Breaking: ಉತ್ತರ ಪ್ರದೇಶ ಕೆಮಿಕಲ್ ಫ್ಯಾಕ್ಟರಿ ಸ್ಫೋಟದಲ್ಲಿ 8 ಮಂದಿ ದುರ್ಮರಣ

ಲಕ್ನೋ, ಜೂನ್ 4: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಬಾಯ್ಲರ್‌ನಲ್ಲಿ ಸಂಭವಿಸಿದ ಸ್ಫೋಟದಲ್ಲಿ 8 ಮಂದಿ ಮೃತಪಟ್ಟಿದ್ದು, 15ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ.

ಹಾಪುರ್‌ನಲ್ಲಿರುವ ಎಲೆಕ್ಟ್ರಾನಿಕ್ ಉಪಕರಣಗಳ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ, 8 ಮಂದಿ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಬಾಯ್ಲರ್‌ನಲ್ಲಿ ಸ್ಫೋಟ ಸಂಭವಿಸಿದ್ದು, ಅಗ್ನಿಯ ಜ್ವಾಲೆ ಇಡೀ ಕಾರ್ಖಾನೆಗೆ ವ್ಯಾಪಿಸುವ ಅಪಾಯವಿದೆ. ಸ್ಥಳಕ್ಕೆ ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ.

 Uttar Pradeh blast happened in chemical factory; 8 Dead, 15 Injured

ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ:

ಉತ್ತರ ಪ್ರದೇಶದಲ್ಲಿ ಸಂಭವಿಸಿರುವ ಅಗ್ನಿ ಅವಘಡದ ಕುರಿತು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹಾಪುರ ಐಜಿ ಪ್ರವೀಣ್ ಕುಮಾರ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+