರನ್ನು ಮೋಟಾರ್‌ಸೈಕಲ್‌ಗಳಲ್ಲಿ ಅಪಹರಿಸಿ, ಅತ್ಯಾಚಾರ ಎಸಗಲಾಗಿದೆ ಮತ್ತು ಅವರ ದೇಹಗಳನ್ನು ಮರಕ್ಕೆ ನೇತುಹಾಕಲಾಗಿದೆ ಎಂದು ಅವರ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ಎಫ್‌ಐಆರ್ ದಾಖಲಿಸಿದ ಬಳಿಕ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಹುಡುಗಿಯರು ತಮ್ಮ ಇಚ್ಛಾಶಕ್ತಿಯಿಂದ ಆರೋಪಿಗಳ ಜೊತೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.












Click it and Unblock the Notifications