ಯುಪಿ: ಕರ್ಹಾಲ್‌ನ ಬಿಜೆಪಿ ಅಭ್ಯರ್ಥಿ ವಾಹನದ ಮೇಲೆ ದಾಳಿ
ಲಕ್ನೋ ಫೆಬ್ರವರಿ 16: ಉತ್ತರ ಪ್ರದೇಶದ ಮೈನ್‌ಪುರಿಯಲ್ಲಿ ಮಂಗಳವಾರ ರಾತ್ರಿ ಕೇಂದ್ರ ಸಚಿವ ಎಸ್‌ಪಿ ಬಘೇಲ್ ಅವರ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದೆ. ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌ಪಿ ಬಘೇಲ್ ಅವರು ಆ ಪ್ರದೇಶದಲ್ಲಿ ಪ್ರಚಾರಕ್ಕೆ ಹೋಗುತ್ತಿದ್ದಾಗ ಈ ದಾಳಿ ನಡೆದಿದೆ. ಅತ್ತಿಕುಲ್ಲಾಪುರ ಗ್ರಾಮದ ಬಳಿ ಎಸ್ಪಿ ಬಘೇಲ್ ಅವರ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಮೈನ್‌ಪುರಿ ಪೊಲೀಸರು ತಿಳಿಸಿದ್ದಾರೆ. ಇದರಲ್ಲಿ ಬಾಘೇಲ್‌ಗೆ ಯಾವುದೇ ಹಾನಿಯಾಗಿಲ್ಲ ಆದರೆ ಕೆಲವು ವಾಹನಗಳಿಗೆ ಹಾನಿಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಕರ್ಹಾಲ್‌ನಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೇಂದ್ರ ಕಾನೂನು ಖಾತೆ ರಾಜ್ಯ ಸಚಿವ ಎಸ್‌ಪಿ ಬಾಘೇಲ್ ಕಣಕ್ಕಿಳಿದಿದ್ದಾರೆ. ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಕೂಡ ಈ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಹೀಗಿರುವಾಗ ಇಡೀ ರಾಜ್ಯದ ಕಣ್ಣು ಈ ಕ್ಷೇತ್ರದ ಮೇಲೆ ನೆಟ್ಟಿದೆ. ಫೆಬ್ರವರಿ 20 ರಂದು ಯುಪಿ ಮೂರನೇ ಹಂತದ ಚುನಾವಣೆಯಲ್ಲಿ ಕರ್ಹಾಲ್‌ನಲ್ಲಿ ಮತದಾನ ನಡೆಯಲಿದ್ದು, ಈ ಸಮಯದಲ್ಲಿ ಪ್ರಚಾರ ಕಾರ್ಯ ಭರದಿಂದ ಸಾಗಿದೆ.

ರ್ಹಾಲ್‌ನ ಬಿಜೆಪಿ ಅಭ್ಯರ್ಥಿ ವಾಹನದ ಮೇಲೆ ದಾಳಿ
ಬಾಘೇಲ್ ಬೆಂಗಾವಲು ಪಡೆಯ ಮೇಲೆ ಎಸ್ಪಿ ದಾಳಿ ನಡೆಸಿದ್ದಾರೆ ಎಂದು ಭಾರತೀಯ ಜನತಾ ಪಕ್ಷ ಆರೋಪಿಸಿದೆ. ಕರ್ಹಾಲ್ ವಿಧಾನಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಎಸ್‌ಪಿ ಸಿಂಗ್ ಬಘೇಲ್ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯಿಂದ ಎಸ್‌ಪಿ ಅಭ್ಯರ್ಥಿ ಅಖಿಲೇಶ್ ಯಾದವ್ ಸೋಲಿನ ಅಂಚಿನಲ್ಲಿ ನಿಂತಿದ್ದಾರೆ ಎಂಬುದನ್ನು ತೋರಿಸುತ್ತದೆ ಎಂದು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಜನರ ಆಶೀರ್ವಾದದ ಮೇಲೆಯೇ ಹೊರತು ಗೂಂಡಾಗಳ ಭಯದಿಂದಲ್ಲ ಎಂಬುದನ್ನು ಎಸ್‌ಪಿ ಅರ್ಥಮಾಡಿಕೊಳ್ಳಬೇಕು. ಈ ಘಟನೆಯ ಕುರಿತು ಟ್ವೀಟ್ ಮಾಡಿರುವ ಯುಪಿ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಮೈನ್‌ಪುರಿಯ ಕರ್ಹಾಲ್‌ನಲ್ಲಿ ಬಿಜೆಪಿ ಅಭ್ಯರ್ಥಿ ಪ್ರೊಫೆಸರ್ ಎಸ್‌ಪಿ ಸಿಂಗ್ ಬಘೇಲ್ ಅವರ ಬೆಂಗಾವಲು ವಾಹನದ ಮೇಲೆ ನಡೆದ ದಾಳಿ ಅವರ ನೈಜ ಸ್ವಭಾವವನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಎಸ್ಪಿ ನಡುವೆ ಜಿದ್ದಾಜಿದ್ದಿ
ಉತ್ತರ ಪ್ರದೇಶದ ಮೈನ್‌ಪುರಿಯ ಕರ್ಹಾಲ್ ವಿಧಾನಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ಬಿಜೆಪಿ ಅಭ್ಯರ್ಥಿ ಆಗಿ ಕೇಂದ್ರ ಸಚಿವ ಎಸ್ ಪಿ ಸಿಂಗ್ ಬಾಘೇಲ್ ಅಖಾಡಕ್ಕೆ ಇಳಿದಿದ್ದಾರೆ.ಮೈನ್‌ಪುರಿಯು ಸಾಂಪ್ರದಾಯಿಕವಾಗಿ ಸಮಾಜವಾದಿ ಪಕ್ಷದ ಭದ್ರಕೋಟೆಯಾಗಿದೆ. ಈ ಲೋಕಸಭಾ ಕ್ಷೇತ್ರವು ಸತತ ಒಂಬತ್ತು ಅವಧಿಗಳಿಂದ ಎಸ್‌ಪಿ ಬಳಿ ಇದೆ. ಹಾಲಿ ಸಂಸದ ಮತ್ತು ಎಸ್‌ಪಿ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಐದನೇ ಬಾರಿಗೆ ಪ್ರತಿನಿಧಿಸುತ್ತಿದ್ದಾರೆ. ಪ್ರಸ್ತುತ, ಮೈನ್‌ಪುರಿ ಜಿಲ್ಲೆಯ ನಾಲ್ಕು ವಿಧಾನಸಭಾ ಸ್ಥಾನಗಳ ಪೈಕಿ ಮೂರು ಸ್ಥಾನಗಳನ್ನು ಎಸ್‌ಪಿ ಹೊಂದಿದೆ.ಯಾದವ್ ಪ್ರಾಬಲ್ಯದ ಕ್ಷೇತ್ರವಾದ ಕರ್ಹಾಲ್ ಅನ್ನು 2007 ರಿಂದ ಸೊಬರಣ್ ಸಿಂಗ್ ಯಾದವ್ ಪ್ರತಿನಿಧಿಸುತ್ತಿದ್ದಾರೆ. ಬಿಜೆಪಿಯು 2002 ರಲ್ಲಿ ತನ್ನ ಅಭ್ಯರ್ಥಿ ಸೋವರನ್ ಸಿಂಗ್ ಚುನಾವಣೆಯಲ್ಲಿ ಈ ಸ್ಥಾನವನ್ನು ಕೊನೆಯದಾಗಿ ಗೆದ್ದುಕೊಂಡಿತ್ತು. 2014 ರಲ್ಲಿ, ಮುಲಾಯಂ ಸಿಂಗ್ ಯಾದವ್ ಅವರು ಮೈನ್‌ಪುರಿ ಕ್ಷೇತ್ರವನ್ನು 3.25 ಲಕ್ಷ ಮತಗಳ ಅಂತರದಿಂದ ಗೆದ್ದರು, ಆದರೆ ನಂತರ ಸ್ಥಾನವನ್ನು ತೊರೆದರು (ಅಜಂಗಢವನ್ನು ಉಳಿಸಿಕೊಂಡರು). ಅವರ ಮೊಮ್ಮಗ ತೇಜ್ ಪ್ರತಾಪ್ ಯಾದವ್ 3.50 ಲಕ್ಷ ಮತಗಳ ಅಂತರದಿಂದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.
— MAINPURI POLICE (@mainpuripolice) February 15, 2022 |
ಗೆಲುವಿನ ವಿಶ್ವಾಸ
ಉತ್ತರ ಪ್ರದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ನಡೆಯುವ ಮತದಾನದ ಪೈಕಿ ಫೆಬ್ರವರಿ 10, ಫೆಬ್ರವರಿ 14 ಮತದಾನ ಪೂರ್ಣಗೊಂಡಿದ್ದು, ಎಲ್ಲಾ ಪಕ್ಷಗಳು ಗೆಲುವಿನ ವಿಶ್ವಾಸ ವ್ಯಕ್ತಪಡಿಸಿವೆ. ಇನ್ನೂ ಫೆಬ್ರವರಿ 20, ಫೆಬ್ರವರಿ 23, ಫೆಬ್ರವರಿ 27, ಮಾರ್ಚ್ 3 ಮತ್ತು ಮಾರ್ಚ್ 7ರಂದು ಮತದಾನ ನಡೆಯಲಿದೆ. ಅಂತಿಮವಾಗಿ ಮಾರ್ಚ್ 10ರಂದು ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ, ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ, ಕಾಂಗ್ರೆಸ್ ಮತ್ತು ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷದ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಡೆಯುತ್ತಿದೆ. ಮತದಾರರು ಯಾರ ಕೈಹಿಡಿಯುತ್ತಾರೆ ಕಾದು ನೋಡಬೇಕಿದೆ.
|
ಎಸ್‌ಪಿ ಭದ್ರಕೋಟೆಯಲ್ಲಿ ಅರಳುತ್ತಾ ಕಮಲ?
ಈ ಹಿಂದೆ 2017ರಲ್ಲಿ ಉತ್ತರ ಪ್ರದೇಶದಲ್ಲಿ 403 ವಿಧಾನಸಭೆಗಳಿಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅತಿಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರದ ಗದ್ದುಗೆ ಏರಿತ್ತು. ಒಟ್ಟು 403 ಕ್ಷೇತ್ರಗಳ ಪೈಕಿ ಬಿಜೆಪಿ 312 ಸ್ಥಾನಗಳನ್ನು ಗೆದ್ದಿತ್ತು. ಸಮಾಜವಾದಿ ಪಕ್ಷ 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ, ಬಹುಜನ ಸಮಾಜವಾದಿ ಪಕ್ಷವು 19 ಕ್ಷೇತ್ರಗಳಲ್ಲಿ ಗೆಲುವಿನ ಬಾವುಟ ಹಾರಿಸಿತ್ತು. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದ್ದು, ಕೇವಲ ಏಳು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿತ್ತು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications