ತಂದೆಯಿಂದಲೇ ಬಾಲಕಿ ಮೇಲೆ ಅತ್ಯಾಚಾರ; ಎಸ್ಪಿ ಸದಸ್ಯರ ವಿರುದ್ಧವೂ ಕೇಸ್
ಲಕ್ನೋ, ಅಕ್ಟೋಬರ್ 13: 10 ವರ್ಷದ ಬಾಲಕಿ ಮೇಲೆ ಸ್ವಂತ ತಂದೆಯೇ ಅತ್ಯಾಚಾರವೆಸಗಿ ಇತರರಿಗೆ ಅತ್ಯಾಚಾರಕ್ಕೆ ಅನುವು ಮಾಡಿಕೊಟ್ಟ ಮನುಕುಲವೇ ತಲೆತಗ್ಗಿಸುವಂತಹ ಘಟನೆ ಉತ್ತರಪ್ರದೇಶದಲ್ಲಿ ಬೆಳಕಿಗೆ ಬಂದಿದೆ.
ರಾಜ್ಯದ ಲಲಿತಪುರ ಜಿಲ್ಲೆಯಲ್ಲಿ 11 ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 28 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಸಂತ್ರಸ್ತೆಯ ತಂದೆ, ಸಮಾಜವಾದಿ ಪಕ್ಷದ (ಎಸ್ಪಿ) ಜಿಲ್ಲಾ ಅಧ್ಯಕ್ಷರು ಮತ್ತು ಭಾರತೀಯ ಸಮಾಜವಾದಿ ಪಕ್ಷದ (ಬಿಎಸ್ಪಿ) ಜಿಲ್ಲಾ ಅಧ್ಯಕ್ಷರು ಸೇರಿ 28 ಆರೋಪಿಗಳಾಗಿದ್ದಾರೆ.
ಸಂತ್ರಸ್ತೆಯು ಆಕೆಯ ತಂದೆ ತಾನು 6 ನೇ ತರಗತಿಯಲ್ಲಿ ಓದುತ್ತಿದ್ದಾಗ ಮೊದಲ ಬಾರಿಗೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿಕೊಂಡಿದ್ದಾಳೆ. ಅಂದಿನಿಂದ ಆಕೆಯ ತಂದೆ ತನ್ನ ಮೇಲೆ ಅನೇಕ ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ. ತನ್ನ ತಂದೆ ಇತರ ಕೆಲ ಜನರನ್ನು ವ್ಯಾಪಾರ ಉದ್ದೇಶಗಳಿಗಾಗಿ ಮನೆಗೆ ಕರೆದು ಆ ಜನರೊಂದಿಗೆ ಲೈಂಗಿಕ ಸಂಬಂಧವನ್ನು ಹೊಂದಲು ಒತ್ತಾಯಿಸುತ್ತಿದ್ದರು ಎಂದು ಬಾಲಕಿ ಆರೋಪಿಸಿದ್ದಾಳೆ.

ಬಾಲಕಿ ತನ್ನ ದೂರಿನಲ್ಲಿ ಸಮಾಜವಾದಿ ಪಕ್ಷದ ಜಿಲ್ಲಾಧ್ಯಕ್ಷ ತಿಲಕ್ ಯಾದವ್, ಆತನ ಮೂವರು ಕಿರಿಯ ಸಹೋದರರು, ಬಿಎಸ್ಪಿ ಜಿಲ್ಲಾ ಅಧ್ಯಕ್ಷ ದೀಪಕ್ ಅಹಿರ್ವಾರ್, ಬಿಎಸ್ಪಿ ಉಪಾಧ್ಯಕ್ಷ ನೀರಜ್ ತಿವಾರಿ ಮತ್ತು ಆಕೆಯ ಕುಟುಂಬದ ಕೆಲ ಸದಸ್ಯರ ಮೇಲೆ ಅತ್ಯಾಚಾರದ ಆರೋಪ ಮಾಡಿದ್ದಾಳೆ. ಘಟನೆ ಬಗ್ಗೆ ಯಾರಿಗಾದರೂ ಬಹಿರಂಗಪಡಿಸಿದರೆ ಆಕೆಯ ತಂದೆ ತನ್ನ ತಾಯಿಯನ್ನು ಕೊಲ್ಲುವ ಬೆದರಿಕೆಯನ್ನೂ ಹಾಕಿದ್ದರು ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ.
ಸಂತ್ರಸ್ತೆಯ ದೂರಿನ ಆಧಾರದ ಮೇಲೆ ಪೊಲೀಸರು ತಂದೆ ಸೇರಿದಂತೆ ಎಲ್ಲ ಆರೋಪಿಗಳ ವಿರುದ್ಧ ಸೆಕ್ಷನ್ 354, 376D, 323, 328, 506, 120B ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
"ನಿನ್ನೆ ತಡರಾತ್ರಿ 28 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹುಡುಗಿ ಅಪ್ರಾಪ್ತ ವಯಸ್ಕಳು ಮತ್ತು ಆಕೆಗೆ ಒಬ್ಬ ಸಹೋದರ ಕೂಡ ಇದ್ದಾನೆ. ಆಕೆಯ ಎಲ್ಲಾ ಹೇಳಿಕೆಗಳು ಮತ್ತು ನೀಡಿದ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ" ಎಂದು ಲಲಿತಪುರ ಎಎಸ್ಪಿ ಗಿರಿಜೇಶ್ ಕುಮಾರ್ ಹೇಳಿದರು.
"ಹುಡುಗಿಯ ಹೇಳಿಕೆಯನ್ನು ದಾಖಲಿಸಲಾಗುತ್ತಿದೆ. ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುವುದು. ಎಲ್ಲಾ ಕೋನಗಳನ್ನು ತನಿಖೆ ಮಾಡಲಾಗುತ್ತದೆ. ಏಕೆಂದರೆ ವಿಷಯವು ಬಹಳ ಸೂಕ್ಷ್ಮವಾಗಿದೆ. ಹೊಸ ಸಾಕ್ಷ್ಯಗಳು ಬೆಳಕಿಗೆ ಬಂದಂತೆ, ನಾವು ನಮ್ಮ ತನಿಖೆಯನ್ನು ಶ್ರದ್ಧೆಯಿಂದ ಮಾಡುತ್ತೇವೆ" ಎಂದು ಎಎಸ್ಪಿ ಗಿರಿಜೇಶ್ ಕುಮಾರ್ ಹೇಳಿದ್ದಾರೆ.












Click it and Unblock the Notifications