ಉತ್ತರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ದುರಂತ, 7ಸಾವು

ಬುದಾಯು(ಉತ್ತರಪ್ರದೇಶ), ಅಕ್ಟೋಬರ್ 26: ಇಲ್ಲಿನ ಪಟಾಕಿ ಕಾರ್ಖಾನೆಯೊಂದರಲ್ಲಿ ನಡೆದ ಅಗ್ನಿ ಅಕಸ್ಮಿಕದಲ್ಲಿ ಸುಮಾರು 7 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ.

ಶುಕ್ರವಾರ ಸಂಜೆ ಸಂಭವಿಸಿದ ಬೆಂಕಿ ದುರಂತದಲ್ಲಿ 7 ಮಂದಿ ಮೃತಪಟ್ಟಿರುವುದು ದೃಢವಾಗಿದ್ದು, 3 ಮಂದಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ರಸೂಲ್‌ಪುರ ಗ್ರಾಮದಲ್ಲಿದ್ದ ಅಂಗಡಿಯಲ್ಲಿ ಮೊದಲಿಗೆ ಸ್ಫೋಟ ಸಂಭವಿಸಿದ್ದು, ಸ್ಫೋಟದ ರಭಸಕ್ಕೆ ಪಟಾಕಿ ಅಂಗಡಿ ಕಟ್ಟಡ ಕುಸಿದು ಬಿದ್ದಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ವಾಹನಗಳು ಆಗಮಿಸಿದ್ದು, ಬೆಂಕಿ ನಂದಿಸಲು ಸಿಬ್ಬಂದಿ ಪರದಾಡುತ್ತಿದ್ದಾರೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಇನ್ನು ಕೆಲವರು ಸಿಲುಕಿರುವ ಸಾಧ್ಯತೆ ಕಂಡು ಬಂದಿದೆ. ರಕ್ಷಣಾ ಕಾರ್ಯ ಭರದಿಂದ ಸಾಗಿದೆ.

UP: Seven killed, three injured after explosion at firecracker factory in Badaun

ಬಾಲಾಘಾಟ್ ನಲ್ಲಿ ಇತ್ತೀಚೆಗೆ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ 23 ಮಂದಿ ಮೃತಪಟ್ಟ ಘಟನೆ ನೆನಪಿನಿಂದ ಮಾಸುವ ಮೊದಲೇ ಮತ್ತೊಂದು ಇಂಥದ್ದೇ ದುರಂತ ಸಂಭವಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+