ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಪ್ರಮಾಣವಚನಕ್ಕೆ ಮಾ.25ರ ಮುಹೂರ್ತ

|
Google Oneindia Kannada News

ಲಕ್ನೋ, ಮಾರ್ಚ್ 18: ಉತ್ತರ ಪ್ರದೇಶದಲ್ಲಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿ ಯೋಗಿ ಆದಿತ್ಯನಾಥ್ ಮಾರ್ಚ್ 25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಯುಪಿ ಸಿಎಂ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಇತರೆ ಕೇಂದ್ರ ಸಚಿವರು ಹಾಜರಾಗಲಿದ್ದಾರೆ.

ಉತ್ತರ ಪ್ರದೇಶ ಮುಖ್ಯಮಂತ್ರಿ ಪ್ರಮಾಣವಚನ ಕಾರ್ಯಕ್ರಮವು ಮಾರ್ಚ್ 25ರ ಶುಕ್ರವಾರ ಸಂಜೆ 4 ಗಂಟೆಗೆ ಲಕ್ನೋದಲ್ಲಿರುವ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕ್ತಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿದೆ. 50,000 ಆಸನಗಳ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ 200 ವಿವಿಐಪಿ ಆಸನಗಳ ವ್ಯವಸ್ಥೆಯೂ ಇದೆ.

ಉತ್ತರ ಪ್ರದೇಶದ ಯೋಗಿ 2.0 ಸರ್ಕಾರದ ಹೊಸ ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ?ಉತ್ತರ ಪ್ರದೇಶದ ಯೋಗಿ 2.0 ಸರ್ಕಾರದ ಹೊಸ ಸಂಪುಟದಲ್ಲಿ ಯಾರಿಗೆಲ್ಲ ಸಚಿವ ಸ್ಥಾನ?

ಪ್ರಧಾನಿ ಮೋದಿ ಮತ್ತು ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿಪಕ್ಷಗಳು ಸೇರಿದಂತೆ ಇತರ ಪ್ರಮುಖ ನಾಯಕರು ಪ್ರಮಾಣವಚನ ಕಾರ್ಯಕ್ರಮದಲ್ಲಿ ಹಾಜರಾಗುವ ನಿರೀಕ್ಷೆಯಿದೆ.

Uttar Pradesh Chief Minister Yogi Adityanath oath taking on March 25th

ಅದ್ಧೂರಿಯಾಗಿ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮ:

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಅದ್ಧೂರಿಯಾಗಿ ನಡೆಸಲು ಬಿಜೆಪಿ ಮುಂದಾಗಿದ್ದು, ಆಹ್ವಾನಿತರ ಪಟ್ಟಿಯನ್ನು ಸಿದ್ಧಪಡಿಸುತ್ತಿದೆ. ಅತಿಥಿಗಳಲ್ಲಿ "ಲಭರ್ತಿ" ಎಂದು ಕರೆಯಲ್ಪಡುವ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳು ಇರುತ್ತಾರೆ, ಅವರು ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದಾರೆ.

ಯುಪಿಯಲ್ಲಿ 255 ಕ್ಷೇತ್ರಗಳನ್ನು ಗೆದ್ದಿರುವ ಬಿಜೆಪಿ

2022ರಲ್ಲಿ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಎರಡನೇ ಬಾರಿ ಗೆಲುವಿನ ಬಾವುಟ ಹಾರಿಸಿದೆ. ರಾಜ್ಯದ 75 ಜಿಲ್ಲೆಗಳ 403 ಕ್ಷೇತ್ರಗಳಲ್ಲಿ ಸರ್ಕಾರ ರಚಿಸುವುದಕ್ಕೆ ಕನಿಷ್ಠ 202 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಬೇಕು. ಆದರೆ ಉತ್ತರ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ 255 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಬಿಜೆಪಿಗೆ ಸೆಡ್ಡು ಹೊಡೆದ ಸಮಾಜವಾದಿ ಪಕ್ಷವು 111 ಕ್ಷೇತ್ರಗಳಲ್ಲಿ ಗೆಲುವಿನ ಸೈಕಲ್ ಏರಿದೆ. ಅಪ್ನಾ ದಳ 12, ಬಹುಜನ ಸಮಾಜವಾದಿ ಪಕ್ಷ 1, ಜೆಡಿಎಲ್ 2, ನಿರ್ಬಲ್ ಇಂಡಿಯನ್ ಶೋಷಿತ ಹಮಾರಾ ಆಮ್ ದಳ 6, ರಾಷ್ಟ್ರೀಯ ಲೋಕ ದಳ 8, ಸುಹೇಲ್ದೇವ್ ಭಾರತೀಯ ಸಮಾಜ ಪಾರ್ಟಿ 6 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಮಾತ್ರ ಕೇವಲ 2 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಳ್ಳುವಂತೆ ಆಗಿದೆ.

English summary
Uttar Pradesh Chief Minister Yogi Adityanath oath taking on March 25th. Know More.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X